
ಐಸಿಸಿ ಏಕದಿನ ರ‍್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ
Team Udayavani, Mar 29, 2023, 6:35 PM IST

ಮುಂಬಯಿ : ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬುಧವಾರ ಬ್ಯಾಟ್ಸ್ ಮ್ಯಾನ್ ಗಳ ಪಟ್ಟಿಯಲ್ಲಿ ಒಂದು ಸ್ಥಾನ ಮೇಲೇರಿ ಎಂಟನೇ ಸ್ಥಾನದಲ್ಲಿದ್ದರೆ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಐಸಿಸಿ ಏಕದಿನ ರ‍್ಯಾಂಕಿಂಗ್‌ನಲ್ಲಿ ಬೌಲರ್‌ಗಳ ಪೈಕಿ 10 ಸ್ಥಾನಗಳ ಜಿಗಿತ ಕಂಡು 76ನೇ ಸ್ಥಾನದಲ್ಲಿದ್ದಾರೆ.
ಬ್ಯಾಟಿಂಗ್ ಚಾರ್ಟ್ ನಲ್ಲಿ ಪಾಕಿಸ್ಥಾನನದ ಬಾಬರ್ ಅಜಮ್ ಮೊದಲ ಸ್ಥಾನದಲ್ಲಿದ್ದರೆ, ದಕ್ಷಿಣ ಆಫ್ರಿಕಾದ ರಾಸ್ಸೀ ವ್ಯಾನ್ ಡೆರ್ ಡಸ್ಸೆನ್ 2 ನೇ ಸ್ಥಾನದಲ್ಲಿ,ಪಾಕ್ ನ ಇಮಾಮ್-ಉಲ್-ಹಕ್ 3 ನೇ ಸ್ಥಾನದಲ್ಲಿದ್ದಾರೆ. ಶುಭಮನ್ ಗಿಲ್ 5 ನೇ ಸ್ಥಾನದಲ್ಲಿ ಭಾರತದ ಅತ್ಯುತ್ತಮ ಬ್ಯಾಟ್ಸ್ ಮ್ಯಾನ್ ಆಗಿ ಉಳಿದಿದ್ದಾರೆ, ಆದರೆ ವಿರಾಟ್ ಕೊಹ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಭಾರತದ ಶ್ರೇಯಸ್ ಅಯ್ಯರ್ 24 ನೇ ಸ್ಥಾನದಲ್ಲಿ, ಶಿಖರ್ ಧವನ್ 35 ಸ್ಥಾನದಲ್ಲಿ, ಕೆ.ಎಲ್. ರಾಹುಲ್ 38 ನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾದ ಜೋಶ್ ಹೇಜಲ್‌ವುಡ್ ಟಾಪ್ 10 ಬೌಲರ್‌ಗಳ ಪಟ್ಟಿಯಲ್ಲಿ ಮೊದಲಿಗರಾಗಿದ್ದರೆ , ನ್ಯೂಜಿಲ್ಯಾಂಡ್ ನ ಟ್ರೆಂಟ್ ಬೌಲ್ಟ್ 2 ನೇ ಸ್ಥಾನ, ಭಾರತದ ವೇಗಿ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನದಲ್ಲಿದ್ದಾರೆ. ಆಸ್ಟ್ರೇಲಿಯಾದ ಸ್ಟಾರ್ಕ್ 4 ಮತ್ತು ಅಫ್ಘಾನಿಸ್ಥಾನದ ರಶೀದ್ ಖಾನ್ 5 ನೇ ಸ್ಥಾನದಲ್ಲಿದ್ದಾರೆ. ಭಾರತದ ಕುಲದೀಪ್ ಯಾದವ್ 23 ನೇ ಸ್ಥಾನ, ಜಸ್ಪ್ರೀತ್ ಬುಮ್ರಾ 26 ನೇ ಸ್ಥಾನ, ಮೊಹಮ್ಮದ್ ಶಮಿ 32 ನೇ ಸ್ಥಾನ, 42 ನೇ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್, 44 ನೇ ಸ್ಥಾನದಲ್ಲಿ ಯುಜುವೇಂದ್ರ ಚಾಹಲ್, 67 ನೇ ಸ್ಥಾನದಲ್ಲಿ ಭುವನೇಶ್ವರ್ ಕುಮಾರ್, ರವೀಂದ್ರ ಜಡೇಜಾ 78ನೇ ಸ್ಥಾನದಲ್ಲಿದ್ದಾರೆ.
ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯ 13 ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನವನ್ನು ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಆಕ್ರಮಿಸಿಕೊಂಡಿದ್ದಾರೆ. 2 ನೇ ಸ್ಥಾನದಲ್ಲಿ ಅಫ್ಘಾನ್ ಆಟಗಾರ ಮೊಹಮ್ಮದ್ ನಬಿ, 3 ನೇ ಸ್ಥಾನದಲ್ಲಿ ಅಫ್ಘಾನ್ ನ ರಶೀದ್ ಖಾನ್ ಇದ್ದಾರೆ.
ಟಾಪ್ ನ್ಯೂಸ್
