​​Devotees in Temples: ಸಾಲು ಸಾಲು ರಜೆ-ದೇಗುಲಗಳಲ್ಲಿ ಭಕ್ತಸಾಗರ

Team Udayavani, Apr 8, 2023, 6:42 AM IST

KOLLUR

ಬೆಳ್ತಂಗಡಿ/ಉಡುಪಿ/ಕೊಲ್ಲೂರು: ನಿರಂತರ ರಜೆಯ ಪರಿಣಾಮ ಕರಾವಳಿಯ ಬಹುತೇಕ ಪ್ರಮುಖ ದೇಗುಲಗಳಿಗೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದಿದ್ದಾರೆ. ಇನ್ನೆರಡು ದಿನ ರಜೆ ಇರುವ ಕಾರಣ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗುವ ನಿರೀಕ್ಷೆಯಿದೆ.
ಶುಕ್ರವಾರ ಗುಡ್‌ ಫ್ರೈಡೆ, ಶನಿವಾರ ವಾರಾಂತ್ಯ ಹಾಗೂ ರವಿವಾರ ರಜೆಯಾದ್ದರಿಂದ ವಿವಿಧ ಜಿಲ್ಲೆಗಳಿಂದ ಬಹಳಷ್ಟು ಭಕ್ತರು ಕರಾವಳಿಯ ದೇಗುಲಗಳಿಗೆ ಭೇಟಿ ನೀಡಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕದ್ರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ, ಉಡುಪಿ ಶ್ರೀಕೃಷ್ಣ ಮಠ, ಕೊಲ್ಲೂರು ಶ್ರೀ ಮುಕಾಂಬಿಕಾ ದೇಗುಲಗಳಿಗೆ ಭಾರೀ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿ ದರುಶನ ಪಡೆದು ಭೋಜನ ಪ್ರಸಾದ ಸ್ವೀಕರಿಸಿದ್ದಾರೆ.
ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ, ಮಣ್ಣಿನ ಹರಕೆಯ ಕ್ಷೇತ್ರ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಯೂ ಭಕ್ತರ ಸಂಖ್ಯೆ ಹೆಚ್ಚಳವಾಗಿದೆ.
20 ಸಾವಿರ ಭಕ್ತರು
ಉಡುಪಿ: ಶ್ರೀಕೃಷ್ಣಮಠಕ್ಕೆ ಸುಮಾರು 20,000 ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು. ಬೆಳಗ್ಗಿನಿಂದ ರಾತ್ರಿವರೆಗೂ ಕೃಷ್ಣ ಮಠದ ಮುಂಭಾಗದಿಂದ ಗೀತಾ ಮಂದಿರದ ಬಳಿಯ ಬಿರ್ಲಾ ಛತ್ರದವರೆಗೂ ಸರದಿ ಸಾಲಿತ್ತು. ಮಧ್ಯಾಹ್ನ ಮತ್ತು ರಾತ್ರಿ ಸುಮಾರು 12,000 ಭಕ್ತರು ಭೋಜನ ಪ್ರಸಾದ ಸ್ವೀಕರಿಸಿದರು.
ಎ. 7ರಿಂದ 9ರ ತನಕ ರಜಾ ದಿನವಾಗಿರುವುದರಿಂದ ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಭಕ್ತರು ಇಲ್ಲಿಗೆ ಆಗಮಿಸಿದ್ದಾರೆ.
ದೇಗುಲ ಹಾಗೂ ಖಾಸಗಿ ವಸತಿಗ್ರಹಗಳು ಭರ್ತಿಯಾಗಿದ್ದು, ತಂಗಲು ವ್ಯವಸ್ಥೆ ಇಲ್ಲದೇ ಅನೇಕ ಭಕ್ತರು ದೇಗುಲದ ಹೊರಾವರಣ, ಅಭಯಾರಣ್ಯದ ಪ್ರದೇಶಗಳನ್ನು ಆಶ್ರಯಿಸಬೇಕಾಯಿತು. ದೇಗುಲದ ವಾಹನ ನಿಲುಗಡೆ ಜಾಗವು ಭರ್ತಿಯಾಗಿದ್ದರಿಂದ ಅನೇಕ ಭಕ್ತರು ವಸತಿ ಗ್ರಹ ಅಲ್ಲದೇ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ವಾಹನ ನಿಲುಗಡೆಗೊಳಿಸಿದ್ದರಿಂದ ಸುಗಮ ವಾಹನ ಸಂಚಾರಕ್ಕೆ ತೊಡಕಾಯಿತು.
ಮಾರಣಕಟ್ಟೆ
ದೇಗುಲದಲ್ಲಿ ಭಕ್ತಸಾಗರ
ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದಲ್ಲಿ ಎ. 7ರಂದು ಅಪಾರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರು ಶ್ರೀದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇಗುಲದ ಅನುವಂಶೀಯ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ, ಸಿಬಂದಿ ಭಕ್ತರ ಅನಾಯಾಸ ದರ್ಶನಕ್ಕೆ ಸಹಕರಿಸಿದರು.

ಟಾಪ್ ನ್ಯೂಸ್

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Brahmavar

Padubidri: ಅಪಘಾತದ ಗಾಯಾಳು ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.