ಬಹುಭಾಷಾ ಸ್ಟಾರ್ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ; ಗಣ್ಯರ ಸಂತಾಪ
ಖುಷ್ಬು ಸುಂದರ್, ಲಕ್ಷ್ಮೀ ಮಂಜು, ಶರತ್ ಕುಮಾರ್ ಸೇರಿದಂತೆ ಹಲವು ನಟರು ಸಂತಾಪ ಸೂಚಿಸಿದ್ದಾರೆ.
Team Udayavani, Jun 29, 2022, 10:32 AM IST
ಚೆನ್ನೈ: ದಕ್ಷಿಣ ಭಾರತದ ಬಹುಭಾಷಾ ನಟಿ ಮೀನಾ ಪತಿ ವಿದ್ಯಾಸಾಗರ್ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ (ಜೂನ್ 29) ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:Update: ರಾಜಸ್ಥಾನ ಶಿರಚ್ಛೇದ ಪ್ರಕರಣ-ಕರ್ಫ್ಯೂ ಜಾರಿ, ಆರೋಪಿಗಳ ಬಂಧನ; ಎನ್ ಐಎ ತನಿಖೆ
ವರದಿಯ ಪ್ರಕಾರ, ವಿದ್ಯಾಸಾಗರ್ ಅವರು ಶ್ವಾಸಕೋಶದ ಸೋಂಕಿನಿಂದ ತೀವ್ರವಾಗಿ ಬಳಲುತ್ತಿದ್ದು, ಕಳೆದ ಕೆಲವು ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಟಿ ಮೀನಾ ಮತ್ತು ಉದ್ಯಮಿ ವಿದ್ಯಾಸಾಗರ್ 2009ರಲ್ಲಿ ಬೆಂಗಳೂರಿನಲ್ಲಿ ವಿವಾಹವಾಗಿದ್ದರು.
ಮೀನಾ ಪತಿ ವಿದ್ಯಾಸಾಗರ್ ನಿಧನಕ್ಕೆ ಹಲವಾರು ನಟರು, ಸಿನಿಮಾರಂಗದ ಗೆಳೆಯರು, ಆಪ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಖುಷ್ಬು ಸುಂದರ್, ಲಕ್ಷ್ಮೀ ಮಂಜು, ಶರತ್ ಕುಮಾರ್ ಸೇರಿದಂತೆ ಹಲವು ನಟರು ಸಂತಾಪ ಸೂಚಿಸಿದ್ದಾರೆ.
ಮೀನಾ ಬಾಲ ನಟಿಯಾಗಿ ಬೆಳ್ಳಿ ಪರದೆ ಪ್ರವೇಶಿಸಿದ್ದರು. 1990ರ ದಶಕದಲ್ಲಿ ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಜನಪ್ರಿಯ ನಟಿಯಾಗಿ ಖ್ಯಾತಿ ಪಡೆದಿದ್ದರು. ಇತ್ತೀಚೆಗಷ್ಟೇ ತೆರೆಕಂಡಿದ್ದ ಸನ್ ಆಫ್ ಇಂಡಿಯಾ ಸಿನಿಮಾದಲ್ಲಿ ಮೀನಾ ನಟಿಸಿದ್ದರು. ಈ ಮೊದಲು ದೃಶ್ಯಂ ಮತ್ತು ದೃಶ್ಯಂ 2 ಚಿತ್ರದಲ್ಲೂ ಅಭಿನಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
ಯಾವ ದೂರೂ ಬಂದಿಲ್ಲ: ಜಾಕ್ವೆಲಿನ್ ಪರ ವಕೀಲ
Boycott ಎಫೆಕ್ಟ್: 7 ದಿನದಲ್ಲಿ 50 ಕೋಟಿ ರೂ. ಗಳಿಸಲು ವಿಫಲವಾದ “ಲಾಲ್ ಸಿಂಗ್ ಚಡ್ಡಾ”
ಅನುರಾಗ್ ಕಶ್ಯಪ್ ವಿರುದ್ಧ ವಿವೇಕ್ ರಂಜನ್ ಅಗ್ನಿಹೋತ್ರಿ ಕಿಡಿ
ಸೈಮಾ ಅವಾರ್ಡ್ಸ್ ಗೆ ಕನ್ನಡದ 3 ಚಿತ್ರಗಳು ನಾಮಿನೇಟ್: ಪ್ರಮುಖ ನಾಮಿನೇಟ್ ಪಟ್ಟಿ ಇಲ್ಲಿದೆ
MUST WATCH
ಹೊಸ ಸೇರ್ಪಡೆ
ವಿಟ್ಲ: ಮಹಿಳೆ ಮನೆಗೆ ತೆರಳುವ ರಸ್ತೆ ಅಗೆದು ಹಾಕಿ, ನಿಂದನೆ: ತಹಶೀಲ್ದಾರ್ಗೆ ದೂರು
ಸಾವರ್ಕರ್ ದೇಶಪ್ರೇಮಿ ಎಂದು ಯಾಕೆ ಕರೆಯಬೇಕು?: ಸಿದ್ದರಾಮಯ್ಯ
ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ಗೆ ಸಕಲ ಸಿದ್ಧತೆ
ರಾಜು ಶ್ರೀವಾಸ್ತವ್ ಆರೋಗ್ಯ ಸ್ಥಿತಿ ಗಂಭೀರ: ಸ್ನೇಹಿತ ಹೇಳಿದ್ದೇನು?
ಅತ್ಯಾಚಾರ ವಿರೋಧಿಸಿದ ಬ್ಯಾಸ್ಕೆಟ್ಬಾಲ್ ಆಟಗಾರ್ತಿ: 25 ಅಡಿ ಎತ್ತರದಿಂದ ತಳ್ಳಿದ ದುರುಳರು