
ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ
ಯಾವ ಕ್ಷೇತ್ರದಲ್ಲಿ ನಿಂತರೂ ವೈರಿಗಳು ಒಂದಾಗುತ್ತಾರೆ..ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ..
Team Udayavani, Mar 24, 2023, 5:50 PM IST

ಮೈಸೂರು:ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಪುತ್ರ ಡಾ. ಯತೀಂದ್ರ ಅವರು ಉದಯವಾಣಿಗೆ ಶುಕ್ರವಾರ ತಿಳಿಸಿದ್ದಾರೆ.
ಹೈಕಮಾಂಡ್ ಕೋಲಾರ ಬೇಡ ವರುಣಾದಲ್ಲಿ ಸ್ಪರ್ಧಿಸಿ ಅಂತ ಹೇಳಿತ್ತು.ಈ ಸಮಯದಲ್ಲಿ ಕೋಲಾರ ಕ್ಷೇತ್ರದಿಂದ ಹಿಂದೆ ಸರಿದರೆ ಕಾಂಗ್ರೆಸ್ ಗೆ ಹಿನ್ನಡೆ ಆಗುತ್ತೆ ಅಂತಾ ಅಲ್ಲಿನ ನಾಯಕರು ಹೇಳಿದ್ದಾರೆ.ಇವತ್ತಿನ ಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಕೋಲಾರವನ್ನು ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣಾವನ್ನೂ ಬಿಡಲು ಆಗುವುದಿಲ್ಲ.ಹೀಗಾಗಿ ಸಿದ್ದರಾಮಯ್ಯ ಅವರು ಕೋಲಾರ – ವರುಣ ಎರಡು ಕ್ಷೇತ್ರದಲ್ಲೂ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದರು.
ವರುಣಾ ಒಂದರಲ್ಲಿ ನಿಂತು ಕೊಳ್ಳಿ ಎಂದು ನಾನು ಮೊದಲು ಸಲಹೆ ಕೊಟ್ಟಿದ್ದೆ.ಒಟ್ಟಿನಲ್ಲಿ ಹೈಕಮಾಂಡ್ ನಿರ್ಧಾರ ಅಂತಿಮ. ಸಿದ್ದರಾಮಯ್ಯ ಅವರು ಯಾವುದೇ ಕ್ಷೇತ್ರದಲ್ಲಿ ನಿಂತರು ಅವರ ವೈರಿಗಳು ಒಂದಾಗಿ ಸೋಲಿಸಲು ಯತ್ನಿಸುತ್ತಾರೆ. ಸಿದ್ದರಾಮಯ್ಯ ವಿರುದ್ದ ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಎಲ್ಲಿ ಯಾವಾಗ ನಿಂತರು ಶತ್ರುಗಳು ಒಂದಾಗುತ್ತಾರೆ. ಇದಕ್ಕೆಲ್ಲ ಹೆದರೋಕೆ ಆಗಲ್ಲ.ಸಿದ್ದರಾಮಯ್ಯ ಮಾಸ್ ಲೀಡರ್. ಆಕಸ್ಮಾತ್ ಅಧಿಕಾರಕ್ಕೆ ಬಂದರೆ ಸಾಮಾಜಿಕ ನ್ಯಾಯದ ಪರ ಕೆಲಸ ಮಾಡುತ್ತಾರೆ. ಇದನ್ನು ಸಹಿಸಲು ಬಲಪಂಥೀಯರಿಗೆ ಆಗುವುದಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
