ಕೋವಿಡ್ ಇಳಿಮುಖ: ತೆಲಂಗಾಣದಲ್ಲಿ ಜೂ.20ರಿಂದ ಲಾಕ್ ಡೌನ್ ನಿರ್ಬಂಧ ಸಂಪೂರ್ಣ ತೆರವು
ಭಾನುವಾರವೂ ಎಲ್ಲಾ ವ್ಯಾಪಾರ, ವಹಿವಾಟುಗಳಿಗೆ ಅವಕಾಶ ನೀಡಲಾಗುವುದು ಎಂದು ವರದಿ ತಿಳಿಸಿದೆ.
Team Udayavani, Jun 19, 2021, 4:48 PM IST
ಹೈದರಾಬಾದ್: ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದ ಬೆನ್ನಲ್ಲೇ ತೆಲಂಗಾಣ ಸರ್ಕಾರ ಜೂನ್ 19ರ ರಾತ್ರಿಯಿಂದ ಎಲ್ಲಾ ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ಕೋವಿಡ್ ಲಾಕ್ ಡೌನ್ ತೆರವುಗೊಳಿಸುವುದಾಗಿ ಘೋಷಿಸಿದೆ. ಕೋವಿಡ್ ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಮೋದಿಯವರ ಪೌರುಷವೇನಿದ್ದರೂ ಪಾಕಿಸ್ತಾನದ ವಿರುದ್ದ ಅಷ್ಟೇ: ಸಿದ್ದರಾಮಯ್ಯ
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ, ಪಾಸಿಟಿವಿಟಿ ದರ ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ಕೋವಿಡ್ ಸೋಂಕು ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ ಎಂದು ಹೇಳಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಕೋವಿಡ್ ಲಾಕ್ ಡೌನ್ ತೆರವುಗೊಳಿಸಬಹುದು ಎಂದು ವೈದ್ಯಕೀಯ ತಜ್ಞರು ನೀಡಿದ ವರದಿಯನ್ನು ಪರಿಶೀಲಿಸಿದ ನಂತರ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ.
ಲಾಕ್ ಡೌನ್ ತೆರವಿಗೂ ಮುನ್ನ ಬೆಳಗ್ಗೆ 6ಗಂಟೆಯಿಂದ 5ಗಂಟೆವರೆಗೆ ಕೆಲವೊಂದು ನಿರ್ಬಂಧ ಸಡಿಲಿಕೆ ಮಾಡುವುದಾಗಿ ಘೋಷಿಸಿತ್ತು. ಅಲ್ಲದೇ ಸಂಜೆ 6ಗಂಟೆವರೆಗೆ ಕಚೇರಿಯಿಂದ ಮನೆಗಳಿಗೆ ತೆರಳಲು ಜನರಿಗೆ ಅವಕಾಶ ಕಲ್ಪಿಸಿಕೊಟ್ಟಿರುವುದಾಗಿ ತಿಳಿಸಿದೆ.
ಭಾನುವಾರದಿಂದ(ಜೂನ್ 20) ರಾಜ್ಯದಲ್ಲಿನ ಕೋವಿಡ್ ಲಾಕ್ ಡೌನ್ ನಿರ್ಬಂಧ ರದ್ದುಗೊಳ್ಳಲಿದೆ. ಅಷ್ಟೇ ಅಲ್ಲ ಭಾನುವಾರವೂ ಎಲ್ಲಾ ವ್ಯಾಪಾರ, ವಹಿವಾಟುಗಳಿಗೆ ಅವಕಾಶ ನೀಡಲಾಗುವುದು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ