ರಣಜಿ ಪಂದ್ಯಾವಳಿ ಕೈಬಿಟ್ಟ BCCI :87 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಪಂದ್ಯ ರದ್ದು

Team Udayavani, Jan 30, 2021, 11:39 PM IST

ರಣಜಿ ಪಂದ್ಯಾವಳಿ ಕೈಬಿಟ್ಟ BCCI :87 ವರ್ಷದ ಇತಿಹಾಸದಲ್ಲಿ ಮೊದಲ ಬಾರಿಗೆ ಪಂದ್ಯ ರದ್ದು

ಹೊಸದಿಲ್ಲಿ : ದೇಶದ ಅತ್ಯುನ್ನತ ಹಾಗೂ ಐತಿಹಾಸಿಕ ಕ್ರಿಕೆಟ್‌ ಪಂದ್ಯಾವಳಿಯಾದ “ರಣಜಿ ಟ್ರೋಫಿ’ಯನ್ನು ಇದೇ ಮೊದಲ ಬಾರಿಗೆ ರದ್ದುಗೊಳಿಸಲು ಬಿಸಿಸಿಐ ನಿರ್ಧರಿಸಿದೆ. ಕಾರಣ, ಕೊರೊನಾ. ಬಹುತೇಕ ರಾಜ್ಯ ಕ್ರಿಕೆಟ್‌ ಮಂಡಳಿಗಳ ನಿರ್ಧಾರದಂತೆ 2020-21ನೇ ಸಾಲಿನ ರಣಜಿ ಪಂದ್ಯಾವಳಿಯನ್ನು ಕೈಬಿಡಲಾಗುತ್ತಿದೆ ಎಂದು ಬಿಸಿಸಿಐ ತಿಳಿಸಿದೆ.

ಆದರೆ “ರಣಜಿ ಒನ್‌ಡೇ’ ಎಂದೇ ಜನಪ್ರಿಯ ಗೊಂಡಿರುವ ವಿಜಯ್‌ ಹಜಾರೆ ಟ್ರೋಫಿ ಪಂದ್ಯಾವಳಿ, ಅಂಡರ್‌-19 ವಯೋಮಿತಿಯ ವಿನೂ ಮಂಕಡ್‌ ಟ್ರೋಫಿ ಹಾಗೂ ವನಿತೆಯರ ರಾಷ್ಟ್ರೀಯ ಏಕದಿನ ಪಂದ್ಯಾವಳಿ ಎಂದಿನಂತೆ ನಡೆ ಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ತಿಳಿಸಿದ್ದಾರೆ. ಇವೆಲ್ಲವೂ ಜೈವಿಕ ಸುರಕ್ಷಾ ವಲಯದಲ್ಲಿ ನಡೆಯಲಿದ್ದು, ದಿನಾಂಕವನ್ನು ಇನ್ನಷ್ಟೇ ನಿರ್ಧರಿಸಲಾಗುವುದು.

1934-35ರಿಂದ ಮೊದಲ್ಗೊಂಡ “ರಣಜಿ ಟ್ರೋಫಿ’ ಕ್ರಿಕೆಟ್‌ ಪಂದ್ಯಾವಳಿ 2019-20ನೇ ಋತುವಿನ ತನಕ ನಿರಾತಂಕವಾಗಿ ನಡೆದುಕೊಂಡು ಬಂದಿತ್ತು. 87 ವರ್ಷಗಳ ಭವ್ಯ ಇತಿಹಾಸದಲ್ಲಿ ಇದೇ ಮೊದಲ ಸಲ ರದ್ದುಗೊಳ್ಳುತ್ತಿರುವುದು ಕ್ರಿಕೆಟಿಗರಿಗೆ ಹಾಗೂ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಕ್ರಿಕೆಟ್‌ ಮಂಡಳಿಗಳ ಆಯ್ಕೆ
ರಣಜಿ ಮತ್ತು ವಿಜಯ್‌ ಹಜಾರೆ ಕ್ರಿಕೆಟ್‌ಗಳಲ್ಲಿ ಯಾವುದನ್ನು ಆಡಿಸಬೇಕು ಎಂಬ ಆಯ್ಕೆಯನ್ನು ಬಿಸಿಸಿಐ ರಾಜ್ಯ ಕ್ರಿಕೆಟ್‌ ಮಂಡಳಿಗಳ ಮುಂದಿಟ್ಟಿತ್ತು. ಇದಕ್ಕೆ ವಿಜಯ್‌ ಹಜಾರೆ ಟ್ರೋಫಿ ಪರ ಹೆಚ್ಚಿನ ಒಲವು ತೋರಲಾಯಿತು. ಇದರಂತೆಯೇ 2020-21ರ ಋತುವಿನ ರಣಜಿ ಪಂದ್ಯಾವಳಿಯನ್ನು ಕೈಬಿಡಲು ನಿರ್ಧರಿಸಲಾಯಿತು ಎಂದು ಜಯ್‌ ಶಾ ಹೇಳಿದರು.

ರಣಜಿ ಟ್ರೋಫಿ ಪಂದ್ಯಾವಳಿಗೆ ಕನಿಷ್ಠ 2 ತಿಂಗಳ ಕಾಲಾವಕಾಶ ಅಗತ್ಯವಿದ್ದು, ದೇಶದ ವಿವಿಧ ಕೇಂದ್ರಗಳಲ್ಲಿ ಜೈವಿಕ ಸುರಕ್ಷಾ ವಲಯವನ್ನು ನಿರ್ಮಿಸಿ ಇದನ್ನು ಆಡಿಸುವುದು ದೊಡ್ಡ ಸವಾಲು ಎಂಬುದು ಬಿಸಿಸಿಐ ಲೆಕ್ಕಾಚಾರ. ಇದಕ್ಕೀಗ ಸಮ ಯಾವಕಾಶವೂ ಇಲ್ಲವಾಗಿದೆ. ಮಾಮೂಲು ವೇಳಾ ಪಟ್ಟಿಯಂತೆ ಈ ವೇಳೆ ರಣಜಿ ಟ್ರೋಫಿ ಪಂದ್ಯಾವಳಿ ಅಂತಿಮ ಹಂತದಲ್ಲಿರುತ್ತದೆ.

ವೇತನ ಪಾವತಿ
ಕೂಟ ನಡೆಯದೇ ಹೋದರೂ ರಣಜಿ ಆಟಗಾರರಿಗೆ ವೇತನ ಪಾವತಿಸಲು ಬಿಸಿಸಿಐ ನಿರ್ಧರಿಸಿದೆ. ಪಂದ್ಯವೊಂದರ ಆಟಗಾರರ ಸಂಭಾವನೆ 1.5 ಲಕ್ಷ ರೂ.ಗಳಷ್ಟಾಗುತ್ತದೆ.

ಇದೇ ವೇಳೆ ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿಕೊಟ್ಟ ರಾಜ್ಯ ಕ್ರಿಕೆಟ್‌ ಮಂಡಳಿಗಳಿಗೆ ಜಯ್‌ ಶಾ ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.