1,000ಕ್ಕೂ ಅಧಿಕ ಅಂಕ ಜಿಗಿತ ಕಂಡ ಮುಂಬೈ ಷೇರುಪೇಟೆ ಸೆನ್ಸೆಕ್ಸ್; ನಷ್ಟ ಗಳಿಸಿದ ಷೇರು ಯಾವುದು
ಎನ್ ಎಸ್ ಇ ನಿಫ್ಟಿ 312.35 ಅಂಕಗಳಷ್ಟು ಏರಿಕೆಯೊಂದಿಗೆ 16,975.35 ಅಂಕಗಳಲ್ಲಿ ವಹಿವಾಟು ಅಂತ್ಯ
Team Udayavani, Mar 16, 2022, 4:47 PM IST
ಮುಂಬಯಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಧಾನ ಮಾತುಕತೆ ಯಶಸ್ವಿಯಾಗಲಿದೆ ಎಂಬ ಭರವಸೆಯ ಪರಿಣಾಮ ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಬುಧವಾರ (ಮಾರ್ಚ್ 16) 1,000ಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ಮತ್ತೆ 56,000 ಅಂಕಕ್ಕೆ ಏರುವ ಮೂಲಕ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಭಾರತದ ರಾಜಕೀಯದಲ್ಲಿ ಫೇಸ್ ಬುಕ್ ನ ಹಸ್ತಕ್ಷೇಪಕ್ಕೆ ಕೇಂದ್ರ ಕಡಿವಾಣ ಹಾಕಲಿ: ಸೋನಿಯಾ
ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ 1,039.80 ಅಂಕ ಏರಿಕೆಯಾಗಿದ್ದು, 56,816.65 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ 312.35 ಅಂಕಗಳಷ್ಟು ಏರಿಕೆಯೊಂದಿಗೆ 16,975.35 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಆಲ್ಟ್ರಾಟೆಕ್ ಸಿಮೆಂಟ್ ಷೇರು ಶೇ.5ರಷ್ಟು ಲಾಭಗಳಿಸಿದ್ದು, ಆ್ಯಕ್ಸಿಸ್ ಬ್ಯಾಂಕ್, ಇಂಡಸ್ ಇಂಡ್ ಬ್ಯಾಂಕ್, ಎಚ್ ಡಿಎಫ್ ಸಿ , ಬಜಾಜ್ ಫಿನ್ ಸರ್ವ್, ಇನ್ಫೋಸಿಸ್, ಬಜಾಜ್ ಫೈನಾನ್ಸ್ ಷೇರುಗಳು ಕೂಡಾ ಲಾಭಗಳಿಸಿದೆ.
ಮತ್ತೊಂದೆಡೆ ಸನ್ ಫಾರ್ಮಾ ಹಾಗೂ ಪವರ್ ಗ್ರಿಡ್ ಷೇರುಗಳು ನಷ್ಟ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಯಲ್ಲಿ ಟೋಕಿಯೋ, ಸಿಯೋಲ್, ಹಾಂಗ್ ಕಾಂಗ್ ಮತ್ತು ಶಾಂಘೈ ಷೇರುಪೇಟೆ ಸೆನ್ಸೆಕ್ಸ್ ಲಾಭದೊಂದಿಗೆ ವಹಿವಾಟು ಕೊನೆಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್