ದಿ ಗ್ರೇಟ್ ಖಲಿ ಬಿಜೆಪಿಗೆ ಸೇರ್ಪಡೆ : ಮೋದಿ ಕಾರ್ಯಗಳಿಂದ ಪ್ರಭಾವಿತನಾಗಿದ್ದೇನೆ
Team Udayavani, Feb 10, 2022, 6:27 PM IST
ನವದೆಹಲಿ: ಡಬ್ಲ್ಯೂ ಡಬ್ಲ್ಯೂ ಇ ದೈತ್ಯ ಕ್ರೀಡಾಳು ‘ದಿ ಗ್ರೇಟ್ ಖಲಿ’ ಎಂದೇ ಖ್ಯಾತರಾಗಿರುವ ದಲೀಪ್ ಸಿಂಗ್ ರಾಣಾ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ದೇಶದ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಗಳಿಂದ ಪ್ರಭಾವಿತನಾಗಿದ್ದೇನೆ ಎಂದು ಹೇಳಿದ್ದಾರೆ.
ಮಾಜಿ ಪಂಜಾಬ್ ಪೊಲೀಸ್ ಅಧಿಕಾರಿ, ರಾಣಾ ಅವರು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಸಮ್ಮುಖದಲ್ಲಿ ಪ್ರಧಾನ ಕಚೇರಿಯಲ್ಲಿ ಪಕ್ಷಕ್ಕೆ ಸೇರಿದರು.
ಮೋದಿಯವರಲ್ಲಿ ಭಾರತಕ್ಕೆ ಉತ್ತಮ ಪ್ರಧಾನಿ ಸಿಕ್ಕಿದ್ದಾರೆ ಮತ್ತು ದೇಶದ ಅಭಿವೃದ್ಧಿಯ ಕಾರ್ಯದಲ್ಲಿ ಭಾಗಿಯಾಗಲು ಬಯಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ ಎಂದು ಖಲಿ ಹೇಳಿದರು.
ವಿಶೇಷವೆಂದರೆ , ಈಗ ರದ್ದುಗೊಂಡಿರುವ ಮೂರು ಕೃಷಿ ಸುಧಾರಣಾ ಕಾನೂನುಗಳ ವಿರುದ್ಧ ಒಂದು ವರ್ಷದ ರೈತರ ಆಂದೋಲನಕ್ಕೆ ಖಲಿ ತನ್ನ ಬೆಂಬಲವನ್ನು ನೀಡಿದ್ದರು.
ಖಲಿ ಅವರು ರಾಷ್ಟ್ರೀಯವಾದಿ ಸಿದ್ಧಾಂತದ ವ್ಯಕ್ತಿಯಾಗಿದ್ದು, ಅವರು ಎಲ್ಲಿ ವಾಸಿಸುತ್ತಿದ್ದರೂ ಅವರ ಹೃದಯವು ಭಾರತದಲ್ಲಿ ಉಳಿಯುತ್ತದೆ ಎಂದು ಜಿತೇಂದ್ರ ಸಿಂಗ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ