ಶಾಲೆಯೊಳಗೆ ಗುಂಡು ಹಾರಿಸಿದ 6ನೇ ತರಗತಿ ವಿದ್ಯಾರ್ಥಿನಿ, ಮೂವರಿಗೆ ಗಾಯ!
ಹೊರಗೆ ಗುಂಡಿನ ದಾಳಿ ನಡೆಸಿರುವುದಾಗಿ ಜೆಫರ್ ಸನ್ ಕೌಂಟಿ ಷರೀಫ್ ಸ್ಟೀವ್ ಆ್ಯಂಡರ್ ಸನ್ ತಿಳಿಸಿದ್ದಾರೆ.
Team Udayavani, May 7, 2021, 1:32 PM IST
ಲಾಸ್ ಏಂಜಲೀಸ್: ಶಾಲೆಯೊಳಗೆ ವಿದ್ಯಾರ್ಥಿನಿಯೊಬ್ಬಳು ಗುಂಡಿನ ದಾಳಿ ನಡೆಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಅಮೆರಿಕದ ಇದಾಹೊ ರಾಜ್ಯದಲ್ಲಿ ನಡೆದಿದ್ದು, ಶಿಕ್ಷಕಿ ವಿದ್ಯಾರ್ಥಿನಿ ಕೈಯಲಿದ್ದ ಗನ್ ಅನ್ನು ಕಸಿದುಕೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಜಮೀರ್ ಅಹಮದ್ ರಕ್ತದಲ್ಲೇ ಮುಸಲ್ಮಾನರ ಪರ, ಹಿಂದೂಗಳ ವಿರೋಧವಿದೆ: ಈಶ್ವರಪ್ಪ ವಾಗ್ದಾಳಿ
ಇದಾವೊ ಜಲಪಾತ ಸಮೀಪದ ರಿಗ್ಬೈ ಶಾಲೆಯ ಆರನೇ ತರಗತಿ ವಿದ್ಯಾರ್ಥಿನಿ ಈ ಕೃತ್ಯ ಎಸಗಿರುವುದಾಗಿ ತಿಳಿಸಿದ್ದು, ವಿದ್ಯಾರ್ಥಿನಿಯ ಹೆಸರನ್ನು ಮಾತ್ರ ಬಹಿರಂಗಪಡಿಸಿಲ್ಲ ಎಂದು ವರದಿ ಹೇಳಿದೆ.
ತನ್ನ ಬ್ಯಾಗ್ ನೊಳಗೆ ಹ್ಯಾಂಡ್ ಗನ್ ಇಟ್ಟುಕೊಂಡು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿ ಏಕಾಏಕಿ ಶಾಲೆಯೊಳಗೆ ಮತ್ತು ಹೊರಗೆ ಗುಂಡಿನ ದಾಳಿ ನಡೆಸಿರುವುದಾಗಿ ಜೆಫರ್ ಸನ್ ಕೌಂಟಿ ಷರೀಫ್ ಸ್ಟೀವ್ ಆ್ಯಂಡರ್ ಸನ್ ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಇಬ್ಬರು ವಿದ್ಯಾರ್ಥಿಗಳು ಹಾಗೂ ಒಬ್ಬರು ಕಚೇರಿ ಸಿಬಂದಿ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ವಿದ್ಯಾರ್ಥಿನಿ ಕೈಯಲಿದ್ದ ಹ್ಯಾಂಡ್ ಗನ್ ಅನ್ನು ಟೀಚರ್ ಕಸಿದುಕೊಂಡಿದ್ದು, ಆಕೆಯನ್ನು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸುವವರೆಗೂ ಹಿಡಿದಿಟ್ಟುಕೊಂಡಿರುವುದಾಗಿ ಆ್ಯಂಡರ್ ಸನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…