IPL ಕೊಹ್ಲಿ ವಿರಾಟ್ ಶತಕ; ಗೆಲುವಿನೊಂದಿಗೆ ಆರ್ ಸಿಬಿಗೆ ಹೊಸ ಭರವಸೆ

ಹೈದರಾಬಾದ್ ಪರ ಹೆನ್ರಿಕ್ ಕ್ಲಾಸೆನ್ ಅತ್ಯಮೋಘ ಶತಕ

Team Udayavani, May 18, 2023, 11:00 PM IST

1wwqewqe

ಹೈದರಾಬಾದ್: ಪ್ಲೇ ಆಫ್ ಸ್ಥಾನಕ್ಕೇರಲು ತೀವ್ರ ಹೋರಾಟ ಸಂಘಟಿಸುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗುರುವಾರ ನಡೆದ ಪಂದ್ಯದಲ್ಲಿ ಅಮೋಘ ಜಯ ಸಾಧಿಸಿದೆ.

ಟಾಸ್ ಗೆದ್ದ ಫಾಫ್ ಡು ಪ್ಲೆಸಿಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೈದರಾಬಾದ್ ಹೆನ್ರಿಕ್ ಕ್ಲಾಸೆನ್ ಅವರ ಅತ್ಯಮೋಘ ಶತಕದ ನೆರವಿನಿಂದ 5 ವಿಕೆಟ್ ನಷ್ಟಕ್ಕೆ 186 ರನ್ ಕಲೆ ಹಾಕಿತು. ದಕ್ಷಿಣ ಆಫ್ರಿಕಾ ಮೂಲದ ಕ್ಲಾಸೆನ್ 51 ಎಸೆತಗಳಲ್ಲಿ ಸ್ಪೋಟಕ ಆಟವಾಡಿ 104 ರನ್ ಗಳಿಸಿ ಔಟಾದರು. 8ಬೌಂಡರಿ ಮತ್ತು 6 ಸಿಕ್ಸರ್ ಸಿಡಿಸಿದ್ದರು. ಅಭಿಷೇಕ್ ಶರ್ಮಾ 11, ತ್ರಿಪಾಠಿ 15, ನಾಯಕ ಮಾರ್ಕ್ರಾಮ್ 18, ಹ್ಯಾರಿ ಬ್ರೂಕ್ ಔಟಾಗದೆ 27, ಗ್ಲೆನ್ ಫಿಲಿಪ್ಸ್ 5 ರನ್ ಗಳಿಸಿ ಔಟಾದರು.

ಗುರಿ ಬೆನ್ನಟ್ಟಿದ ಆರ್ ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ನಾಯಕ ಪ್ಲೆಸಿಸ್ ಭರ್ಜರಿ ಜತೆಯಾಟವಾಡಿದರು. 19.2 ಓವರ್ ಗಳಲ್ಲಿ 187 ರನ್ ಗಳಿಸುವ ಮೂಲಕ ಅನಿವಾರ್ಯವಾಗಿದ್ದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿತು. ಜವಾಬ್ದಾರಿಯುತ ಆಟವಾಡಿದ ಕೊಹ್ಲಿ 62 ಎಸೆತಗಳಿಂದ ಅಮೋಘ ಶತಕ ಸಿಡಿಸಿ ಔಟಾದರು. ನಾಲ್ಕು ವರ್ಷಗಳ ನಂತರ ಐಪಿಎಲ್‌ನಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. 12 ಬೌಂಡರಿ ಮತ್ತು 4 ಸಿಕ್ಸರ್ ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿತ್ತು. ಪ್ಲೆಸಿಸ್ ನಾಯಕನ ಆಟವಾಡಿ ಕೊಹ್ಲಿಗೆ ಸಾಥ್ ನೀಡಿದರು. 47 ಎಸೆತಗಳಲ್ಲಿ 71 ರನ್ ಗಳಿಸಿ ಔಟಾದರು.

13 ಪಂದ್ಯಗಳಿಂದ 14 ಅಂಕವನ್ನು ಆರ್ ಸಿಬಿ ಗಳಿಸಿದ್ದು , ಮುಂಬೈ ಕೂಡ 13 ಪಂದ್ಯಗಳಿಂದ 14 ಅಂಕ ಹೊಂದಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.