ಶಿಕ್ಷಕರು ಜೀನ್ಸ್, ಲೆಗ್ಗಿನ್ಸ್ ಧರಿಸುವಂತಿಲ್ಲ !
Team Udayavani, May 21, 2023, 7:30 AM IST
ದಿಸ್ಪುರ್: ಅಸ್ಸಾಂನ ಎಲ್ಲ ಶಿಕ್ಷಕ ಹಾಗೂ ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ನೂತನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಇನ್ನು ಮುಂದೆ ಕರ್ತವ್ಯದ ಸಂದರ್ಭದಲ್ಲಿ ಶಿಕ್ಷಕರು ಜೀನ್ಸ್ ಅಥವಾ ಲೆಗ್ಗಿನ್ಸ್ ಧರಿಸಿ ಶಾಲೆಗಳಿಗೆ ಹಾಜರಾಗುವಂತಿಲ್ಲ ಎಂದು ಆದೇಶಿಸಲಾಗಿದೆ. ಪುರುಷ ಶಿಕ್ಷಕರು ಶರ್ಟ್, ಪ್ಯಾಂಟ್ ಧರಿಸಲು ಸೂಚಿಸಲಾಗಿದೆ. ಜೀನ್ಸ್, ಕ್ಯಾಶ್ಯುವಲ್ಸ್, ಟಿ-ಶರ್ಟ್ ಧರಿಸುವಂತಿಲ್ಲ. ಶಿಕ್ಷಕಿಯರು ಸಲ್ವಾರ್, ಸೀರೆಯುಟ್ಟು ಬರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಶಿಕ್ಷಕರು ಸಮಾಜಕ್ಕೆ ಮಾದರಿಯಾಗಿರುವ ಹಿನ್ನೆಲೆ ಕರ್ತವ್ಯನಿರತರಾಗಿರುವಾಗ ಅವರು ಧರಿಸುವ ವಸ್ತ್ರಗಳು ಶಿಸ್ತಿನಿಂದ ಕೂಡಿರುವುದು ಅಗತ್ಯ. ಕೆಲ ಶಾಲೆಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ತಮಗಿಷ್ಟ ಬಂದಂತೆ ವಸ್ತ್ರಗಳನ್ನು ಧರಿಸಿದ್ದು, ಆ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹೊಸ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್