ಮಲ್ಲೇಶ್ವರಂ: 11.75 ಕೋಟಿ ರೂ. ವೆಚ್ಚದ ಸರಕಾರಿ ಪ್ರಾಥಮಿಕ ಶಾಲೆಗೆ ಶಂಕುಸ್ಥಾಪನೆ

ಮಹಿಳಾ ಬಹುಶಿಸ್ತೀಯ ಘಟಕ ಕಾಲೇಜಿನ ಪ್ರಥಮ ವಾರ್ಷಿಕೋತ್ಸವದಲ್ಲಿ ಪ್ರಯೋಗಾಲಯ ಉದ್ಘಾಟನೆ

Team Udayavani, Nov 28, 2022, 10:01 PM IST

1-addadad

ಬೆಂಗಳೂರು: ಮಲ್ಲೇಶ್ವರಂ 4ನೇ ಮುಖ್ಯರಸ್ತೆಯಲ್ಲಿ ಇರುವ ಸರಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿ 11.75 ಕೋಟಿ ರೂಪಾಯಿ ವೆಚ್ಚದ ನಾಲ್ಕು ಮಹಡಿಗಳ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಸ್ಥಳೀಯ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು.

ಮಲ್ಲೇಶ್ವರಂ 13ನೇ ಕ್ರಾಸ್ ನಲ್ಲಿರುವ, ಬೆಂಗಳೂರು ನಗರ ವಿ.ವಿ.ಗೆ ಸೇರಿದ ಮಹಿಳಾ ಬಹುಶಿಸ್ತೀಯ ಘಟಕ ಕಾಲೇಜಿನ ಪ್ರಥಮ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಪದವಿ ಕಾಲೇಜಿನ ಭೌತಶಾಸ್ತ್ರ ಮತ್ತು ಕಂಪ್ಯೂಟರ್ ವಿಜ್ಞಾನ ವಿಭಾಗಗಳ ನೂತನ ಪ್ರಯೋಗಾಲಯಗಳನ್ನು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, “ಈ ಆವರಣದಲ್ಲಿ ತಲೆ ಎತ್ತಲಿರುವ ನೂತನ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳೆರಡೂ ಇರಲಿವೆ. ಇಲ್ಲಿ ಅಂಗನವಾಡಿಯಿಂದ ಹತ್ತನೇ ತರಗತಿಯವರೆಗೂ ಹೈಟೆಕ್ ಗುಣಮಟ್ಟದ ಶಿಕ್ಷಣ ನೀಡಲಾಗುವುದು” ಎಂದರು.

ಈ ಆವರಣದಲ್ಲಿ ಅಂಗನವಾಡಿಯಿಂದ ಹಿಡಿದು ಸ್ನಾತಕೋತ್ತರ ಹಂತದವರೆಗೂ ಶಿಕ್ಷಣ ಲಭ್ಯವಿದೆ. ಮಹಿಳಾ ಘಟಕ ಕಾಲೇಜಿನಲ್ಲಿ ಆರಂಭದಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿನಿಯರು ಇದ್ದರು. ಈಗ ಈ ಸಂಖ್ಯೆಯು 300ಕ್ಕೂ ಹೆಚ್ಚಾಗಿದೆ. ಇಲ್ಲಿನ ಶೈಕ್ಷಣಿಕ ಗುಣಮಟ್ಟವು ಖಾಸಗಿ ಕಾಲೇಜುಗಳಿಗಿಂತ ಉತ್ತಮವಾಗಿದೆ ಎಂದು ಅವರು ನುಡಿದರು.

ಮಲ್ಲೇಶ್ವರ ಕ್ಷೇತ್ರವು ಶಿಕ್ಷಣಕ್ಕೆ ಹೆಸರಾದ ಕ್ಷೇತ್ರವಾಗಿದೆ. ಇದಕ್ಕೆ ತಕ್ಕಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ 25 ಅಂಗನವಾಡಿಗಳನ್ನು ಆಧುನೀಕರಣಗೊಳಿಸಲಾಗಿದೆ. ಜೊತೆಗೆ 13 ಪ್ರಾಥಮಿಕ ಶಾಲೆಗಳನ್ನು ಉನ್ನತ ದರ್ಜೆಗೆ ಏರಿಸಲಾಗಿದೆ ಎಂದು ಅವರು ಹೇಳಿದರು.

ಕಲಿಕೆ ಎಂಬುದು ಮೊದಲಿಗೆ ನಮ್ಮೊಳಗೆ ಆರಂಭ ಆರಂಭವಾಗಬೇಕು. ಹೀಗಾಗಿ, ವಿದ್ಯಾರ್ಥಿಗಳು ಸ್ವಯಂ ಕಲಿಕೆಗೆ ಒತ್ತುಕೊಡಬೇಕು ಎಂದು ಅವರು ಅಭಿಪ್ರಾಯ ಪಟ್ಟರು.

ಆಧುನಿಕ ಕಾಲಘಟ್ಟದಲ್ಲಿ ಕಲಿಕೆಗೆ ಬಹಳ ಮಹತ್ವವಿದೆ. ಮೊದಲಿಗೆ ಸ್ವಯಂ ಕಲಿಕೆಗೆ ಒತ್ತುಕೊಟ್ಟು ನಂತರ ಸಹಪಾಠಿಗಳೊಂದಿಗಿ ಕಲಿಕೆ ಹಾಗೂ ಗುರುಗಳ ಮುಖೇನ ಕಲಿಕೆಗೆ ಆದ್ಯತೆ ಕೊಡಬೇಕು ಎಂದು ಅವರು ವಿವರಿಸಿದರು.

ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ಪ್ರಸ್ತಾಪಿಸಿದ ಅವರು, ನಾಡುನುಡಿಯ ವಿಷಯ ಬಂದಾಗ ಗೋಕಾಕ್ ಚಳುವಳಿ ಎಂದೆಂದೂ ಪ್ರೇರಣೆಯಾಗಬೇಕು ಎಂದು ಅಭಿಪ್ರಾಯಪಟ್ಟರು.

ಬೆಂಗಳೂರು ನಗರ ವಿವಿ ಕುಲಪತಿ ಲಿಂಗರಾಜ ಗಾಂಧಿ, ಪ್ರಾಂಶುಪಾಲರಾದ ಜ್ಯೋತಿ ವೆಂಕಟೇಶ್, ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರವಿ, ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಗೋಕಾಕ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

exam

ಉಭಯ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮ ಆರಂಭ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ದ.ಕ. ಜಿಲ್ಲೆಯ 3 ಸಹಿತ ವಿವಿಧ ದೇಗುಲಗಳ ಅಭಿವೃದ್ಧಿಗೆ ನಿಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bangla ire

ಐರ್ಲೆಂಡ್‌ ವಿರುದ್ಧ ಬಾಂಗ್ಲಾಕ್ಕೆ ಸೋಲು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

ವಿದೇಶ ವ್ಯಾಪಾರ ನೀತಿ ಆತ್ಮನಿರ್ಭರ ಭಾರತಕ್ಕೆ ಒತ್ತು

e cigerette

ವಿದೇಶಿ ಸಿಗರೇಟ್‌ ವಶ

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

ಮತ ಜಾಗೃತಿ; ಟೀಕೆ ವೈಯಕ್ತಿಕ ಮಟ್ಟಕ್ಕೆ ಹೋಗಬಾರದು

arrest

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಸೆರೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ