ಪಾಸಿಟಿವ್ ಟ್ರೆಂಡ್; ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಒಂದು ಸಾವಿರಕ್ಕೂ ಅಧಿಕ ಅಂಕ ಜಿಗಿತ
ಎನ್ ಎಸ್ ಇ ನಿಫ್ಟಿ 262.75 ಅಂಕಗಳಷ್ಟು ಏರಿಕೆಯೊಂದಿಗೆ 16,615.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
Team Udayavani, May 30, 2022, 11:50 AM IST
ಮುಂಬಯಿ: ಏಷಿಯನ್ ಷೇರುಮಾರುಕಟ್ಟೆಯ ಧನಾತ್ಮಕ ವಹಿವಾಟಿನ ಪರಿಣಾಮ ಸೋಮವಾರ (ಮೇ 30) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ ಬರೋಬ್ಬರಿ ಒಂದು ಸಾವಿರಕ್ಕೂ ಅಧಿಕ ಅಂಕಗಳಷ್ಟು ಏರಿಕೆಯೊಂದಿಗೆ ವಹಿವಾಟು ಮುಂದುವರಿದಿದೆ.
ಇದನ್ನೂ ಓದಿ:ಕನ್ನಡದ ಡಿಂಡಿಮವನ್ನು ರಾಷ್ಟ್ರ ಮಟ್ಟದಲ್ಲಿ ಮುಟ್ಟಿಸುವ ಕೆಲಸ ಮಾಡುತ್ತೇನೆ: ನಟ ಜಗ್ಗೇಶ್
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,67.82 ಅಂಕಗಳಷ್ಟು ಏರಿಕೆಯಾಗಿದ್ದು, 56,052.96 ಅಂಕಗಳಲ್ಲಿ ವಹಿವಾಟು ನಡೆದಿದೆ. ಮತ್ತೊಂದೆಡೆ ಎನ್ ಎಸ್ ಇ ನಿಫ್ಟಿ 262.75 ಅಂಕಗಳಷ್ಟು ಏರಿಕೆಯೊಂದಿಗೆ 16,615.20 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ.
ಇನ್ಫೋಸಿಸ್, ಟೈಟಾನ್, ಎಚ್ ಸಿಎಲ್ ಟೆಕ್ನಾಲಜೀಸ್, ಎಲ್ ಆ್ಯಂಡ್ ಟಿ, ರಿಲಯನ್ಸ್ ಇಂಡಸ್ಟ್ರೀಸ್, ಆಲ್ಟ್ರಾಟೆಕ್ ಸಿಮೆಂಟ್, ವಿಪ್ರೋ, ಟಿಸಿಎಸ್ ಮತ್ತು ಎಚ್ ಡಿಎಫ್ ಸಿ ಷೇರುಗಳು ಆರಂಭಿಕ ವಹಿವಾಟಿನಲ್ಲಿಯೇ ಲಾಭಗಳಿಸಿದೆ.
ಮತ್ತೊಂದೆಡೆ ಡಾ.ರೆಡ್ಡೀಸ್ ಷೇರು ಮೌಲ್ಯ ಮಾತ್ರ ಕುಸಿತ ಕಂಡಿದೆ. ಇನ್ನುಳಿದಂತೆ ಸಿಯೋಲ್, ಶಾಂಘೈ, ಟೋಕಿಯೋ ಮತ್ತು ಹಾಂಗ್ ಕಾಂಗ್ ಷೇರು ಮಾರುಕಟ್ಟೆಯ ವಹಿವಾಟು ಧನಾತ್ಮಕ ಏರಿಕೆಯೊಂದಿಗೆ ಮುಂದುವರಿದಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್