ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: 9 ವರ್ಷಗಳ ಬಳಿಕ ಆರೋಪಿಯ ಬಂಧನ
Team Udayavani, Jul 17, 2023, 5:53 AM IST
ಮಂಗಳೂರು: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರಿನ ಕಣ್ಣೂರು ಅಡ್ಯಾರ್ ಕರ್ಮಾರ್ ಜುಮ್ಮಾ ಮಸೀದಿ ಬಳಿ ನಿವಾಸಿ ಸೈಯದ್ ಹಸೈನಾರ್ ಆಲಿಯಾಸ್ ಹಸೈನ್(35) ಬಂಧಿತ ಆರೋಪಿ. ಈತ 2012ರಲ್ಲಿ ಯುವತಿಯೋರ್ವಳು ಲೇಡಿಹಿಲ್ ಸಮೀಪ ಫ್ಲ್ಯಾಟ್ ಕಡೆಗೆ ಹೋಗುತ್ತಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಉರ್ವ ಠಾಣೆಗೆ ಯುವತಿ ದೂರು ನೀಡಿದ್ದಳು.
ಆರೋಪಿಯನ್ನು ಬಂಧಿಸಲಾಗಿತ್ತು. ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಈತನಿಗೆ 2014ರ ಅ.18ರಂದು 4 ತಿಂಗಳ ಕಾರಾಗೃಹ ಶಿಕ್ಷೆ ತೀರ್ಪು ಪ್ರಕಟವಾಗಿತ್ತು. ಆರೋಪಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ವಾರಂಟ್ ಹೊರಡಿಸಲಾಗಿತ್ತು. ಈತನನ್ನು ಶನಿವಾರ ಉರ್ವ ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
MUST WATCH
ಹೊಸ ಸೇರ್ಪಡೆ