ಸಿದ್ದರಾಮಯ್ಯರದು ಎಲುಬಿಲ್ಲದ ನಾಲಿಗೆ: ಶ್ರೀರಾಮುಲು ವ್ಯಂಗ್ಯ
Team Udayavani, Jun 22, 2020, 9:19 PM IST
ನಾಯಕನಹಟ್ಟಿ: ಕೇಂದ್ರ ಸರ್ಕಾರದಿಂದ ಅನುದಾನ ತರುವ ಧೈರ್ಯ ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಎಲುಬಿಲ್ಲದ ನಾಲಿಗೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಲೇವಡಿ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲ ರೀತಿಯ ಸಹಕಾರ ನೀಡುವ ಜತೆಗೆ ಕೋವಿಡ್ ನಿಯಂತ್ರಣ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದೆ. ಮುಖ್ಯಮಂತ್ರಿ ಕುರ್ಚಿ ಹೋದ ತಕ್ಷಣ ಹತಾಶರಾಗಿರುವ ಸಿದ್ದರಾಮಯ್ಯ ಆಡುವ ಮಾತುಗಳು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಶೋಭೆ ತರಲ್ಲ ಎಂದರು.
ಮುಖ್ಯಮಂತ್ರಿಗಳು 24 ತಾಸುಗಳ ಕಾಲವೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದ ಶ್ರೀರಾಮುಲು, ಇಂದು ನಡೆದ ಕೋವಿಡ್ ಸಭೆಗೆ ಮುಖ್ಯಮಂತ್ರಿಯವರ ಅನುಮತಿ ಪಡೆದು ಗೈರುಹಾಜರಾಗಿದ್ದೇನೆ. ಕ್ಷೇತ್ರದ ಅಭಿವೃದ್ಧಿ ಕಾಮಗಾರಿ ವೀಕ್ಷಣೆಗೆ ಬಂದಿರುವುದಾಗಿ ತಿಳಿಸಿದರು.