ಈಗಿನಿಂದಲೇ ಶ್ರಮಿಸಿ; ರಾಜ್ಯ ಬಿಜೆಪಿ ನಾಯಕರಿಗೆ ವರಿಷ್ಠರ ಸೂಚನೆ
Team Udayavani, Dec 7, 2022, 7:33 AM IST
ಬೆಂಗಳೂರು: ಮುಂಬರುವ ವಿಧಾನ ಸಭೆ ಚುನಾವಣೆಗೆ ಈಗಿನಿಂದಲೇ ಸಿದ್ಧರಾಗುವಂತೆ ಮತ್ತು ಸಂಘಟನೆಯಲ್ಲಿ ಚುರುಕು ಮೂಡಿಸುವಂತೆ ರಾಜ್ಯದ ನಾಯಕರಿಗೆ ಬಿಜೆಪಿಯ ವರಿಷ್ಠರು ಸೂಚನೆ ನೀಡಿದ್ದಾರೆ.
ಸೋಮವಾರ ಆರಂಭವಾಗಿದ್ದ ಎರಡು ದಿನಗಳ ಬಿಜೆಪಿ ಪದಾಧಿಕಾರಿಗಳ ಸಭೆ ಮಂಗಳವಾರ ಸಂಜೆ ಮುಗಿದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಗಳ ಬಿಜೆಪಿ ಮುಖಂಡರಿಗೆ ಕೆಲವು ಹೊಣೆಗಾರಿಕೆ ನೀಡಿದ್ದಾರೆ. 2024ರ ಲೋಕಸಭೆ ಚುನಾವಣೆಗೂ ಈಗಿನಿಂದಲೇ ಸಿದ್ಧತೆ ರೂಪಿಸಲು ಸೂಚಿಸಿರುವ ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವಂತೆ ಸೂಚಿಸಿದ್ದಾರೆ.
ಎರಡು ದಿನಗಳ ಸಭೆಯಲ್ಲಿ ಮುಖ್ಯವಾಗಿ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಳ ಬಗ್ಗೆ ಚರ್ಚೆಯಾಗಿದೆ. ಕರ್ನಾಟಕ, ತ್ರಿಪುರಾ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರಲ್ಲಿ ಕರ್ನಾಟಕ, ತ್ರಿಪುರಾ, ಮಧ್ಯಪ್ರದೇಶಗಳಲ್ಲಿ ಬಿಜೆಪಿ ಆಡಳಿತದಲ್ಲಿದ್ದರೆ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಆಳ್ವಿಕೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಎಲ್ಲ ರಾಜ್ಯಗಳು ಪ್ರಮುಖವಾಗಿರುವುದರಿಂದ ಈಗಿನಿಂದಲೇ ವಿಧಾನಸಭೆ, ಲೋಕಸಭೆ ಚುನಾ ವಣೆಗೆ ಸಿದ್ಧರಾಗುವಂತೆ ಸೂಚಿಸಲಾಗಿದೆ.
150 ಸ್ಥಾನ ಗೆಲ್ಲುವ ಗುರಿ
ಕರ್ನಾಟಕದ ವಿಧಾನಸಭೆ ಚುನಾವಣೆ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಿದ್ದು, ಇದನ್ನು ಎದುರಿಸಲು ಅಗತ್ಯ ಕಾರ್ಯತಂತ್ರ ರೂಪಿಸಿ ಜನರ ವಿಶ್ವಾಸ ಗಳಿಸುವತ್ತ ಮುಂದಾಗುವಂತೆ ನಿರ್ದೇಶನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಗುಜರಾತ್, ಹಿಮಾಚಲ ಪ್ರದೇಶದ ಅನಂತರ ಕರ್ನಾಟಕ ನಮ್ಮ ಗುರಿ. 150 ಸ್ಥಾನದ ಗುರಿ ತಲುಪಲು ಬೇಕಾದ ಕಾರ್ಯತಂತ್ರ ರೂಪಿಸಿ ಅದರ ಅನುಷ್ಠಾನದತ್ತ ಗಮನಹರಿಸಿ ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಜನಪರ ಯೋಜನೆಗಳ ಅನುಷ್ಠಾನ, ಜನಸ್ಪಂದನೆ ಯಾತ್ರೆ ಸೇರಿದಂತೆ ವಿಧಾನಸಭೆ ಚುನಾವಣೆ ನಿಟ್ಟಿನಲ್ಲಿ ಈವರೆಗೆ ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಭೆಯಲ್ಲಿ ವಿವರಿಸಿದರು.
ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ಅನಂತರ ಕರ್ನಾಟಕದಲ್ಲಿ ವಾರ್ ರೂಂ ಸ್ಥಾಪನೆ, ಅದರ ಕಾರ್ಯವೈಖರಿ, ಹೊಣೆಗಾರಿಕೆ ಮತ್ತಿತರ ವಿಚಾರಗಳು ಸಭೆಯಲ್ಲಿ ಚರ್ಚೆಯಾದವು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ
ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್ಗಳ ತೆರವಿಗೆ ಮುಂದಾದ ಅಧಿಕಾರಿಗಳು
ಹು-ಧಾ ಕೇಂದ್ರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಮಂತ್ರ ಪಠಣ
ಶಿವಾಜಿ, ಬಸವೇಶ್ವರ, ಬುದ್ಧ, ಗಾಂಧೀಜಿಯನ್ನೇ ಬಿಡದವರು ನನ್ನನ್ನು ಬಿಡುತ್ತಾರಾ: ಕುಮಾರಸ್ವಾಮಿ
ಕಲಿಕೆಯ “ಜಂಬೋ” ಅವಕಾಶ: ಪೋದಾರ್ ಲರ್ನ್ ಸ್ಕೂಲ್
MUST WATCH
ಹೊಸ ಸೇರ್ಪಡೆ
ಲೋಕಾಪುರ:ಹಿಂದೂ-ಮುಸ್ಲಿಂ ಭಾವೈಕ್ಯತೆ ಬೆಸೆವ ಜ್ಞಾನೇಶ್ವರ ಮಠ
ಹೊರಬರಲಿದೆ ಒನ್ ಪ್ಲಸ್ ಕಂಪನಿಯ ಮೊದಲ ಟ್ಯಾಬ್.. ಏನಿದರ ವಿಶೇಷತೆ..?
Health Tips: ಜೇನು ತುಪ್ಪ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ…
ಲಂಚಕ್ಕೆ ಬೇಡಿಕೆ: ಕೇಂದ್ರ ಪುರಾತತ್ವ ಇಲಾಖೆಯ ಮೂವರು ಅಧಿಕಾರಿಗಳು ಸಿಬಿಐ ಬಲೆಗೆ
ಆನೆಗೊಂದಿ-ಸಾಣಾಪೂರ ಭಾಗದ ಅನಧಿಕೃತ ಹೊಟೇಲ್ಗಳ ತೆರವಿಗೆ ಮುಂದಾದ ಅಧಿಕಾರಿಗಳು