ಕಣ್ಣೀರು ಸುರಿಸೋದು ದೇವೇಗೌಡರ ಮನೆತನದ ಸಂಸ್ಕೃತಿ: ಸಿದ್ದರಾಮಯ್ಯ ವ್ಯಂಗ್ಯ
Team Udayavani, Dec 5, 2020, 3:12 PM IST
ಬೆಳಗಾವಿ: ಕುಮಾರಸ್ವಾಮಿ ಸುಳ್ಳು ಹೇಳುವುದರಲ್ಲಿ ನಿಸ್ಸಿಮ್ಮ, ಸಮಯಕ್ಕೆ ತಕ್ಕಂತೆ ಅವರು ಸುಳ್ಳು ಹೇಳುತ್ತಾರೆ,
ಕಣ್ಣೀರು ಹಾಕುವುದು ದೇವೇಗೌಡ ಮನೆಯವರ ಸಂಸ್ಕೃತಿ. ಒಲೈಕೆಗೂ ಮತ್ತು ಇನ್ಯಾರನ್ನೋ ನಂಬಿಸಲು ಕಣ್ಣೀರು ಹಾಕುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜಕೀಯದಿಂದಲೇ ಕುಮಾರಸ್ವಾಮಿ ಹೊರಟು ಹೋಗಿದ್ದಾರಾ, ಅವರಿಗೆ ಗುಡ್ ವಿಲ್ ಇದ್ದರೆ ಅಲ್ವಾ ಹಾಳಾಗೋದು, ಗುಡ್ ವಿಲ್ ಇಲ್ಲ ಎಂದರೆ ಹಾಳಾಗುವ ಪ್ರಶ್ನೆಯೇ ಇಲ್ಲ ಎಂದು ಕಾಲೆಳೆದರು.
ಸಿದ್ದರಾಮಯ್ಯ ಪ್ರೀಪ್ಲ್ಯಾನ್ ಮಾಡಿ ನನ್ನ ಹೆಸರು ಹಾಳು ಮಾಡಿದ್ದರು ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ನಿಂದ ಕುಮಾರಸ್ವಾಮಿ ಸಿಎಂ ಆಗಿದ್ದರು, ಇವರು ವೆಸ್ಟರ್ನ್ ಹೊಟೆಲ್ ನಿಂದ ಆಡಳಿತ ನಡೆಸಿದ್ದರು. ಇವರ ಕೇಂದ್ರ ಸ್ಥಾನ ಹೊಟೇಲ್ ಆಗಿತ್ತು ಎಂದು ಕಿಡಿಕಾರಿದರು.
ಇದನ್ನೂ ಓದಿ:ರೈತರ ಪ್ರತಿಭಟನೆ ಕುರಿತ ಹೇಳಿಕೆ: ಕೆನಡಾ ನೇತೃತ್ವದ ಕೋವಿಡ್ 19 ಸಭೆಗೆ ಭಾರತ ಗೈರು
ಕಾಂಗ್ರೆಸ್ ಶಾಸಕರಿಗೆ 1900 ಕೋಟಿ ರೂ. ಹಣ ಕೊಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇವರ ಮನೆಯಿಂದ ಹಣ ತಂದು ಕೊಟ್ಟಿದ್ದಾರಾ, ನಮ್ಮ ಶಾಸಕರು ಬೆಂಬಲ ಕೊಟ್ಟಿದ್ದಕ್ಕೆ ಅವರು ಸಿಎಂ ಆಗಿದ್ದಾರೆ ತಿರುಗೇಟು ನೀಡಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ