ಉತ್ತರ ಪ್ರದೇಶದಿಂದ ಆಗಮಿಸಿ ಮತದಾನ ಮಾಡಿದ ಸಚಿವೆ ಶೋಭಾ ಕರಂದ್ಲಾಜೆ
Team Udayavani, Dec 10, 2021, 4:32 PM IST
ಚಿಕ್ಕಮಗಳೂರು :ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ವಿಧಾನ ಪರಿಷತ್ ಚುನಾವಣೆಗೆ ಉತ್ತರ ಪ್ರದೇಶದಿಂದ ಆಗಮಿಸಿ ಮತದಾನ ಮಾಡಿದರು.
ಮೂಡಿಗೆರೆಯಲ್ಲಿ ಪಟ್ಟಣ ಪಂಚಾಯಿತಿಯ ಕೇಂದ್ರದಲ್ಲಿ ಮತದಾನ ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಉತ್ತರ ಪ್ರದೇಶದ ಅಯೋಧ್ಯೆಗಿಂತ ದೂರದಲ್ಲಿದ್ದೆ,ಮತದಾನ ಮಾಡಲೇಬೇಕು ಎಂಬ ಉದ್ದೇಶದಿಂದ ಉತ್ತರ ಪ್ರದೇಶದಿಂದ ಬಂದಿದ್ದೇನೆ. ನಮ್ಮ ಅಭ್ಯರ್ಥಿ ಪ್ರಾಣೇಶ್ ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಲಿದ್ದಾರೆ ಎಂದರು.
ಸಿಡಿಎಸ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ತಂಡವನ್ನ ರಚನೆ ಮಾಡಲಾಗಿದೆ. ಆದಷ್ಟು ಬೇಗ ತನಿಖೆಯ ವರದಿ ಬರುವ ವಿಶ್ವಾಸವಿದೆ. ಬ್ಲಾಕ್ ಬಾಕ್ಸ್ ಸಿಕ್ಕಿರುವುದರಿಂದ ಹೆಚ್ಚಿನ ಮಾಹಿತಿ ಸಿಗುವ ನಿರೀಕ್ಷೆಯಿದೆ. ಬದುಕಿರುವ ಸೇನಾನಿಗಾಗಿ ಎಲ್ಲರೂ ಪ್ರಾರ್ಥನೆ ಮಾಡೋಣ. ಮಡಿದವರ ಕುಟುಂಬದ ಜೊತೆಗೆ ಸರ್ಕಾರ, ಇಡೀ ದೇಶವೇ ಇದೆ. ಸೂಕ್ತ ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿ ಅನ್ನುವುದು ನಮ್ಮೆಲ್ಲರ ಅಪೇಕ್ಷೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಂಗಳೂರು; ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶವಿಲ್ಲ : ಸಿಎಂ ಬೊಮ್ಮಾಯಿ
ಮಳೆಯ ಆರ್ಭಟ : ತೀರ್ಥಹಳ್ಳಿ ಗದ್ದೆಯ ಹೊಂಡದಲ್ಲಿ ಬಿದ್ದು ವ್ಯಕ್ತಿ ಸಾವು
ಸಿಎಂ ದಾವೋಸ್ ಪ್ರವಾಸ ಡೌಟು?; ಇಂದು ದಿಲ್ಲಿಗೆ ಹಠಾತ್ ಭೇಟಿ!
ಇಡೀ ದೇಶದಲ್ಲಿ ಕೃಷಿ ಭೂಮಿ ಸೈಟ್ ಗಳಾಗುತ್ತಿದೆ : ಸಚಿವೆ ಶೋಭಾ ಕರಂದ್ಲಾಜೆ ಆತಂಕ
ಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ : ಮೂರೂವರೆ ಗಂಟೆಗಳ ಹುಡುಕಾಟ