ಎಸೆಸೆಲ್ಸಿ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ನೀಡಿದ ಸಿಬ್ಬಂದಿಗಳು ಅಮಾನತು
Team Udayavani, Mar 29, 2022, 7:14 PM IST
ಗದಗ : ಇಲ್ಲಿನ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ ವೇಳೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರಿಂದ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಇಬ್ಬರು ಸಹ ಶಿಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿದ್ದ ಎಸ್.ಎಂ.ಕೃಷ್ಣಾ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂ.12 ರ ಸಹ ಶಿಕ್ಷಕ ಎಸ್.ಯು.ಹೊಕ್ಕಳದ ಹಾಗೂ ಸಿದ್ಧಲಿಂಗ ನಗರದ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕಿ ಎಸ್.ಎಂ.ಪತ್ತಾರ ಅವರನ್ನು ಅಮಾನತುಗೊಂಡಿದ್ದಾರೆ.
ಸೋಮವಾರ ನಡೆದ ಎಸ್ಎಸ್ಎಲ್ಸಿ ಪ್ರಥಮ ಭಾಷೆಯ ಪರೀಕ್ಷೆ ವೇಳೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರು ಎನ್ನಲಾಗಿದೆ. ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದ ವಿಡಿಯೋ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ವಿವರ ಪಡೆದು ಇಲಾಖೆ ಕ್ರಮ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!