ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆ ಬಿಟ್ಟು ಇತರ ಭಾಷೆಗೆ ಮನ್ನಣೆ : ಕಸಾಪ ತೀವ್ರ ಆಕ್ಷೇಪ
Team Udayavani, Dec 1, 2020, 12:12 PM IST
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ಭಾಷೆಯನ್ನು ಬಿಟ್ಟು ಇತರ ಭಾಷೆಗೆ ಮನ್ನಣೆ ನೀಡಿದ್ದನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೃಷ್ಣ ಮಠದ ನಾಮಫಲಕದಲ್ಲಿ ಕನ್ನಡ ವನ್ನು ತೆಗೆದು ಹಾಕಿದ್ದು ಸರಿಯಾದ ಕ್ರಮವಲ್ಲ.ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಕನ್ನಡ ನಾಡಿನಲ್ಲಿ ಮೊದಲು ಕನ್ನಡ ಕ್ಕೆ ಆಧ್ಯತೆ. ನಾಮಫಲಕದಲ್ಲಿ ಮೊದಲು ಕನ್ನಡ ಇರಬೇಕು ಆನಂತರ ಇತರ ಭಾಷೆ. ಒಂದು ಧಾರ್ಮಿಕ ಸಂಸ್ಥೆ ಭಾಷೆಗಳ ನಡುವೆ ಕಂದಕ ಸೃಷ್ಟಿಸುವುದು ಸರಿಯಲ್ಲ. ನಾಮ ಫಲಕದ ಈ ಪ್ರಕರಣ ಸರ್ಕಾರದ ಕಾನೂನಿನ ಸ್ವಷ್ಟ ಉಲ್ಲಂಘನೆಯಾಗಿದೆ ಇದನ್ನು ಕೂಡಲೇ ಸರಿಪಡಿಸಬೇಕು ಎಂದರು. ಈ ಕುರಿತು ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಲಾಗುವುದು ಜೊತೆಗೆ ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದಿದ್ದಾರೆ.
ಸಮಾಜಕ್ಕೆ ಮಾರ್ಗದರ್ಶನ ಮಾಡುವವರೆ ಇಂತಹ ಕುಚೋದ್ಯ ಕೆಲಸಕ್ಕೆ ಕೈ ಹಾಕಿರುವುದು ಕ್ಷಮಿಸಲಾಗದ ಅಪರಾಧ. ಕನ್ನಡ ಸಾಹಿತ್ಯ ಪರಿಷತ್ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಸಂಬಂಧಪಟ್ಟವರು ತಕ್ಷಣ ಇದನ್ನು ಸರಿಪಡಿಸಬೇಕು ಇದು ಕನ್ನಡ ಸಾಹಿತ್ಯ ಪರಿಷತ್ ನ ಹಕ್ಕೊತ್ತಾಯವಾಗಿದೆ. ನಾಮಫಲಕದಲ್ಲಿ ಕನ್ನಡ ಭಾಷೆ ತೆಗೆದು ತುಳು ಭಾಷೆ ಹಾಕಿದ್ದು ಸರಿಯಲ್ಲ. ಬೇರೆ ಭಾಷೆಯನ್ನು ಬೆಳೆಸುವಾಗ ಮೊದಲು ಕನ್ನಡವನ್ನೇ ಬಳಸಬೇಕು.
ಇದನ್ನೂ ಓದಿ:ಕೋವಿಡ್ ಔಷಧ ನಿಧಿಗಾಗಿ ಯುವಕರ ಬೈಕ್ ಯಾತ್ರೆ : 3 ಕೋಟಿ ರೂ. ಸಂಗ್ರಹದ ಗುರಿ
ಕನ್ನಡ ಭಾಷೆ ಯನ್ನು ಕೈ ಬಿಟ್ಟು ಬೇರೆ ಭಾಷೆಯನ್ನು ಬಳಸಿದ್ದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.ಮೊದಲು ಕನ್ನಡ. ಆನಂತರ ಇತರೆ ಭಾಷೆ ನಾಮಫಲಕದಲ್ಲಿಇರಲಿ.ಕನ್ನಡ ಮತ್ತು ಸೋದರ ಭಾಷೆ ತುಳುವಿನ ನಡುವೆ ಕಂದಕ ನಿರ್ಮಾಣ ಮಾಡುವುದು ಸಹ ಪರಿಷತ್ ತೀವ್ರ ವಾಗಿ ಖಂಡಿಸುತ್ತದೆ ಎಂದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಂದೂರು ತಾಲೂಕು 15 ಗ್ರಾ.ಪಂ.ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ
ಕಾಪು ತಾಲೂಕಿನ 16 ಗ್ರಾ.ಪಂಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ
ಬಡಗುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಸತೀಶ್ ಹೆಗಡೆ ಆನೆಗದ್ದೆ ಇನ್ನಿಲ್ಲ
ಕರಾವಳಿಯಲ್ಲಿ ಏರಿಕೆಯಾಗುತ್ತಿದೆ ಲಸಿಕೆ ಗುರಿ
ಪಶುವೈದ್ಯಕೀಯ ಪಾಲಿ ಕ್ಲಿನಿಕ್ ನಿರ್ಮಾಣ ತಿಂಗಳೊಳಗೆ ಕಾಮಗಾರಿ ಪೂರ್ಣ