ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ : ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ತಿರುಗೇಟು


Team Udayavani, Oct 14, 2021, 9:50 PM IST

siddaramaiah

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಗಳ ಮೂಲಕ ಬಲವಾದ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ನನ್ನಿಂದ ಆಡಳಿತವನ್ನಾಗಲಿ, ಪೊಲೀಸಿಂಗ್ ಆಗಲಿ ಕಲಿಯಬೇಕಿಲ್ಲ ಎಂದು ಹೇಳಿದ್ದೀರಿ, ಧನ್ಯವಾದಗಳು. ನನ್ನಿಂದಾಗಲಿ, ನಿಮ್ಮ ತಂದೆ ಎಸ್.ಆರ್.ಬೊಮ್ಮಾಯಿ ಅವರಿಂದಾಗಲಿ ನೀವು ಏನಾದರೂ ಕಲಿತಿದ್ದರೆ, ಕೇವಲ ಅಧಿಕಾರಕ್ಕಾಗಿ ಕೋಮುವಾದಿ ಪಕ್ಷದ ಜೊತೆ ಹೇಗೆ ಸೇರಿಕೊಳ್ಳುತ್ತಿದ್ದೀರಿ ಅಲ್ಲವೇ?

ನಾನೇ ಹಿಂದೂಗಳನ್ನು ಕೊಲ್ಲಿಸಿದೆ ಎಂದು ನಿಮ್ಮ ಪರಿವಾರದ ಕೂಗುಮಾರಿಗಳ ರೀತಿ ಆರೋಪ ಮಾಡಿದ್ದೀರಿ. ಇಂತಹ ಬೇಜವಾಬ್ದಾರಿ ಹೇಳಿಕೆಗಿಂತ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು. ಈ ಆರೋಪಕ್ಕಾಗಿ ನಾನು ಕಾನೂನುಕ್ರಮಕ್ಕೆ ಮುಂದಾಗಬಹುದು. ಕಿರಿಯರಿದ್ದೀರಿ ತಿದ್ದಿಕೊಳ್ಳಿ ಎಂದಷ್ಟೇ ಹೇಳಬಲ್ಲೆ.

ನೀವು ಗೃಹಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ, ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿ ಕೊಡುತ್ತೇನೆ. ತನಿಖೆ ಮಾಡಿ ಜನರಿಗೆ ಸತ್ಯ ತಿಳಿಸಿ.

2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?

ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ. ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ?

ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್,ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷಿಸಿ. ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ.

ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್. ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿ
ನ್ಯಾಯ ಕೊಡಿಸಿ.

ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ. ಎಂದು ಟ್ವೀಟ್ ಮಾಡಿದ್ದಾರೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.