Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ:ರೆಪೋ ದರ ಯಥಾಸ್ಥಿತಿ: RBI
Team Udayavani, Dec 8, 2023, 10:35 AM IST
ಮುಂಬೈ: ಆರ್ ಬಿಐನ ಹಣಕಾಸು ನೀತಿ ಸಮಿತಿ ಸತತ ಐದನೇ ತಿಂಗಳಿನಲ್ಲಿಯೂ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧರಿಸಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶುಕ್ರವಾರ (ಡಿಸೆಂಬರ್ 08) ತಿಳಿಸಿದೆ.
ಇದನ್ನೂ ಓದಿ:Welcome to ‘Toxic’ World: ರಾಕಿಭಾಯ್ ಹೊಸ ಸಿನಿಮಾದ ಟೈಟಲ್ ಬಿಡುಗಡೆ
ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 6ರಂದು ಆರಂಭಗೊಂಡಿದ್ದ ಮೂರು ದಿನಗಳ ಕಾಲದ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರಿಂದ ಗೃಹ ಹಾಗೂ ವಾಹನ ಸಾಲದ ಇಎಂಐ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಮಧ್ಯಮ ಆರ್ಥಿಕ ಸ್ಥಿರತೆ ಮತ್ತು ಆರ್ಥಿಕ ಬೆಳವಣಿಗೆ ಬಗ್ಗೆ ನಿಗಾ ಇರಿಸಿದ್ದು, ಹಣದುಬ್ಬರವನ್ನು ಪರಿಶೀಲಿಸಲಾಗುತ್ತಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಒಮ್ಮತದ ನಿರ್ಧಾರ ತೆಗೆದುಕೊಂಡಿರುವುದಾಗಿ ದಾಸ್ ಹೇಳಿದರು. ಹಣದುಬ್ಬರದ ಕುರಿತು ನಿಗಾ ಇರಿಸಿದ್ದು, ತುರ್ತು ಸಂದರ್ಭದಲ್ಲಿ ವಿಶೇಷ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಕ್ತಿಕಾಂತ್ ದಾಸ್ ಈ ಸಂದರ್ಭದಲ್ಲಿ ತಿಳಿಸಿದರು.
ಜಾಗತಿಕ ಮಟ್ಟದಲ್ಲಿ ಆರ್ಥಿಕತೆ ಸ್ಥಿತಿಗತಿಯನ್ನು ಗಮನಿಸಲಾಗುತ್ತಿದೆ. ಕಳೆದ ವರ್ಷದಿಂದ ಹಣದುಬ್ಬರ ಕಡಿಮೆಯಾಗುತ್ತಿದ್ದು, ಇನ್ನೂ ಹಲವು ದೇಶಗಳಲ್ಲಿ ಹಣದುಬ್ಬರ ಏರುಗತಿಯಲ್ಲಿಯೇ ಇದೆ ಎಂದು ಆರ್ ಬಿಐ ಹೇಳಿದೆ.
ದೇಶದಲ್ಲಿ ಹಣದುಬ್ಬರವನ್ನು ನಿಯಂತ್ರಣಕ್ಕೆ ತರಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2022ರ ಮೇನಿಂದ ರೆಪೋ ದರವನ್ನು 250 ಬೇಸಿಸ್ ಪಾಯಿಂಟ್ಸ್ ಗಳಷ್ಟು ಹೆಚ್ಚಳ ಮಾಡಿತ್ತು. ಇದೀಗ ಹಣದುಬ್ಬರ ನಿಯಂತ್ರಣದಲ್ಲಿರುವ ನಿಟ್ಟಿನಲ್ಲಿ ಸತತ ಐದನೇ ಬಾರಿ ಶೇ.6.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಲು ಆರ್ ಬಿಐ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್