French Open Final: ಕಿರೀಟ ಉಳಿಸಿಕೊಂಡ ಸ್ವಿಯಾಟೆಕ್
Team Udayavani, Jun 11, 2023, 6:18 AM IST
ಪ್ಯಾರಿಸ್: ಪೋಲೆಂಡ್ನ ಇಗಾ ಸ್ವಿಯಾಟೆಕ್ “ಪ್ಯಾರಿಸ್ ರಾಣಿ'”ಪಟ್ಟದಲ್ಲಿ ಮುಂದುವರಿದಿದ್ದಾರೆ. ಹಾಲಿ ಚಾಂಪಿಯನ್ ಆಗಿರುವ ಅವರು ಶನಿವಾರದ ಪ್ರಶಸ್ತಿ ಕಾಳಗದಲ್ಲಿ ಜೆಕ್ ಆಟಗಾರ್ತಿ ಕ್ಯಾರೋಲಿನಾ ಮುಕ್ಸೋವಾ ಅವರ ಆಟವನ್ನು 6-2, 5-7, 6-4 ಅಂತರದಿಂದ ಮುಗಿಸಿದರು.
ಮೊದಲ ಸೆಟ್ನ್ನು ಸುಲಭದಲ್ಲಿ ವಶಪಡಿಸಿಕೊಂಡ ಸ್ವಿಯಾಟೆಕ್, ದ್ವಿತೀಯ ಸೆಟ್ನಲ್ಲಿ ಎಡವಿದರು. ನಿರ್ಣಾಯಕ ಸೆಟ್ನ ಒಂದು ಹಂತದಲ್ಲಿ ಹಿನ್ನಡೆಯಲ್ಲಿದ್ದರು. ಆದರೆ ಮುಕ್ಸೋವಾಗೆ ಅದೃಷ್ಟ ಕೈಕೊಟ್ಟಿತು.
ಈ ಜಯದೊಂದಿಗೆ ಸ್ವಿಯಾಟೆಕ್ ಮೂರೂ ಫ್ರೆಂಚ್ ಓಪನ್ ಫೈನಲ್ನಲ್ಲಿ ಜಯಭೇರಿ ಮೊಳಗಿಸಿದಂತಾಯಿತು. ಮುಕ್ಸೋವಾ ಮೊದಲ ಸಲ ಗ್ರ್ಯಾನ್ಸ್ಲಾಮ್ ಫೈನಲ್ಗೆ ಲಗ್ಗೆ ಇರಿಸಿದ್ದರು.
22 ವರ್ಷದ ಸ್ವಿಯಾಟೆಕ್ 2005-07ರ ಬಳಿಕ ಇಲ್ಲಿ ಪ್ರಶಸ್ತಿ ಉಳಿಸಿಕೊಂಡ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಂದು ಜಸ್ಟಿನ್ ಹೆನಿನ್ ಪ್ರಶಸ್ತಿಗಳ ಹ್ಯಾಟ್ರಿಕ್ ಸಾಧಿಸಿದ್ದರು. ಹಾಗೆಯೇ ತಮ್ಮ ಮೊದಲ ನಾಲ್ಕೂ ಗ್ರ್ಯಾನ್ಸ್ಲಾಮ್ ಫೈನಲ್ಗಳನ್ನು ಗೆದ್ದ 3ನೇ ಆಟಗಾರ್ತಿ ಎನಿಸಿದರು. ಉಳಿ ದಿಬ್ಬರೆಂದರೆ ಮೋನಿಕಾ ಸೆಲೆಸ್ ಮತ್ತು ನವೋಮಿ ಒಸಾಕಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…