
ಮಂಗಳೂರು ವಿಮಾನ ನಿಲ್ದಾಣ; ಕಸ್ಟಮ್ಸ್ ಅಧಿಕಾರಿಗಳಿಂದ 1 ಕೆಜಿ 913 ಗ್ರಾಂ ಚಿನ್ನ ವಶ
ಕಳ್ಳ ಸಾಗಾಣಿಕೆಗೆ ಗುದನಾಳ ಸೇರಿ ವಿವಿಧ ರೂಪಗಳು
Team Udayavani, Mar 16, 2023, 9:49 PM IST

ಮಂಗಳೂರು : ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಫೆಬ್ರವರಿ ತಿಂಗಳಿನಲ್ಲಿ ಭಾರಿ ಚಿನ್ನ ಕಳ್ಳಸಾಗಣೆ ಯತ್ನವನ್ನು ವಿಫಲಗೊಳಿಸಿದ್ದು,1 ಕೆಜಿ 913 ಗ್ರಾಂ ಚಿನ್ನ ವಶಕ್ಕೆ ಪಡೆದಿದ್ದಾರೆ.
ಫೆ.16 ರಿಂದ 28ರ ವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ ಅಧಿಕಾರಿಗಳು ದುಬೈ ಮತ್ತು ಅಬುಧಾಬಿಯಿಂದ ಆಗಮಿಸಿದ ಆರು ಮಂದಿ ಪುರುಷ ಮತ್ತು ಓರ್ವ ಮಹಿಳಾ ಪ್ರಯಾಣಿಕರಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಈ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ವಶಪಡಿಸಿಕೊಳ್ಳಲಾದ 24 ಕ್ಯಾರೆಟ್ ಶುದ್ಧ ಚಿನ್ನದ ಮಾರುಕಟ್ಟೆ ಮೌಲ್ಯ 1 ಕೋಟಿಯ 08 ಲಕ್ಷದ 28 ಸಾವಿರದ 240 ರೂ.ಆಗಿದೆ.
ಚಿನ್ನವನ್ನು ಪೇಸ್ಟ್ ರೂಪದಲ್ಲಿ ಘನ ಗಮ್‌ನೊಂದಿಗೆ ಬೆರೆಸಿ ಅಂಡಾಕಾರದ ಪ್ಯಾಕೆಟ್‌ಗಳಾಗಿ ಮಾಡಿ ಗುದನಾಳದಲ್ಲಿ ಮರೆಮಾಚಿ, ಡಬಲ್ ಲೇಯರ್ ಶರ್ಟ್ ನಲ್ಲಿ ಮರೆಮಾಚಿದ್ದು ಸೇರಿ ವಿವಿಧ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

Fraud Case ಮೆಸ್ ಮ್ಯಾನೇಜರ್, ಸಿಬಂದಿಯಿಂದ ಮಾಲಕರಿಗೆ 30 ಲಕ್ಷ ರೂ. ವಂಚನೆ

CCB Police ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ

Karnataka Bandh; ಕರಾವಳಿಯಲ್ಲಿ ಸಂಘಟನೆಗಳಿಂದ ನೈತಿಕ ಬೆಂಬಲ; ಬಸ್ ಸಂಚಾರ ಎಂದಿನಂತೆ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ