
RBI Repo Rate: ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ-ರೆಪೋ ದರ ಯಥಾಸ್ಥಿತಿ ಕಾಯ್ದುಕೊಂಡ RBI
2023ರ ಮಾರ್ಚ್ ವರೆಗೆ 250 ಬೇಸಿಸ್ ಪಾಯಿಂಟ್ಸ್ ಗಳಷ್ಟು ಏರಿಕೆ ಮಾಡಿತ್ತು.
Team Udayavani, Jun 8, 2023, 10:25 AM IST

ನವದೆಹಲಿ: ರೆಪೋ ದರ ಹೆಚ್ಚಿಸುವ ಸಾಧ್ಯತೆ ಇದೆ ಎಂಬ ಮಾಧ್ಯಮಗಳ ವರದಿಯ ನಡುವೆಯೇ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಗುರುವಾರ (ಜೂನ್ 08) ಘೋಷಿಸಿದ್ದಾರೆ.
ಇದನ್ನೂ ಓದಿ:ಒಡಿಶಾದಲ್ಲಿ ಮತ್ತೊಂದು ದುರಂತ; ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು: ಆರು ಮಂದಿ ಸಾವು
ಈಗಾಗಲೇ ಸತತ ಆರು ಬಾರಿ ರೆಪೋ ದರದಲ್ಲಿ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಹಣಕಾಸು ನೀತಿ ಸಮಿತಿಯ ಮೂರು ದಿನಗಳ ಸಭೆಯಲ್ಲಿ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಲಾಗಿದೆ ಎಂದು ಆರ್ ಬಿಐ ಗವರ್ನರ್ ತಿಳಿಸಿದ್ದು, ಇದರೊಂದಿಗೆ ಗೃಹ, ವಾಹನಗಳ ಸಾಲಗಳ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
ದೇಶದಲ್ಲಿನ ಹಣದುಬ್ಬರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರ್ ಬಿಐ ಹಣಕಾಸು ನೀತಿ ಸಮಿತಿಯು ಕಳೆದ ವರ್ಷ ಮೇ ತಿಂಗಳಿನಿಂದ 2023ರ ಮಾರ್ಚ್ ವರೆಗೆ 250 ಬೇಸಿಸ್ ಪಾಯಿಂಟ್ಸ್ ಗಳಷ್ಟು ಏರಿಕೆ ಮಾಡಿತ್ತು.
ಜಾಗತಿಕ ವಿದ್ಯಾಮಾನಗಳ ಹಿನ್ನೆಲೆಯಲ್ಲಿ ಆರ್ಥಿಕ ಹಿಂಜರಿಕೆ ಭೀತಿ ಎದುರಾಗಿದೆ. ದೇಶದಲ್ಲಿನ ಹಣದುಬ್ಬರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರ್ ಬಿಐ ಹಲವು ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?

Asian Games: ವಿಶ್ವದಾಖಲೆಯೊಂದಿಗೆ ಮತ್ತೊಂದು ಚಿನ್ನಕ್ಕೆ ಗುರಿಯಿಟ್ಟ ಭಾರತದ ಶೂಟಿಂಗ್ ತಂಡ