ಕಾಂಗ್ರೆಸ್‌ ಕಾರ್ಯಕರ್ತರಿಂದ ಗಲಭೆ ಹೆಚ್ಚಳ: ನಳಿನ್‌ ಕುಮಾರ್‌ ಕಟೀಲು

ಹತ್ಯೆಯಾದ BJP ಕಾರ್ಯಕರ್ತನ ಮನೆಗೆ ಭೇಟಿ, ಪರಿಹಾರ ವಿತರಣೆ

Team Udayavani, May 17, 2023, 7:26 AM IST

NALEEN

ಹೊಸಕೋಟೆ: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದ ಅನಂತರ ಗೂಂಡಾಗಿರಿ ಹೆಚ್ಚಾಗಿದೆ. ರಾಜ್ಯದ ಹಲವೆಡೆ ಕಾಂಗ್ರೆಸ್‌ ಕಾರ್ಯ ಕರ್ತರಿಂದ ಗಲಭೆ, ದೊಂಬಿ, ಹತ್ಯೆ, ಹಲ್ಲೆಗಳಂತಹ ಕೃತ್ಯಗಳು ನಡೆಯುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಆರೋಪಿಸಿದರು.

ತಾಲೂಕಿನ ನಂದಗುಡಿ ಹೋಬಳಿಯ ಡಿ. ಶೆಟ್ಟಹಳ್ಳಿ ಗ್ರಾಮದಲ್ಲಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರ ವಿತರಿಸಿದ ಅನಂತರ ಮಾಧ್ಯಮಗಳೊಂದಿಗೆ ಮಾತ ನಾಡಿದರು. ಫ‌ಲಿತಾಂಶ ಪ್ರಕಟವಾದ ಅನಂತರ ಬೇರೆ ಬೇರೆ ಜಿಲ್ಲೆಗಳಲ್ಲಿ ನಡೆದಿರುವ ಘಟನೆಗಳು ನಮ್ಮ ಗಮನಕ್ಕೆ ಬಂದಿವೆ. ನಮ್ಮ ಕಾರ್ಯಕರ್ತ ಕೃಷ್ಣಪ್ಪ ಅವರನ್ನು ಹತ್ಯೆ ಮಾಡಲಾಗಿದೆ. ಅವರ ಮಗ ಮತ್ತು ಪತ್ನಿ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ದೂರಿದರು.

ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋ ತ್ಸವ ಹೆಸರಲ್ಲಿ ಮನೆ ಮುಂದೆ ಪಟಾಕಿ ಹಚ್ಚಲು ಬಂದಾಗ ಸ್ವಲ್ಪ ದೂರ ಹಚ್ಚಿ ಎಂದು ಹೇಳಿದ್ದಕ್ಕೆ ಕೃಷ್ಣಪ್ಪ ಹಾಗೂ ಕುಟುಂಬದವರ ಮೇಲೆ ಹಲ್ಲೆ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡ ಕೃಷ್ಣಪ್ಪ ಸ್ಥಳದಲ್ಲೇ ಮೃತಪಟ್ಟರೆ, ಅವರ ಮಗ ಹಾಗೂ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕೃತ್ಯವನ್ನು ಖಂಡಿಸುತ್ತೇನೆ. ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜ್ಯದಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿದೆ. ಇದು ಗೂಂಡಾಗಿರಿಯ ಗ್ಯಾರಂಟಿ ಕಾರ್ಡ್‌ ಎಂದು ಟೀಕಿಸಿದರು.

ಕೈ ಕಟ್ಟಿ ಕೂರುವುದಿಲ್ಲ
ಪಕ್ಷದ ನಾಯಕರು ಯಾವ ರೀತಿ ಇರುತ್ತಾರೆಯೋ ಕಾರ್ಯಕರ್ತರೂ ಅದೇ ರೀತಿ ಹೋಗುತ್ತಾರೆ. ಇಂತಹ ಗೂಂಡಾ
ಗಿರಿಗಳನ್ನು ಸಾಕಷ್ಟು ನೋಡಿದ್ದೇವೆ. ನಾವು ಸಹ ಕೈ ಕಟ್ಟಿ ಕೂರುವುದಿಲ್ಲ. ಘಟನೆಯ ಹಿಂದೆ ಯಾರಿದ್ದಾರೆಯೋ ಅವರನ್ನು ತತ್‌ಕ್ಷಣ ಬಂಧಿಸಬೇಕು. ಇಲ್ಲದಿದ್ದರೆ ಪಕ್ಷದ ವತಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸುವುದು ಅನಿವಾರ್ಯ ಎಂದರು.

5 ಲ.ರೂ. ಪರಿಹಾರ
ಮಾಜಿ ಸಚಿವ ಎಂಟಿಬಿ ನಾಗರಾಜ್‌ ಮಾತನಾಡಿ, ಮೃತ ಕೃಷ್ಣಪ್ಪ ಅವರ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಲಾಗಿದೆ. ಪಕ್ಷದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ಘಟನೆ ಕುರಿತು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು. ಹತ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದರು. ಮಾಜಿ ಸಚಿವರಾದ ಕೆ.ಎಸ್‌. ಈಶ್ವರಪ್ಪ, ಭೈರತಿ ಬಸವರಾಜು, ಡಾ| ಅಶ್ವತ್ಥ ನಾರಾಯಣ, ಎಂಎಲ್ಸಿ ನಾರಾಯಣಸ್ವಾಮಿ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.