ಆರ್ ಎಸ್ ಎಸ್ ವರಿಷ್ಠ ಮೋಹನ್ ಭಾಗವತ್ ಗೆ ಕೋವಿಡ್ ದೃಢ, ಆಸ್ಪತ್ರೆಗೆ ದಾಖಲು
ಹಿರಿಯ ವೈದ್ಯರು ನಿಗಾ ವಹಿಸುತ್ತಿರುವುದಾಗಿ ಆರ್ ಎಸ್ ಎಸ್ ಟ್ವೀಟ್ ನಲ್ಲಿ ಹೇಳಿದೆ.
Team Udayavani, Apr 10, 2021, 11:04 AM IST
ಮುಂಬಯಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವರಿಷ್ಠ ಮೋಹನ್ ಭಾಗವತ್ ಅವರಿಗೆ ಕೋವಿಡ್ 19 ಸೋಂಕು ದೃಢಪಟ್ಟಿರುವುದಾಗಿ ಶನಿವಾರ (ಏಪ್ರಿಲ್10) ಆರ್ ಎಸ್ ಎಸ್ ತನ್ನ ಅಧಿಕೃತ ಟ್ವೀಟರ್ ಖಾತೆಯಲ್ಲಿ ತಿಳಿಸಿದೆ.
ಮೋಹನ್ ಭಾಗವತ್ (70ವರ್ಷ) ಅವರಿಗೆ ಕೋವಿಡ್ ಸೋಂಕಿನ ಲಕ್ಷಣ ಕಂಡು ಬಂದಿರುವುದಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಟ್ವೀಟ್ ಮಾಡಿದೆ. ಭಾಗವತ್ ಗೆ ಕೋವಿಡ್ ಸೋಂಕು ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ನಾಗ್ಪುರದ ಕಿಂಗ್ಸ್ ವೇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿವರಿಸಿದೆ.
ಆಸ್ಪತ್ರೆಯಲ್ಲಿ ಭಾಗವತ್ ಅವರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದು, ಹಿರಿಯ ವೈದ್ಯರು ನಿಗಾ ವಹಿಸುತ್ತಿರುವುದಾಗಿ ಆರ್ ಎಸ್ ಎಸ್ ಟ್ವೀಟ್ ನಲ್ಲಿ ಹೇಳಿದೆ. ಮಾರ್ಚ್ 07ರಂದು ಭಾಗವತ್ ಮೊದಲ ಕೋವಿಡ್ ಲಸಿಕೆಯನ್ನು ಪಡೆದಿದ್ದರು.
ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ 19 ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷ ಕೋವಿಡ್ ಸೋಂಕು ಕಾಣಿಸಿಕೊಂಡ ಬಳಿಕ ಇದೀಗ ಎರಡನೇ ಕೋವಿಡ್ ಅಲೆ ಮತ್ತೆ ಕಾಣಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ