ಆನ್‌ಲೈನ್‌ ಮೂಲಕ ಮದ್ಯ ಮಾರಾಟ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌


Team Udayavani, Feb 20, 2021, 9:50 PM IST

ಆನ್‌ಲೈನ್‌ ಮೂಲಕ ಮದ್ಯ ಮಾರಾಟ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್‌ ಮೂಲಕ ಮದ್ಯ ಮಾರಾಟದ ಅನುಮತಿಗೆ ಸಂಬಂಧಿಸಿದ ಮೇಲ್ಮನವಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

ಆನ್‌ಲೈನ್‌ ಮೂಲಕ ಮಧ್ಯ ಮಾರಾಟಕ್ಕೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಏಕಸದಸ್ಯ ನ್ಯಾಯಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಚೆನ್ನೈ ಮೂಲದ ಎಚ್‌ಐಪಿ ಬಾರ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾ. ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾ. ವಿ. ಶ್ರೀಶಾನಂದ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿ ಆದೇಶಿಸಿದೆ.

ವಿಚಾರಣೆ ಬಳಿಕ ಮೇಲ್ಮನವಿಯನ್ನು ಪುರಸ್ಕರಿಸಲು ನಿರಾಕರಿಸಿದ ವಿಭಾಗೀಯ ನ್ಯಾಯಪೀಠ ಕರ್ನಾಟಕ ಅಬಕಾರಿ ಕಾಯ್ದೆ-1965ರ ಅಡಿ ಅನುಮತಿ ಅಥವಾ ಪರವಾನಗಿ ನೀಡದ ಹೊರತು ಆನ್‌ಲೈನ್‌ನಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂಬ ಏಕಸದಸ್ಯ ನ್ಯಾಯಪೀಠದ ತೀರ್ಪುನ್ನು ಎತ್ತಿಹಿಡಿದಿದೆ.

ಅಬಕಾರಿ ಕಾಯ್ದೆಯಡಿ ಆನ್‌ಲೈನ್‌ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಮತ್ತು ಕಾಯ್ದೆಯಡಿ ಬರುವ ಪಾನೀಯಗಳ ಮಾರಾಟಕ್ಕೆ ಲೈಸನ್ಸ್‌ ಕಡ್ಡಾಯವಾಗಿದೆ. ಹಾಗಾಗಿ ಆನ್‌ಲೈನ್‌ ಮದ್ಯ ಮಾರಾಟಕ್ಕೆ ನೀಡಿದ್ದ ಅನುಮತಿ ರದ್ದು ಮಾಡಿರುವುದು ಸರಿಯಾಗಿಯೇ ಇದೆ, ಆ ಕುರಿತು ಏಕಸದಸ್ಯ ನ್ಯಾಯಪೀಠದ ತೀರ್ಪಿನಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ವಿಭಾಗೀಯ ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ:ಬರದ ನಾಡಿನಲ್ಲೊಬ್ಬಳು ‘ಭಗೀರಥೆ’…ಜಲಕ್ರಾಂತಿಗೆ ಸಾಕ್ಷಿಯಾದಳು 19 ವರ್ಷದ ತರುಣೆ  

ಮದ್ಯಪಾನ ಮಾನವನ ಆರೋಗ್ಯಕ್ಕೆ ಹಾನಿಕರ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಕುಟುಂಬಗಳು ಹಾಗೂ ಸಮಾಜಕ್ಕೆ ಕಳಂಕವಾಗಿದೆ. ಆನ್‌ಲೈನ್‌ ಮಾರಾಟದಿಂದ ಅಪ್ರಾಪ್ತರು ಸೇರಿ ಮದ್ಯಪಾನದ ಚಟಕ್ಕೆ ದಾಸರಾಗುತ್ತಿರುವ ಯುವಪೀಳಿಗೆಯ ನಿಯಂತ್ರಣ ಸಾಧ್ಯವಿಲ್ಲ. ಆನ್‌ಲೈನ್‌ನಲ್ಲಿ ಮದ್ಯ ಖರೀದಿಸುವವರ ವಯಸ್ಸು ಗುರುತಿಸುವುದು ಹಾಗೂ ವಹಿವಾಟಿನ ಮೇಲ್ವಿಚಾರಣೆ ನಡೆಸುವುದು ಕಷ್ಟವಾಗಲಿದೆ ಎಂದು ಹೈಕೋರ್ಟ್‌ನ ಏಕಸದಸ್ಯಪೀಠ 2019ರ ಸೆ.18ರಂದು ತೀರ್ಪು ನೀಡಿತ್ತು.

ಆನ್‌ಲೈನ್‌ ಮೂಲಕ ಮದ್ಯ ಮಾರಾಟಕ್ಕೆ ಯಾವುದೇ ಅನುಮತಿ ಪಡೆಯುವ ಅವಶ್ಯಕತೆ ಇಲ್ಲ. ಶೋಕಾಸ್‌ ನೋಟಿಸ್‌ ನೀಡದೆ ಏಕಾಏಕಿ ಅನುಮತಿ ಪತ್ರ ವಾಪಸ್‌ ಪಡೆದಿರುವುದು ಕಾನೂನು ಬಾಹಿರವಾಗಿದೆ. ನಮ್ಮ ವಹಿವಾಟಿನಲ್ಲಿ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಿರುವುದು ಸಂವಿಧಾನದ ಕಲಂ 14 ಮತ್ತು 19 (1) (ಜಿ) ಅಡಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಅರ್ಜಿದಾರ ಸಂಸ್ಥೆ ವಾದಿಸಿತ್ತು.

ಪ್ರಕರಣದ ಹಿನ್ನೆಲೆ:
ಅರ್ಜಿದಾರ ಸಂಸ್ಥೆಗೆ ಡೈರಿ ಉತ್ಪನ್ನಗಳನ್ನು ಹೊರತುಪಡಿಸಿ ಆನ್‌ಲೈನ್‌ ಮೂಲಕ ಸಿದ್ಧ ಆಹಾರ ಪದಾರ್ಥಗಳು ಮತ್ತು ಪಾನೀಯಗಳನ್ನು ಮಾರಾಟ ಮಾಡಲು ಸರ್ಕಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಪ್ರಕಾರ ಅನುಮತಿ ನೀಡಿತ್ತು. ಈ ಮಧ್ಯೆ 2017ರ ಆ. 1ರಂದು ಅಬಕಾರಿ ಇಲಾಖೆ ಆಯುಕ್ತರು ಅರ್ಜಿದಾರ ಸಂಸ್ಥೆಗೆ ಬಿಯರ್‌, ವೈನ್‌ ಸೇರಿ ಭಾರತ ಮತ್ತು ವಿದೇಶಗಳ ಮದ್ಯ ಮಾರಾಟ ನಡೆಸಲು ಅನುಮತಿ ಪತ್ರ ನೀಡಿದ್ದರು. ಬಳಿಕ ಅನುಮತಿ ವಾಪಸ್‌ ಪಡೆಯಲಾಗಿತ್ತು. ಆನ್‌ಲೈನ್‌ ಮದ್ಯ ಮಾರಾಟ ಸ್ಥಗಿತಗೊಳಿಸಿರುವ ಕುರಿತು ಪ್ರಮಾಣ ಪತ್ರ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಏಕಸದಸ್ಯಪೀಠ 2019ರಲ್ಲಿ ಅವರ ಅರ್ಜಿಯನ್ನು ವಜಾಗೊಳಿಸಿ, ಅಬಕಾರಿ ಇಲಾಖೆ ನಿರ್ಧಾರವನ್ನು ಎತ್ತಿಹಿಡಿದಿತ್ತು . ಹಾಗಾಗಿ ಕಂಪನಿ ಮೇಲ್ಮನವಿಯನ್ನು ಸಲ್ಲಿಸಿತ್ತು.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.