ಶಾಲಾ ಶಿಕ್ಷಣ: ಮಕ್ಕಳ ಜೀವನಕ್ಕೆ ಸುಭದ್ರ ಬುನಾದಿಯಾಗಲಿ


Team Udayavani, May 29, 2023, 5:44 AM IST

school student

ಸೋಮವಾರ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ ಗೊಳ್ಳಲಿದ್ದು ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಪುನರಾರಂಭಗೊಳ್ಳಲಿವೆ. ಮೊದಲ 2 ದಿನಗಳ ಕಾಲ ಶಾಲೆಗಳಲ್ಲಿ ಸಿದ್ಧತ ಕಾರ್ಯಗಳು ನಡೆಯಲಿದ್ದರೆ ಬುಧವಾರದಿಂದ ವಿದ್ಯಾರ್ಥಿಗಳಿಗೆ ತರಗತಿಗಳು ನಡೆಯಲಿವೆ.
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣವನ್ನು ಮಕ್ಕಳ ಶೈಕ್ಷಣಿಕ ಜೀವನದ ಮೊದಲ ಹೆಜ್ಜೆಗಳೆಂದೇ ಪರಿಗಣಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳನ್ನು ತರಗತಿಯ ಶಿಕ್ಷಣಕ್ಕೆ ಒಗ್ಗಿಕೊಳ್ಳುವಂತೆ ಮಾಡುವ ಮತ್ತು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗೆ ವೇದಿಕೆಯನ್ನೊದಗಿಸಿಕೊಡುವ ಮೂಲಕ ಅವರ ಭವಿಷ್ಯಕ್ಕೆ ಈ ಹಂತದಲ್ಲಿಯೇ ಭದ್ರವಾದ ಬುನಾದಿ ಹಾಕುವ ಕೆಲಸ ಶಾಲೆಗಳ ಶಿಕ್ಷಕರು ಮತ್ತು ಮಕ್ಕಳ ಹೆತ್ತವರಿಂದಾಗಬೇಕು.

ಇತ್ತೀಚಿನ ವರ್ಷಗಳಲ್ಲಿ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಿಗೆ ಪ್ರಬಲ ಪೈಪೋಟಿ ನೀಡುವ ಜತೆಯಲ್ಲಿ ಫ‌ಲಿತಾಂಶದಲ್ಲೂ ಗಮನಾರ್ಹ ಸಾಧನೆ ತೋರುತ್ತಿವೆ. ಈ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳತ್ತ ಮಕ್ಕಳ ಹೆತ್ತವರು ದೃಷ್ಟಿ ಹರಿಸತೊಡಗಿದ್ದು, ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಸೇರ್ಪಡೆಗೊಳಿಸಲು ಆಸಕ್ತಿ ತೋರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ. ಕಳೆದ ದಶಕದ ಅವಧಿಯಲ್ಲಿ ಶಿಕ್ಷಣದಲ್ಲಿ ಮಹತ್ವದ ಮಾರ್ಪಾ ಡುಗಳನ್ನು ಮಾಡಲಾಗಿದ್ದು ಮಕ್ಕಳು ಕಲಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳು ವಂತಾಗಲು ವಿವಿಧ ಉಪಕ್ರಮಗಳನ್ನು ಜಾರಿಗೆ ತರಲಾಗಿದೆ. ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಸರಕಾರ ರೂಪಿಸಿರುವ ಎಲ್ಲ ಯೋಜನೆಗಳ ಜಾರಿಯಲ್ಲೂ ಶಿಕ್ಷಕರು ಮಹತ್ವದ ಪಾತ್ರವನ್ನು ನಿರ್ವಹಿ ಸುತ್ತಿದ್ದು, ಸಹಜವಾಗಿಯೇ ಫ‌ಲಿತಾಂಶಗಳು ಗೋಚರಿಸತೊಡಗಿವೆ.

ಇವೆಲ್ಲದರ ಹೊರತಾಗಿಯೂ ಸರಕಾರಿ ಶಾಲೆಗಳಲ್ಲಿನ್ನೂ ಮೂಲ ಸೌಕರ್ಯಗಳ ಕೊರತೆ ಕಾಡುತ್ತಿದೆ. ಸುಭದ್ರವಾದ ಕಟ್ಟಡ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಅತ್ಯಗತ್ಯವಾಗಿರುವ ಸಾಧನ, ಸಲಕರಣೆಗಳು, ಶೌಚಾಲಯ…ಹೀಗೆ ಹಲವಾರು ಕೊರತೆ, ಸಮಸ್ಯೆಗಳು ಸರಕಾರಿ ಶಾಲೆಗಳ ಶೈಕ್ಷಣಿಕ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತಿವೆ. ಈ ನಿಟ್ಟಿನಲ್ಲಿ ಸರಕಾರ ಇನ್ನಷ್ಟು ಹೆಚ್ಚಿನ ಗಮನ ಹರಿಸಬೇಕಿದೆ. ಈ ಬಾರಿ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಸರಕಾರ ಒಪ್ಪಿರುವುದರಿಂದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಅಷ್ಟೇನೂ ಬಾಧಿಸದು ಎಂದು ನಿರೀಕ್ಷಿಸಲಾಗಿದೆ. ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಪಾಲಿಗೆ ಆಶಾಕಿರಣವಾಗಿರುವ ಸರಕಾರಿ ಶಾಲೆಗಳನ್ನು ಅದರಲ್ಲೂ ಕನ್ನಡ ಮಾಧ್ಯಮ ಶಾಲೆಗಳು ಇನ್ನಷ್ಟು ಸಶಕ್ತವಾಗಿ ಮುನ್ನಡೆಯುವಂತಾಗಲು ಕೇವಲ ಸರಕಾರ ಮಾತ್ರವಲ್ಲದೆ ಸಮಾಜ ದಿಂದಲೂ ಸಹಕಾರ ಮತ್ತು ಪ್ರೋತ್ಸಾಹದ ಅಗತ್ಯವಿದೆ.

ಇನ್ನು ಖಾಸಗಿ ಶಾಲೆಗಳು ಕೂಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವಲ್ಲಿ ಮಹತ್ತರವಾದ ಪಾತ್ರವನ್ನು ನಿರ್ವಹಿಸುತ್ತ ಬಂದಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆಯಿಂದಾಗಿಯೇ ಶಿಕ್ಷಣದಲ್ಲಿ ಕರ್ನಾಟಕ ದೇಶದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗಿದೆ.

ಈ ಬಾರಿಯ ಶೈಕ್ಷಣಿಕ ವರ್ಷ ಯಾವುದೇ ವಿವಾದ, ಗೊಂದಲಗಳಿಲ್ಲದೆ ಸಾಂಗವಾಗಿ ಪೂರ್ಣಗೊಂಡು ದೇಶದ ಭಾವೀ ಪ್ರಜೆಗಳಾಗಿರುವ ಮಕ್ಕಳ ಮುಂದಿನ ಶೈಕ್ಷಣಿಕ ಜೀವನಕ್ಕೆ ಭದ್ರವಾದ ತಳಪಾಯವನ್ನು ಹಾಕುವಂತಾಗಲಿ. 2023-24ರ ಶೈಕ್ಷಣಿಕ ವರ್ಷ ಮಕ್ಕಳು ಮತ್ತು ಶಿಕ್ಷಕರ ಪಾಲಿಗೆ ಆಶಾದಾಯಕವಾಗಿರಲಿ.

ಟಾಪ್ ನ್ಯೂಸ್

tdy-18

AsianGames: ಒಂದು ಮೊಬೈಲ್‌ಗಾಗಿ ಸಾವಿರಾರು ಕಸದಬ್ಯಾಗ್‌ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

delta

Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್‍ಗೆ GST ಬಾಕಿ ಕುರಿತು ನೋಟಿಸ್

Politics: 32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಪ್ರತಾಪ್ ಸಿಂಗ್ ಬಾಜ್ವಾ

Politics: 32 ಆಪ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕೇಜ್ರಿವಾಲ್ ಗೆ ಬಾಜ್ವಾ ಸಂದೇಶ

karwar

Karwar; ಶೀಘ್ರದಲ್ಲೇ ಕಾರವಾರ ಬಳಿ‌ ಹೆದ್ದಾರಿ ಟನಲ್ ಪುನರಾರಂಭ ಸಾಧ್ಯತೆ

Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಭಾರತ

Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

river…

Cauvery: ಎರಡೆರಡು ಬಂದ್‌ ಸರಿಯಾದ ನಿರ್ಧಾರವಲ್ಲ

terrorism

Terrorism: ಉಗ್ರರ ಆಸ್ತಿ ಜಪ್ತಿ: ಭಾರತದಿಂದ ವಿಶ್ವರಾಷ್ಟ್ರಗಳಿಗೆ ಎಚ್ಚರಿಕೆಯ ಕರೆಗಂಟೆ

asiad india

Asiad: ಏಷ್ಯಾಡ್‌ನಿಂದ ಭಾರತದ ಕ್ರೀಡಾಚಹರೆ ಬದಲಾಗುವ ಭರವಸೆ

krs

Cauvery ಅನ್ಯಾಯ: ಪರಿಹಾರ ಸೂತ್ರ ಬೇಕೇ ಬೇಕು

CANADA PM

Justin Trudeau: ಕೆನಡಾ ಪ್ರಧಾನಿಯ ಬಾಲಿಶ ವರ್ತನೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

puttakkana makkalu team outing

ಪುಟ್ಟಕ್ಕನ ಮಕ್ಕಳ ಔಟಿಂಗ್

tdy-18

AsianGames: ಒಂದು ಮೊಬೈಲ್‌ಗಾಗಿ ಸಾವಿರಾರು ಕಸದಬ್ಯಾಗ್‌ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

delta

Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್‍ಗೆ GST ಬಾಕಿ ಕುರಿತು ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.