ಮೊದಲ ಏಕದಿನ: ವೆಂಕಟೇಶ್ ಅಯ್ಯರ್ ಪಾದಾರ್ಪಣೆ ; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ
Team Udayavani, Jan 19, 2022, 3:08 PM IST
ಪಾರ್ಲ್: ಪ್ರವಾಸಿ ಭಾರತ ತಂಡದ ವಿರುದ್ಧ ಬುಧವಾರ ಇಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಭಾರತ ತಂಡದ ಪರ ಆಲ್‌ರೌಂಡರ್ ವೆಂಕಟೇಶ್ ಅಯ್ಯರ್ ಪಾದಾರ್ಪಣ ಪಂದ್ಯವನ್ನು ಆಡುತ್ತಿದ್ದಾರೆ.
ಟೆಸ್ಟ್ ಸರಣಿಯಲ್ಲಿ ಮಿಂಚಿದ ಎಡಗೈ ವೇಗಿ ಮಾರ್ಕೊ ಜಾನ್ಸೆನ್ ದಕ್ಷಿಣ ಆಫ್ರಿಕಾ ತಂಡಕ್ಕೆ ಪಾದಾರ್ಪಣೆ ಮಾಡಿದ್ದಾರೆ.
15.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿದೆ. ಜಾನ್ನೆಮನ್ ಮಲನ್ 6 ರನ್ ಗಳಿಸಿ ಬುಮ್ರಾ ಗೆ ವಿಕೆಟ್ ಒಪ್ಪಿಸಿದರು. 27 ಗಳಿಸಿದ್ದ ಕ್ವಿಂಟನ್ ಡಿ ಕಾಕ್ ಅವರನ್ನು ಆರ್.ಅಶ್ವಿನ್ ಕ್ಲೀನ್ ಬೌಲ್ಡ್ ಮಾಡಿದರು. ನಾಯಕ ಟೆಂಬಾ ಬವುಮಾ 17 ರನ್ ಗಳಿಸಿ ಆಟವಾಡುತ್ತಿದ್ದಾರೆ.
ಭಾರತ: ಕೆಎಲ್ ರಾಹುಲ್ (ನಾಯಕ ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿ.ಕೀ), ವೆಂಕಟೇಶ್ ಅಯ್ಯರ್, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್.
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ )ಕ್ವಿಂಟನ್ ಡಿ ಕಾಕ್ (ವಿ.ಕೀ), ಜಾನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, , ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಲುಂಗಿ ಎನ್‌ಗಿಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೋತ ಡೆಲ್ಲಿ ಕ್ಯಾಪಿಟಲ್ಸ್, ಪ್ಲೇಆಫ್ ಗೇರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು
ಐಪಿಎಲ್ 2022: ಈ ಮೂವರು ವೇಗಿಗಳು ಕಮಾಲ್ ಮಾಡಿದ್ದಾರೆಂದ ದಿನೇಶ್ ಕಾರ್ತಿಕ್
ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್ಸನ್ ವಿರುದ್ಧ ಗೆದ್ದ ಪ್ರಗ್ನಾನಂದ
ಡೆಲ್ಲಿ-ಮುಂಬೈ ಮುಖಾಮುಖಿ; ಆರ್ಸಿಬಿ ಭವಿಷ್ಯ ನಿರ್ಧರಿಸಲಿದೆ
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರಿದ ರಾಜಸ್ಥಾನ್ ರಾಯಲ್ಸ್