ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕೋವಿಡ್ ಪಾಸಿಟಿವ್
Team Udayavani, Jul 6, 2020, 6:31 PM IST
ಮಂಡ್ಯ : ಕೋವಿಡ್ ಸೋಂಕು ಪ್ರಕರಣ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಇದೀಗ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೂ ಕೋವಿಡ್ ಸೋಂಕು ದೃಢ ಪಟ್ಟಿದೆ,
ಈ ಕುರಿತು ಸ್ವತಃ ಸಂಸದೆ ಸಾಮಾಜಿಕ ಜಾಲತಾಣದಲ್ಲಿ ವಿಷಯ ಹಂಚಿಕೊಂಡಿದ್ದಾರೆ. ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಪಡೆದುಕೊಂಡು ಅಗತ್ಯ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ.
ಮನೆಯಲ್ಲಿಯೇ ಕ್ವಾರಂಟೈನ್ ಗೆ ಒಳಪಟ್ಟಿದ್ದೀನಿ ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದರಿಂದ ಬೇಗ ಗುಣಮುಖ ಆಗುತ್ತೇನೆ. ಈಗಾಗಲೇ ನನ್ನನ್ನು ಭೇಟಿಯಾದ ವ್ಯಕ್ತಿಗಳ ವಿವರವನ್ನು ಸರಕಾರಿ ಅಧಿಕಾರಿಗಳಿಗೆ ಕೊಟ್ಟಿರುವೆ.
ಆದರೂ ನನ್ನನ್ನು ಭೇಟಿಯಾದವರಲ್ಲಿ ಯಾರಿಗಾದರೂ ಕೋವಿಡ್ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಪರೀಕ್ಷೆ ಮಾಡಿಸಲು ವಿನಂತಿಸುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ