
99 ನೇ ವಯಸ್ಸಿನಲ್ಲಿ ದ್ವಾರಕಾ ಮಠದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿರ್ಯಾಣ
Team Udayavani, Sep 11, 2022, 6:06 PM IST

ನವದೆಹಲಿ: ಗುಜರಾತ್ ನ ದ್ವಾರಕಾ ಮಠದ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ 99 ನೇ ವಯಸ್ಸಿನಲ್ಲಿ ಬ್ರಹ್ಮೀಭೂತರಾಗಿದ್ದಾರೆ. ಅವರು ದೀರ್ಘಕಾಲದ ಅನಾರೋಗ್ಯದ ಹಿನ್ನೆಲೆಯಲ್ಲಿ ನರಸಿಂಗ್‌ಪುರ ಜಿಲ್ಲೆಯ ಶ್ರೀಧಾಮದಲ್ಲಿ ಇಹಲೋಕ ತ್ಯಜಿಸಿದ್ದಾರೆ.
ವರದಿಗಳ ಪ್ರಕಾರ, ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಹೃದಯಾಘಾತದಿಂದ ಅವರು ಭಾನುವಾರ, ಸೆ 11) ಆಶ್ರಮದಲ್ಲಿ 3:50 ಕ್ಕೆ ಕೊನೆಯುಸಿರೆಳೆದಿದ್ದಾರೆ. ಸ್ವರೂಪಾನಂದ ಸರಸ್ವತಿ ಅವರ ಅಂತಿಮ ವಿಧಿಗಳು ಸೋಮವಾರ (ಸೆ 12) ನಡೆಯಲಿದೆ.
”ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರ ಅಗಲುವಿಕೆಯಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಅನುಯಾಯಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ!” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
”ಜಗದ್ಗುರು ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿ ಜೀ ಮಹಾರಾಜ್ ಅವರ ಅಗಲುವಿಕೆಯ ಸುದ್ದಿ ಕೇಳಿ, ಮನಸ್ಸು ತೀವ್ರ ದುಃಖವಾಯಿತು. ಸ್ವಾಮೀಜಿ ತಮ್ಮ ಇಡೀ ಜೀವನವನ್ನು ಧರ್ಮ, ಆಧ್ಯಾತ್ಮಿಕತೆ ಮತ್ತು ದಾನಕ್ಕಾಗಿ ಮುಡಿಪಾಗಿಟ್ಟರು.2021 ರಲ್ಲಿ ಪ್ರಯಾಗರಾಜ್‌ನಲ್ಲಿ ಗಂಗಾ ಸ್ನಾನ ಮಾಡಿದ ನಂತರ, ಅವರ ಆಶೀರ್ವಾದವನ್ನು ಪಡೆದಿದ್ದೆ” ಎಂದು ಪ್ರಿಯಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.
1982 ರಲ್ಲಿ, ಸ್ವಾಮಿ ಸ್ವರೂಪಾನಂದ ಸರಸ್ವತಿ ಅವರು ಗುಜರಾತ್‌ನ ದ್ವಾರಕಾದಲ್ಲಿರುವ ದ್ವಾರಕಾ ಶಾರದಾ ಪೀಠ ಮತ್ತು ಬದರಿನಾಥದ ಜ್ಯೋತಿರ್ ಮಠದ ಪೀಠಾಧಿಪತಿಯಾಗಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾಜಿ ಕಾನೂನು ಸಚಿವ, ಖ್ಯಾತ ವಕೀಲ ಶಾಂತಿ ಭೂಷಣ್ ಇನ್ನಿಲ್ಲ

ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ದಾಖಲೆ ಹಸ್ತಾಂತರಿಸಿದ ಮಮತಾ ಬ್ಯಾನರ್ಜಿ

ಪಿಎಂ ಕೇರ್ಸ್ ಸರ್ಕಾರದ್ದಲ್ಲ, ಸ್ವತಂತ್ರ ದತ್ತಿ ಸಂಸ್ಥೆ!

ಅಪಪ್ರಚಾರಕ್ಕಾಗಿ ಬಿಬಿಸಿಗೆ ಚೀನಾದಿಂದ ಹಣಕಾಸು ನೆರವು? ಬಿಜೆಪಿ ಸಂಸದ ಮಹೇಶ್ ಜೇಠ್ಮಲಾನಿ

ವಿಮಾನದಲ್ಲಿ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ: ಆರೋಪಿ ಶಂಕರ್ ಮಿಶ್ರಾಗೆ ಜಾಮೀನು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
