ರೈತರ ಸಮಸ್ಯೆಗಳ ಶೀಘ್ರ ನಿವಾರಣೆ, ಸಚಿವರುಗಳ ಭರವಸೆ: ಗಂಗಾಧರ ಮೇಟಿ


Team Udayavani, Dec 17, 2021, 6:09 PM IST

27farmer

ರಬಕವಿ-ಬನಹಟ್ಟಿ: ಈ ಭಾಗದ ಮೂಲ ಸಮಸ್ಯೆಗಳಾದ ತೇರದಾಳದ ಸಾವರಿನ್ ಸುರ‍್ಸ್ನ ಕಬ್ಬಿನ ಬಾಕಿ ಬಿಲ್, ಸಸಾಲಟ್ಟಿ ಏತ ನೀರಾವರಿ ಯೋಜನೆ, ಕಲ್ಲೋಳ್ಳಿ ಏತ ನೀರಾವರಿಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಧನ ಸಿಗಬೇಕು ಎಂದು ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ ಹಮ್ಮಿಕೊಂಡಿದ್ದೇವು, ಪ್ರತಿಭಟನಾ ಸ್ಥಳಕ್ಕೆ ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ್ ಮುನೇನಕೊಪ್ಪ ಹಾಗೂ ಸಹಕಾರ ಸಚಿವ ಟಿ. ಸೋಮಶೇಖರ ಆಗಮಿಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಂಚಾಲಕ ಗಂಗಾಧರ ಮೇಟಿ ಹೇಳಿದರು.

ಅವರು ಶುಕ್ರವಾರ ರಬಕವಿಯ ನಿರೀಕ್ಷಣಾ ಮಂದಿರದ ಎದಿರು ನಡೆದ ಸುದ್ದಿ ಗೋಷ್ಠಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಕ್ಕರೆ ಸಚಿವ ಮುನೇನಕೊಪ್ಪ ಅವರು ಸಮಾರು ಅರ್ಧ ಗಂಟೆಗಳ ಕಾಲ ನಮ್ಮ ಜೊತೆ ಚರ್ಚೆ ಮಾಡಿ, ಜನವರಿ ತಿಂಗಳ ಮೊದಲ ವಾರದಲ್ಲಿ ಒಂದು ಪ್ರತ್ಯೇಕ ಸಭೆ ಮಾಡಿ ಅದರಲ್ಲಿ ನಿಮ್ಮ ಎಲ್ಲ ಸಮಸ್ಯೆಯನ್ನು ಬಗೆ ಹರಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಅದೇ ರೀತಿ ಸಹಕಾರಿ ಸಚಿವ ಎಸ್. ಟಿ. ಸೋಶೇಖರ ಭೇಟಿ ನೀಡಿ ತಮ್ಮ ಸಹಕಾರಿ ಸಂಘದಿಂದ ಅಪೇಕ್ಸ್ ಬ್ಯಾಂಕಿಗೆ ನಿರ್ದೇಶನ ನೀಡುತ್ತೇವೆ. ನಾವು ಹಾಗೂ ಸಕ್ಕರೆ ಸಚಿವರು ಕೂಡಿಕೊಂಡು ಮುಂದಿನ ತಿಂಗಳು ಸಭೆಯನ್ನು ಆಯೋಜನೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದ ಹಿನ್ನಲೆಯಲ್ಲಿ ನಾವು ರೈತ ಚಳವಳಿಯನ್ನು ಹಿಂಪಡೆದೆವು ಎಂದರು.

ಈ ಭಾಗದ ಮೂಲ ಯೋಜನೆಯಾಗಿರವ ಸಸಾಲಟ್ಟಿ ಏತ ನೀರಾವರಿ ಯೋಜನೆಯ ಬಗ್ಗೆ ನಮ್ಮ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಭಾಗವಹಿಸುತ್ತಾರೆ ಎಂದು ಬಹಳ ನಿರೀಕ್ಷೆ ಇತ್ತು. ಆದರೆ ಅದು ಆಗಲಿಲ್ಲ. ನಮ್ಮ ಭಾಗದ ಸಚಿವರಾಗಿ, ಉಪಮುಖ್ಯ ಮಂತ್ರಿಗಳಾಗಿ ನಮ್ಮ ಭಾಗದ ಯೋಜನೆಗೆ ಸ್ಪಂದನೆ ನೀಡಲಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಕುರಿತು ಈ ಭಾಗದ ಜನ ಕೂಡಿಕೊಂಡು ಒತ್ತಡ ಹಾಕುವ ಕೆಲಸ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ರಬಕವಿ-ಬನಹಟ್ಟಿ ತಾಲೂಕು ಹೊನ್ನಪ್ಪ ಬಿರಡಿ, ತೇರದಾಳ ಮತಕ್ಷೇತ್ರದ ಅಧ್ಯಕ್ಷ ಶ್ರೀಕಾಂತ ಘೂಳನ್ನವರ, ಭೀಮಸಿ ಕರಿಗೌಡರ, ಸುರೇಶ ದೇಸಾಯಿ, ಖಲೀಲ ಮುಲ್ಲಾ, ಬಸೀರ ಜಮಾದಾರ, ಕೆಂಚಪ್ಪ ಕರಿಕಟ್ಟಿ, ಕಾಸಿಂ ಹುದ್ದಾರ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.