ಶ್ರೀಶೈಲಪ್ಪ ವಿಧಿವಶ; ಕಾಂಗ್ರೆಸ್ ಸಂತಾಪ, ಟಿಕೆಟ್ ಆಕಾಂಕ್ಷಿಗಳ ಸಭೆ ಮುಂದೂಡಿಕೆ


Team Udayavani, Nov 25, 2022, 3:23 PM IST

1-wwewq-eqwe

ಬೆಂಗಳೂರು: ಗದಗದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರ ಅಕಾಲಿಕ ವಿಧಿವಶವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಇದೇ ತಿಂಗಳು 27 ರಂದು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಇಂದಿನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಬಿದರೂರು ಅವರಿಗೆ ತೀವ್ರ ಸ್ವರೂಪದ ಹೃದಯಾಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣೆವೇ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ದುರಾದೃಷ್ಟವಶಾತ್ ಅವರು ಬದುಕುಳಿಯಲಿಲ್ಲ. ಸಭೆ ಆರಂಭಿಸುವ ಮುನ್ನ ಕಾಂಗ್ರೆಸ್ ನಾಯಕರು ಒಂದು ನಿಮಿಷ ಮೌನಾಚರಣೆ ಮಾಡುವ ಮೂಲಕ ಸಂತಾಪ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ‘ಮಾಜಿ ಶಾಸಕರು, ಹಿರಿಯ ನಾಯಕರಾದ ಶೀಶೈಲಪ್ಪ ಬಿದರೂರು ಅವರು ಅಕಾಲಿಕವಾಗಿ ನಮ್ಮನ್ನು ಆಗಲಿದ್ದಾರೆ. ಇವರು ಎರಡು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಹಲವು ಸಮಿತಿಗಳಲ್ಲಿ ನಾನಾ ಜವಾಬ್ದಾರಿ ನಿರ್ವಹಿಸಿದ್ದಾರೆ. ಇಂದು ಸಭೆಯಲ್ಲಿ ಭಾಗವಹಿಸಲು ಆಗಮಿಸಿದಾಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅವರು ಕೊನೆಯುಸಿರೆಳೆದಿದ್ದಾರೆ. ನಾನು, ನಮ್ಮ ಕಾರ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಎಲ್ಲರ ಒಮ್ಮತದ ತೀರ್ಮಾನದ ಮೇರೆಗೆ ಈ ಸಭೆಯನ್ನು 27ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದರು.

ಜೂಮ್ ಮೂಲಕ ಇದೇ 27 ರಂದು ಸಭೆ ಮಾಡಲಾಗುವುದು. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ಅಭ್ಯರ್ಥಿಯಾಗಲು ಅರ್ಜಿ ಹಾಕಿರುವವರಿಗೆ ಜೂಮ್ ಸಭೆ ಲಿಂಕ್ ಕಳುಹಿಸಲಾಗುವುದು. ನಿಮಗೆ ಕೊಡಬೇಕಾದ ಮಾರ್ಗದರ್ಶನವನ್ನು ನೀವುಗಳು ಕೊಟ್ಟಿರುವ ದೂರವಾಣಿ ಸಂಖ್ಯೆಗೆ ಶೇರ್ ಮಾಡುತ್ತೇವೆ. ಮತದಾರರ ಪಟ್ಟಿಯನ್ನು ಜಿಲ್ಲಾ ಕಾಂಗ್ರೆಸ್ ಗೆ ನೀಡಲಾಗುವುದು. ನೀವುಗಳು ನಿಮ್ಮ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ತೆಗೆದುಕೊಂಡು ಹೋಗಿ ಅವುಗಳನ್ನು ಪರಿಶೀಲಿಸಬೇಕು. ಕೈಬಿಡಲಾಗಿರುವ ಹೆಸರನ್ನು ಮತ್ತೆ ಸೇರಿಸಿಕೊಳ್ಳುವಂತೆ ಮಾಡಬೇಕು. ನಮ್ಮ ನಾಯಕ ಬಿದರೂರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾವೆಲ್ಲ ಪ್ರಾರ್ಥಿಸೋಣ’ ಎಂದು ಹೇಳಿದರು.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.