ಕ್ಷತ್ರಿಯ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ: ಸಿಎಂ ಭರವಸೆ

ಸೂಕ್ತ ಅನುದಾನ ಮೀಸಲು, ಮುಂದಿನ ಬಜೆಟ್‌ನಲ್ಲೇ ಘೋಷಣೆ: ಕ್ಷತ್ರಿಯ ಸಮಾವೇಶ

Team Udayavani, Jan 29, 2023, 11:44 PM IST

ಕ್ಷತ್ರಿಯ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ: ಸಿಎಂ ಭರವಸೆ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ಕ್ಷತ್ರಿಯ ಸಮುದಾಯದ ಕುಲಕಸುಬುಗಳ ಅಭಿ ವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ ಸೂಕ್ತ ಅನುದಾನ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ನಗರದ ಅರಮನೆ ಮೈದಾನದಲ್ಲಿ ರವಿವಾರ ಕರ್ನಾಟಕ ಕ್ಷತ್ರಿಯ ಒಕ್ಕೂಟ ಹಮ್ಮಿಕೊಂಡಿದ್ದ ಕ್ಷತ್ರಿಯ ಸಮಾಜದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉದ್ದೇಶಿತ ಸಮುದಾಯದಲ್ಲಿ ಸಣ್ಣ ಸಣ್ಣ ವರ್ಗಗಳು ಈಗಲೂ ಪ್ರಾಮಾಣಿಕವಾಗಿ ತಮ್ಮ ಕುಲಕಸುಬುಗಳನ್ನು ಮುನ್ನಡೆಸಿಕೊಂಡು ಬರುತ್ತಿವೆ. ಅವುಗಳನ್ನು ಪ್ರೋತ್ಸಾಹಿಸುವುದರ ಜತೆಗೆ ಅವಲಂಬಿತ ಕುಟುಂಬಗಳ ಶ್ರೇಯೋಭಿವೃದ್ಧಿ ಸರಕಾರದ ಕರ್ತವ್ಯ. ಈ ಹಿನ್ನೆಲೆಯಲ್ಲಿ ಬರುವ ಬಜೆಟ್‌ನಲ್ಲಿ ಪ್ರತ್ಯೇಕ ನಿಗಮ ಸ್ಥಾಪನೆ ಜತೆಗೆ ಸೂಕ್ತ ಅನುದಾನ ನೀಡಲಾಗುವುದು ಎಂದು ಪ್ರಕಟಿಸಿದರು.

ಕ್ಷತ್ರಿಯ ಸಮಾಜ ಇಲ್ಲದಿ ದ್ದರೆ ಭಾರತೀಯರು ಒಗ್ಗಟ್ಟಿ ನಿಂದ ಇರಲು ಸಾಧ್ಯವಾಗು ತ್ತಿರಲಿಲ್ಲ. ಹಿಂದೂ ಸಮಾಜ ಸುರಕ್ಷಿತವಾಗಿರಲು ಕ್ಷತ್ರಿಯ ಸಮಾಜ ಕಾರಣ. ಇವರಿಗೆ ಯುದ್ಧದಲ್ಲಿ ಶತ್ರುಗಳನ್ನು ಎದುರಿಸಲು ಕತ್ತಿ ಹಿಡಿದೂ ಗೊತ್ತಿದೆ ಎಂದರು.

ಕ್ಷತ್ರಿಯ ಸಮಾಜಗಳ ಒಕ್ಕೂಟವು ಸಣ್ಣ ಪುಟ್ಟ ಪಂಗಡಗಳ ಅಭ್ಯುದಯ ಸಹಿತ ಹಲವು ಬೇಡಿಕೆಗಳನ್ನು ಮುಂದಿಟ್ಟು ಕಾನೂನು ರೀತ್ಯಾ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಕ್ಷತ್ರಿಯ ಸಮಾಜದ ಸಮುದಾಯ ಭವನಕ್ಕೆ ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಕ್ಷತ್ರಿಯ ಸಮಾಜದ 38 ಪಂಗಡಗಳನ್ನು ಒಗ್ಗೂಡಿಸಿರುವುದು ಸ್ವಾಗತಾರ್ಹ. ಕ್ಷತ್ರಿಯರು ಸದಾ ದೇಶಪ್ರೇಮಿಗಳಾಗಿದ್ದರು. ಭಾರತ ದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯ ಸಂದರ್ಭದಲ್ಲಿ ಕ್ಷತ್ರಿಯ ವಂಶಗಳ ನೂರಾರು ರಾಜರು ತಮ್ಮ ರಾಜತ್ವವನ್ನು ತೊರೆದು ಭಾರತ ಒಕ್ಕೂಟದ ಮುಖ್ಯವಾಹಿನಿಯಲ್ಲಿ ಸೇರ್ಪಡೆಗೊಳ್ಳುವ ಬಹುದೊಡ್ಡ ತ್ಯಾಗ ಮಾಡಿ¨ªಾರೆ ಎಂದು ಶ್ಲಾ ಸಿದರು.

ಕ್ಷತ್ರಿಯರ ನಡೆ ವಿಧಾನಸೌಧಕ್ಕೆ
ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್‌. ಅಶ್ವತ್ಥ ನಾರಾಯಣ ಮಾತನಾಡಿ, ನಾಡಿನ ರಕ್ಷಣೆ ಹಾಗೂ ಸಂಸ್ಕೃತಿ ಪರಂಪರೆಗಳ ಹಿರಿಮೆಗೆ ಕ್ಷತ್ರಿಯರ ಕೊಡುಗೆ ಅಪಾರವಾದದು. ಕ್ಷತ್ರಿಯರ ನಡೆ, ರಾಜಧಾನಿಯ ಕಡೆ ಎಂಬ ಘೋಷವಾಕ್ಯದೊಂದಿಗೆ ಈ ಸಮಾವೇಶ ನಡೆಯುತ್ತಿದೆ. ಅದಕ್ಕೂ ಮೀರಿ ಕ್ಷತ್ರಿಯರ ನಡೆ ವಿಧಾನಸೌಧದ ಒಳಕ್ಕೂ ಮುಂದುವರಿಯಬೇಕು ಎಂದು ಆಶಿಸಿದರು.

ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರಕಾರವು ಕ್ಷತ್ರಿಯರ ಹಿತರಕ್ಷಣೆಗೆ ಬದ್ಧವಾಗಿದ್ದು, ಅದಕ್ಕೆ ಪೂರಕವಾಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಖಂಡ ಭಾರತ ನಿರ್ಮಾಣಕ್ಕೆ ಕ್ಷತ್ರಿಯರ ಕೊಡುಗೆ ಏನೆಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ. ನಮ್ಮ ಧರ್ಮ, ಭಾಷೆ ಹಾಗೂ ಭೂಪ್ರದೇಶದ ರಕ್ಷಣೆಗೆ ಹೆಚ್ಚಿನ ಕೊಡುಗೆ ನೀಡಿರುವ ಕ್ಷತ್ರಿಯರ ಬೇಡಿಕೆಗಳನ್ನು ಈಡೇರಿಸಲು ಸರಕಾರ ಬದ್ಧವಾಗಿದೆ ಎಂದರು.

ಶಾಸಕರಾದ ಬಂಡೆಪ್ಪ ಕಾಶೆಂಪುರ, ಅರವಿಂದ ಲಿಂಬಾವಳಿ, ಸಂಸದ ಪಿ.ಸಿ. ಮೋಹನ್‌ ಮತ್ತಿತರರ ಮಾತನಾಡಿದರು. ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಉದಯ್‌ ಸಿಂಗ್‌, ತಿಗಳರ ಜನಾಂಗದ ಮುಖಂಡ ಸುಬ್ಬಣ್ಣ ಮತ್ತಿತರರು ಉಪಸ್ಥಿತರಿದ್ದರು.

ಘೋರಿಯನ್ನು ಸೋಲಿಸಿದವರು: ಅರುಣ್‌ ಸಿಂಗ್‌
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಮಾತನಾಡಿ, ಹಿಂದುತ್ವದ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿದ್ದವರು ಕ್ಷತ್ರಿಯರು. ಮೊಹಮ್ಮದ್‌ ಘೋರಿಯನ್ನು ಸತತ 17 ಬಾರಿ ಸೋಲಿಸಿ ಹಿಮ್ಮೆಟ್ಟಿಸಿದವರು ರಾಣಾ ಪ್ರತಾಪ್‌ ಸಿಂಗ್‌. ಮುಂಬರುವ ಪೀಳಿಗೆಗಳಿಗೆ ಈ ಮಹಾಪುರುಷರು ಮತ್ತು ದೇಶದ ಇತಿಹಾಸವನ್ನು ಪರಿಚಯಿಸುವುದು ನಮ್ಮ ಕರ್ತವ್ಯ ಎಂದರು.

ದೇಶದ ನೂರಾರು ವರ್ಷಗಳ ಐತಿಹಾಸಿಕ ಮತ್ತು ಪಾರಂಪರಿಕ ಮೂರ್ತಿಗಳು ಕಳವಾಗಿದ್ದವು. ಅವುಗಳ ಪೈಕಿ 2014ರ ವರೆಗೆ ಕೇವಲ 13 ಮೂರ್ತಿಗಳು ವಾಪಸ್‌ ತರಲಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಈಚೆಗೆ ಒಟ್ಟಾರೆ 354 ಮೂರ್ತಿಗಳನ್ನು ವಿದೇಶದಿಂದ ಭಾರತಕ್ಕೆ ವಾಪಸ್‌ ತರುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ರಾಮ ಮಂದಿರಕ್ಕೆ ಭೂಮಿ ಪೂಜೆಯೂ ಮುಗಿದಿದ್ದು, 2024ರಲ್ಲಿ ಭವ್ಯ ಮಂದಿರ ತಲೆಯೆತ್ತಲಿದೆ ಎಂದು ಹೇಳಿದರು.

ಇಡೀ ಸಮಾಜದ ಬೆಳವಣಿಗೆಗೆ ಜ್ಞಾನದ ಕತ್ತಿ ಹಿಡಿಯುವುದೂ ಗೊತ್ತಿದೆ. ರಾಮ, ಕೃಷ್ಣ, ಸಾಮ್ರಾಟ್‌ ಅಶೋಕ, ರಾಣಾ ಪ್ರತಾಪ್‌ ಸಿಂಗ್‌, ಶಿವಾಜಿ ಮಹಾರಾಜ್‌ ಹೀಗೆ ಮೊದಲಾದ ನೂರಾರು ಧೀರರು ಶೂರರು ಆಳಿದ್ದಾರೆ. ಅಂತೆಯೇ ಸ್ವಾಮಿ ವಿವೇಕಾನಂದರೂ ಕ್ಷತ್ರಿಯರು. ಇವರು ಜ್ಞಾನದ ಕತ್ತಿ ಹಿಡಿದು ಜಗತ್ತಿಗೇ ದಾರಿದೀಪವಾದರು.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.