ಮಂಡ್ಯ: ಎರಡು ಬೈಕ್ಗಳ ನಡುವೆ ಡಿಕ್ಕಿ: ಸವಾರ ಸಾವು
Team Udayavani, Feb 13, 2021, 6:42 PM IST
ಮಂಡ್ಯ: ಮಳವಳ್ಳಿ-ಕೊಳ್ಳೇಗಾಲ ಮುಖ್ಯರಸ್ತೆಯ ರಾಷ್ಟ್ರೀಯ ಹೆದ್ದಾರಿ 209ರ ದಾಸನದೊಡ್ಡಿ ಗ್ರಾಮದ ಬಳಿ ಎರಡು ಬೈಕ್ಗಳ ನಡುವೆ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಹೊಂಬಾಳೇಗೌಡ ಪುತ್ರ ಹೊಂಬಾಳೇಗೌಡ (45) ಮೃತಪಟ್ಟ ಬೈಕ್ ಸವಾರ. ಈತ ದಾಸನದೊಡ್ಡಿ ಗ್ರಾಮದಿಂದ ಕೊಳ್ಳೇಗಾಲದ ಕಡೆಗೆ ತಮ್ಮ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದಿದೆ.
ತೀವ್ರವಾಗಿ ಗಾಯಗೊಂಡ ಹೊಂಬಾಳೇಗೌಡ ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮತ್ತೊಬ್ಬ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸ್ಥಳಕ್ಕೆ ಡಿವೈಎಸ್ಪಿ ಎಚ್. ಲಕ್ಷ್ಮೀನಾರಾಯಣಪ್ರಸಾದ್, ಸಿಪಿಐ ಡಿ.ಪಿ.ಧನರಾಜ್, ಪಿಎಸ್ಐ ಕೆ.ಎಂ.ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬoಧ ಮಳವಳ್ಳಿ ತಾಲೂಕಿನ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.