ಶಿಕ್ಷಕರ ನೇಮಕಾತಿ: ತಾತ್ಕಾಲಿಕ ಪಟ್ಟಿಗೆ ಮಧ್ಯಾಂತರ ತಡೆ ನೀಡಿದ ಹೈಕೋರ್ಟ್
Team Udayavani, Dec 1, 2022, 7:05 AM IST
ಬೆಂಗಳೂರು: “ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಲ್ಲಿಕೆ ಗೊಂದಲದ ಹಿನ್ನೆಲೆಯಲ್ಲಿ ರಾಜ್ಯದ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ಮಧ್ಯಾಂತರ ತಡೆ ನೀಡಿದೆ.
ನೇಮಕ ಪ್ರಕ್ರಿಯೆಯಲ್ಲಿ 1:2ರಲ್ಲಿ ಆಯ್ಕೆಯಾಗಿ ಅರ್ಹತೆ ಇದ್ದರೂ ಮೀಸ ಲಾತಿ ಗೊಂದಲದಿಂದ ತಾತ್ಕಾಲಿಕ ಆಯ್ಕೆ ಪಟ್ಟಿ 1:1ರಲ್ಲಿ ಹೆಸರು ಪ್ರಕಟವಾಗದ ಉಡುಪಿಯ ಯಡ್ತಾಡಿ ಗ್ರಾಮದ ಅನಿತಾ ಸಹಿತ 40ಕ್ಕೂ ಅಧಿಕ ಮಹಿಳಾ ಹುದ್ದೆ ಆಕಾಂಕ್ಷಿಗಳು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾ| ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ, ಸಿಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಕಾರ್ಯದರ್ಶಿ ಸಹಿತ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ನ.18ರಂದು ಪ್ರಕಟಿಸಲಾಗಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಅರ್ಜಿದಾರರಿಗಿಂತ ಕಡಿಮೆ ಅಂಕ ಪಡೆದಿರುವವರ ಅಭ್ಯರ್ಥಿಗಳ ಹೆಸರುಗಳಿವೆ.
ಈ ಬಗ್ಗೆ ಡಿಡಿಪಿಐಗಳನ್ನು ವಿಚಾರಿಸಿದಾಗ ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ಪತಿಯ ಆದಾಯ/ಜಾತಿ ಪ್ರಮಾಣಪತ್ರದ ಬದಲಾಗಿ ತಂದೆಯ ಆದಾಯ/ಜಾತಿ ಪ್ರಮಾಣಪತ್ರವನ್ನು ಸಲ್ಲಿಸಿದ್ದಾರೆ ಎಂಬ ಕಾರಣಕ್ಕೆ ಅವರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಜತೆಗೆ, ಅಭ್ಯರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಸಾಮಾನ್ಯ ಆಭ್ಯರ್ಥಿಗಳ ವರ್ಗಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಸಾಮಾಜಿಕ ಉದ್ಯಮಕ್ಕೆ ಹುಬ್ಬಳ್ಳಿ ಮಾಡೆಲ್; ದೇಶಪಾಂಡೆ ಫೌಂಡೇಶನ್ ಅಭಿವೃದ್ಧಿ ಸಂವಾದ’ ಸಮಾವೇಶ
ಆರೋಗ್ಯವೇ ಭಾಗ್ಯ…ರುಚಿಕರವಾದ ವೆಜ್ ಗೋಲ್ಡ್ ಕಾಯಿನ್ ರೆಸಿಪಿ
ಆಪ್ ಕೌನ್ಸಿಲರ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಬಿಜೆಪಿಗೆ ಸಾಧ್ಯವಿಲ್ಲ ಎಂದ ಕೇಜ್ರಿವಾಲ್
ಅಜ್ಮೀರ್ ದರ್ಗಾ: ಗಂಗಾವತಿ ಕಾಂಗ್ರೆಸ್ ಮುಖಂಡರಿಂದ ಹೂ-ಚಾದರ್ ಸಲ್ಲಿಕೆ
ಮಧುಗಿರಿ: ಕರ್ತವ್ಯದಲ್ಲಿದ್ದಾಗಲೇ ಹೃದಯಘಾತದಿಂದ ಶುಶ್ರೂಷಕಿ ಮೃತ್ಯು