ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ
ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ.
Team Udayavani, Jan 21, 2022, 5:39 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಭರ್ಜರಿ ಷೇರು ವಹಿವಾಟಿನ ಪರಿಣಾಮ ಶುಕ್ರವಾರ (ಜನವರಿ 21) ಮುಂಬಯಿ ಷೇರುಪೇಟೆಯ ಸೆನ್ಸೆಕ್ಸ್ 427 ಅಂಕ ಕುಸಿತದೊಂದಿಗೆ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ:ಬಾಂಬೆ ಹೈಕೋರ್ಟ್ ನ್ಯಾಯಾಧೀಶರ ಕೊಠಡಿಯಲ್ಲಿ ಹಾವು ಪ್ರತ್ಯಕ್ಷ
ವಿದೇಶಿ ಬಂಡವಾಳದ ಹೊರಹರಿವು ನಿರಂತರವಾಗಿ ಮುಂದುವರಿದಿರುವುದು ಷೇರು ಮಾರಾಟದ ಮೇಲೆ ಪರಿಣಾಮ ಬೀರಿರುವುದಾಗಿ ಟ್ರೇಡರ್ಸ್ ತಿಳಿಸಿದ್ದಾರೆ. ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427.44 ಅಂಕ ಇಳಿಕೆಯಾಗಿದ್ದು, 59,037.18 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಎನ್ ಎಸ್ ಇ ನಿಫ್ಟಿ ಕೂಡಾ 139.85 ಅಂಕ ಕುಸಿತ ಕಂಡಿದ್ದು, 17,617.15 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ. ಬಜಾಜ್ ಫಿನ್ ಸರ್ವ್, ಟೆಕ್ ಮಹೀಂದ್ರ, ಟಾಟಾ ಸ್ಟೀಲ್, ಭಾರ್ತಿ ಏರ್ ಟೆಲ್, ಎಲ್ ಆ್ಯಂಡ್ ಟೀ, ಇಂಡಸ್ ಇಂಡ್ ಬ್ಯಾಂಕ್, ಬಜಾಜ್ ಫೈನಾನ್ಸ್ ಮತ್ತು ಇನ್ಫೋಸಿಸ್ ಷೇರುಗಳು ನಷ್ಟ ಕಂಡಿದೆ.
ಮತ್ತೊಂದೆಡೆ ಎಚ್ ಯುಎಲ್, ಮಾರುತಿ, ಎಚ್ ಡಿಎಫ್ ಸಿ, ಟಿಸಿಎಸ್ ಷೇರುಗಳು ಶೇ.2.68ರಷ್ಟು ಲಾಭಗಳಿಸಿದೆ. ಹಾಂಗ್ ಕಾಂಗ್, ಸಿಯೋಲ್, ಶಾಂಘೈ ಮತ್ತು ಟೋಕಿಯೋ ಷೇರುಪೇಟೆ ಸೆನ್ಸೆಕ್ಸ್ ನಷ್ಟ ಕಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ ಕೊಡುವವರೆಗೆ ಟ್ವಿಟರ್ ಖರೀದಿಸಲ್ಲ ಎಂದ ಮಸ್ಕ್
ಜಿಎಸ್ಟಿ ಪೋರ್ಟಲ್ನಲ್ಲಿ ತಾಂತ್ರಿಕ ದೋಷ: ಜಿಎಸ್ಟಿ ಸಲ್ಲಿಕೆಗೆ ಅವಧಿ ವಿಸ್ತರಣೆ?
1,300 ಅಂಕಗಳ ಏರಿಕೆ ಕಂಡ ಸೆನ್ಸೆಕ್ಸ್ ; 16,200 ಮಟ್ಟವನ್ನು ಮರಳಿ ಪಡೆದ ನಿಫ್ಟಿ
ಇಂದು ಷೇರು ಮಾರುಕಟ್ಟೆಯಲ್ಲಿ ಎಲ್ಐಸಿ ಲಿಸ್ಟಿಂಗ್
ಬ್ಯಾಂಕ್ಗಳಿಗೆ ವಂಚನೆ ಶೇ. 51ರಷ್ಟು ಇಳಿಕೆ; ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆ