ಜಮ್ಮು-ಕಾಶ್ಮೀರ: ಉಗ್ರರ ದಾಳಿ ಸಂಚು ವಿಫಲ, ಶಸ್ತ್ರಾಸ್ತ್ರ ಸಹಿತ ಮೂವರ ಬಂಧನ
ಮೂವರ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ
Team Udayavani, Jan 29, 2022, 2:56 PM IST
ನವದೆಹಲಿ: ಜಮ್ಮು-ಕಾಶ್ಮೀರದ ಪೊಲೀಸರು ಶುಕ್ರವಾರ (ಜನವರಿ 29) ಭಯೋತ್ಪಾದಕ ದಾಳಿ ಸಂಚನ್ನು ವಿಫಲಗೊಳಿಸಿದ್ದು, ದ ರೆಸಿಸ್ಟೆನ್ಸ್ ಫ್ರಂಟ್ ಹಾಗೂ ಲಷ್ಕರ್ ಎ ತೊಯ್ಬಾ ಸಂಘಟನೆ ಜತೆ ಸಂಪರ್ಕ ಹೊಂದಿರುವ ಮೂವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ವೈರಲ್ ಸಾಂಗ್ ‘ಕಚಾ ಬದಾಮ್’ ಹಾಡಿ ಟ್ರೋಲಾದ ರಾನು ಮಂಡಲ್: ವಿಡಿಯೋ ನೋಡಿ
ಶುಹಾಮಾ ಪ್ರದೇಶದಲ್ಲಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಗಂದೇರ್ಬಾಲ್ ಪೊಲೀಸರು, ಸಿಆರ್ ಪಿಎಫ್ ಜಂಟಿಯಾಗಿ ಮೂವರು ಶಂಕಿತ ಉಗ್ರರನ್ನು ಬಂಧಿಸಿದ್ದು, ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿ ಹೇಳಿದೆ.
ಬಂಧಿತ ಉಗ್ರರನ್ನು ಶೋಪಿಯಾನ್ ನ ಫೈಸಲ್ ಮಂಝೂರ್, ಝೈಪೋರಾ ಶೋಪಿಯಾನ್ ನ ಅಝಾರ್ ಯಾಕೂಬ್ ಮತ್ತು ಬೇಗಂ ಕುಲ್ಗಾಮ್ ನ ನಾಸಿರ್ ಅಹ್ಮದ್ ಎಂದು ಗುರುತಿಸಲಾಗಿದೆ. ಉಗ್ರರ ಬಳಿ ಇದ್ದ ಎರಡು ಚೀನಾ ನಿರ್ಮಿತ ಪಿಸ್ತೂಲ್, ಮೂರು ಮ್ಯಾಗಝೈನ್ಸ್, ಎರಡು ಹ್ಯಾಂಡ್ ಗ್ರೆನೇಡ್, ಮೂರು ಮೊಬೈಲ್ ಫೋನ್ ವಶಪಡಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಸಂಬಂಧಿಸಿದ ಚಟುವಟಿಕೆಯಲ್ಲಿ ತೊಡಗಿಕೊಂಡಿರುವುದಾಗಿ ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿದ್ದು, ಮೂವರ ವಿರುದ್ಧ ವಿವಿಧ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜೀವ್ ಹತ್ಯೆ ಪ್ರಕರಣ:ಜೀವಾವಧಿ ಶಿಕ್ಷೆಗೊಳಗಾಗಿದ್ದ ಪೆರಾರಿವಾಳನ್ ಬಿಡುಗಡೆಗೆ ಸುಪ್ರೀಂ ಆದೇಶ
ಹಾಸಿಗೆಗಾಗಿ ಆನೆಯ ಕಿತ್ತಾಟ -ವಿಡಿಯೋ ವೈರಲ್
ಮತ್ತೆ ಆರೆಂಜ್ ಅಲರ್ಟ್; ಎರ್ನಾಕುಳಂ, ಇಡುಕ್ಕಿ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಮ ಮಂದಿರ ಅಡಿಪಾಯ ಆಗಸ್ಟ್ಗೆ ಸಂಪೂರ್ಣ : ಫೆಬ್ರವರಿಯಲ್ಲಿ ಆರಂಭವಾಗಿದ್ದ ಕಾಮಗಾರಿ
ಪತ್ನಿಗೆ ಸೀರೆ ಉಡಲು ಬರುವುದಿಲ್ಲ: ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ !