ಮಹಿಳಾ ವಿಶ್ವವಿದ್ಯಾಲಯ ಮುಚ್ಚುವುದು ವದಂತಿ : ಸಚಿವ ಕಾರಜೋಳ ಸ್ಪಷ್ಟನೆ

Team Udayavani, Jan 24, 2022, 11:49 AM IST

karajola

ಬೆಂಗಳೂರು : ವಿಜಯಪುರದಲ್ಲಿರುವ ಮಹಿಳಾ ವಿಶ್ವವಿದ್ಯಾಲಯ ಮುಚ್ಚುತ್ತಾರೆ ಎಂದು ವದಂತಿ ಹಬ್ಬಲಾಗುತ್ತಿದೆ ಎಂದು ಸಚಿವ ಗೋವಿಂದ ಕಾರಜೋಳ ಸೋಮವಾರ ಹೇಳಿಕೆ ನೀಡಿದ್ದಾರೆ.

ಆರ್ ಟಿ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಚ್ಚುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಉತ್ತರ ಕರ್ನಾಟಕದ ಮಹಿಳಾ ವಿವಿಯನ್ನು ಮುಚ್ಚುವುದಿಲ್ಲ.ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಸಿಎಂ ಕೂಡ ಉತ್ತರ ಕರ್ನಾಟಕದವರಾಗಿದ್ದಾರೆ.ಅಭಿವೃದ್ಧಿಯ ಕಡೆ ಗಮನ ಕೊಡುತಿದ್ದೇವೆ ಎಂದರು.

ಮಹಿಳಾ ವಿವಿಯನ್ನು ಅಭಿವೃದ್ಧಿ ಪಥಕ್ಕೆ ಕೊಂಡೊಯ್ಯುವದಕ್ಕೆ ನಮ್ಮ ಸರ್ಕಾರ ಬದ್ದವಾಗಿದೆ ಎಂದು ಗೋವಿಂದ ಕಾರಜೋಳ ಹೇಳಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾಗುವಂತೆ ಆ ಭಾಗದ ಹೆಣ್ಣುಮಕ್ಕಳು ಹೆಚ್ಚು, ಹೆಚ್ಚು ವಿದ್ಯಾವಂತರಾಗುವಂತೆ ಶೈಕ್ಷಣಿಕ ವ್ಯವಸ್ಥೆಯನ್ನು ಉನ್ನತೀಕರಿಸಲು ತನ್ಮೂಲಕ ಸುಸಂಸ್ಕೃತ, ಸುಶಿಕ್ಷಿತ ಸಮಾಜವನ್ನು ನಿರ್ಮಿಸಿ ಸ್ವಾವಲಂಬಿ ಮಹಿಳೆಯರನ್ನು ಉತ್ತೇಜಿಸುವ ಉದಾತ್ತ ಉದ್ದೇಶದಿಂದ ಪ್ರಾರಂಭವಾದ ವಿಜಯಪುರದ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದರು.

ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಆ ಭಾಗದ ಜನಪ್ರತಿನಿಧಿಯಾಗಿ ಮತ್ತು ಜನಸಮುದಾಯದ ಆಶೋತ್ತರಗಳನ್ನು ಈಡೇರಿಸುವ ಮತ್ತು ಜನರ ಅಪೇಕ್ಷೆ, ನಿರೀಕ್ಷೆಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸುವ ಅಳಿಲುಸೇವೆಯ ಮೂಲಕ ವಿಶ್ವ ವಿದ್ಯಾಲಯದ ಅಭಿವೃದ್ಧಿಗೆ ಕೊಡುಗೆ ನೀಡುವ ಸೌಭಾಗ್ಯವು ನನ್ನದಾಗಿದೆ. ಈ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಕೇವಲ ಒಂದೇ ಜಿಲ್ಲೆ ಅಲ್ಲ. ಹದಿಮೂರು ಜಿಲ್ಲೆಗಳು ಈ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿವೆ. ಈ ಮಹಿಳಾ ವಿಶ್ವ ವಿದ್ಯಾಲಯವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ ಎಂದು ಪುನರ್ ನಾಮಕರಣ ಮಾಡಿ ವಚನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದ ಅಕ್ಕಮಹಾದೇವಿಯವರಿಗೆ ಗೌರವ ಸಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷದ ಸರ್ಕಾರಕ್ಕೆ ಸಲ್ಲುತ್ತದೆ. ಶೈಕ್ಷಣಿಕ ವ್ಯವಸ್ಥೆಯನ್ನು ಉತ್ತಮಪಡಿಸುವ ಸದುದ್ದೇಶದಿಂದ ಪ್ರಾರಂಭವಾಗಿರುವ ಮಹಿಳಾ ವಿಶ್ವ ವಿದ್ಯಾಲಯವನ್ನು ಮುಚ್ಚಲಾಗುವುದು ಎಂಬ ಸುಳ್ಳು ವದಂತಿಗಳನ್ನು ಯಾರೂ ಹರಡಬಾರದು ಮತ್ತು ಇಂತಹ ಸುಳ್ಳುವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.