ಬಂಡೆಗೂ ತಟ್ಟಿದ ಬಿಸಿ!: Andhra Pradeshದಲ್ಲಿ ಬಿಸಿಲಿನ ತಾಪಕ್ಕೆ ಬಿರುಕು ಬಿಟ್ಟ ಬಂಡೆಕಲ್ಲು

Team Udayavani, Apr 13, 2023, 7:42 AM IST

temparature

ಕರ್ನೂಲು/ಹೊಸದಿಲ್ಲಿ: “ಅವನು ಬಂಡೆ… ಬಂಡೆಯಂಥ ವ್ಯಕ್ತಿ. ಯಾವುದಕ್ಕೂ ಬಗ್ಗಲ್ಲ” ಎಂದು ಹೇಳುವುದನ್ನು ಕೇಳಿರುತ್ತೀರಿ. ಆದರೆ ದೇಶವು ಈಗ ಅನುಭವಿಸುತ್ತಿರುವ ಬಿಸಿಲಿನ ಬೇಗೆಯು ಬೃಹತ್‌ ಬಂಡೆಯನ್ನೂ ಬಿಟ್ಟಿಲ್ಲ!

ಹೌದು ದೇಶಾದ್ಯಂತ ಬಿಸಿಲಿನ ಝಳವು ದಿನ ಕಳೆದಂತೆ ದಾಖಲೆ ಬರೆಯ­ತೊಡಗಿದ್ದು, ವಿಪರೀತ ಸೆಕೆಯಿಂದ ಜನ ಬಳಲಿ ಬೆಂಡಾಗುತ್ತಿದ್ದಾರೆ. ಮನುಷ್ಯ­ರೇನು, ಬೃಹತ್‌ ಬಂಡೆಕಲ್ಲು­ಗಳಿಗೂ “ಬಿಸಿ” ತಟ್ಟಿದೆ. ಆಂಧ್ರ ಪ್ರದೇಶದ ಕರ್ನೂಲು ಜಿಲ್ಲೆ ಯ ಗೋನೆಗಂಡ್ಲಾ ಗ್ರಾಮದಲ್ಲಿ ಮನೆಗಳ ನಡುವೆ ಬೃಹತ್ತಾಗಿ ಬೆಳೆದು ನಿಂತಿದ್ದ ಬಂಡೆಕಲ್ಲೊಂದು ಬಿಸಿಲು ತಾಳಲಾರದೇ ಬಿರುಕು ಬಿಟ್ಟಿದೆ!

ಮಂಗಳವಾರವೇ ಈ ಘಟನೆ ನಡೆದಿದ್ದು, ಕೂಡಲೇ ಕರ್ನೂಲು ಜಿಲ್ಲಾಧಿಕಾರಿ ಶ್ರೀಜನ ಗುಮ್ಮಲ್ಲ ಅವರು ಆ ಪ್ರದೇಶದಲ್ಲಿದ್ದ ಸುಮಾರು 150 ಕುಟುಂಬ­ಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.

“ಬಂಡೆಯಲ್ಲಿ ಬಿರುಕು ಉಂಟಾಗಿದೆ. ಸದ್ಯದಲ್ಲೇ ಎರಡು ಎರಡು ಹೋಳಾಗಿ ಕೆಳಕ್ಕೆ ಬೀಳುವ ಅಪಾ ಯವಿದೆ. ಅದೃಷ್ಟವಶಾತ್‌ ಸದ್ಯಕ್ಕೆ ಅಂಥದ್ದೇನೂ ಅನಾಹುತ ಆಗಿಲ್ಲ. ನಾವು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ವಿಪತ್ತು ನಿರ್ವಹಣ ಪಡೆಯನ್ನು ನಿಯೋಜಿಸಿ, ಗ್ರಾಮಸ್ಥರನ್ನು ಸ್ಥಳಾಂತರಿಸಿದ್ದೇವೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಬಿರುಕು ಬಿಟ್ಟಿರುವ ಬಂಡೆಯು ಅಕ್ಕಪಕ್ಕದಲ್ಲಿರುವ ಮನೆಗಳ ಮೇಲೆ ಬೀಳುವ ಸಾಧ್ಯ ತೆಯಿದೆ. ಬಿರುಕು ಮುಚ್ಚಿ ಅನಾಹುತ ತಪ್ಪಿಸುವಂತೆ ಸಿಮೆಂಟ್‌ ಕಂಪೆನಿಗಳಿಗೆ ಮನವಿ ಮಾಡಿದ್ದೇವೆ” ಎಂದು ಜಿಲ್ಲಾಧಿಕಾರಿ ಗುಮ್ಮಲ್ಲ ಹೇಳಿದ್ದಾರೆ. ಗೋನೆ ಗಂಡ್ಲಾದಲ್ಲಿ ಮಂಗಳವಾರ ಗರಿಷ್ಠ ತಾಪಮಾನ 38.2 ಡಿ.ಸೆ. ಇತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬುಧವಾರವೂ ತಾಪಮಾನ ಏರಿಕೆ: ಬುಧವಾರ ಗೋಲುಗೊಂಡಾದಲ್ಲಿ 42.3 ಡಿ.ಸೆ., ಕುನಾವರಂನಲ್ಲಿ 46 ಡಿ.ಸೆ., ನಾಥವರಂನಲ್ಲಿ 42 ಡಿ.ಸೆ, ಕೋಟನಂದು­ರುನಲ್ಲಿ 41 ಡಿ.ಸೆ. ತಾಪಮಾನ ದಾಖಲಾಗಿದೆ.

217 ಬೇಸಗೆ ವಿಶೇಷ ರೈಲು
ಬೇಸಗೆ ಋತುವಿನಲ್ಲಿ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಮತ್ತು ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿ ನಲ್ಲಿ ರೈಲ್ವೇ ಸಚಿವಾಲಯವು, 217 ವಿಶೇ ಷ ರೈಲುಗಳ ಸಂಚಾರ ಆರಂಭಿಸುತ್ತಿರು­ವು ದಾಗಿ ಘೋಷಿಸಿದೆ. ಪಟ್ನಾ, ಮುಂಬಯಿ, ಬೆಂಗ ಳೂರು, ಚೆನ್ನೈಯಂಥ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರಯಾಣ ಬೆಳೆಸುವವರಿಗೆ ಇದರಿಂದ ಅನುಕೂಲವಾಗಲಿದೆ.

ಭಾರತೀಯ ಹವಾಮಾನ ಇಲಾಖೆಯು ಬುಧವಾರ ತೆಲಂಗಾಣದ ಬಹುತೇಕ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಈ ವಾರ ಇಲ್ಲಿ ಗರಿಷ್ಠ ತಾಪಮಾನ 45 ಡಿ.ಸೆ.ಗೆ ತಲುಪುವ ಅಪಾಯವಿದೆ ಎಂದು ಇಲಾಖೆ ಎಚ್ಚರಿಸಿದೆ. ಹೈದರಾಬಾದ್‌ಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬುಧವಾರ ಅದಿಲಾಬಾದ್‌ನಲ್ಲಿ 42.2 ಡಿ.ಸೆ. ತಾಪಮಾನ ದಾಖಲಾಗಿದೆ. ದಿಲ್ಲಿಯಲ್ಲೂ ಗರಿಷ್ಠ ತಾಪಮಾನ 40 ಡಿ.ಸೆ. ಆಗಿದ್ದು, ಮಹಾರಾಷ್ಟ್ರದ ಚಂದ್ರಾಪುರದಲ್ಲೂ
40ಡಿ.ಸೆ. ಆಗಿದೆ. ವಿದರ್ಭದಲ್ಲಿ 41.8 ಡಿ.ಸೆ.ಗೆ ತಲುಪಿದೆ.

ಒಡಿಶಾದಲ್ಲಿ ಶಾಲೆಗಳಿಗೆ ರಜೆ
ಒಡಿಶಾದಲ್ಲಿ ಬಿಸಿ ಗಾಳಿಯ ತೀವ್ರತೆ ಹೆಚ್ಚಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ನವೀನ್‌ ಪಟ್ನಾಯಕ್‌ ನೇತೃತ್ವದ ಸರಕಾರವು ರಾಜ್ಯಾದ್ಯಂತ ಎಲ್ಲ ಶಾಲೆಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಿದ್ದಾರೆ. ಎ.12ರಿಂದ 16ರವರೆಗೆ 10ನೇ ತರಗತಿಯವರೆಗಿನ ಎಲ್ಲ ಸರಕಾರಿ ಮತ್ತು ಖಾಸಗಿ ಶಾಲೆಯ ಮಕ್ಕಳು ಶಾಲೆಗಳಿಗೆ ಬರದಂತೆ ಸೂಚಿಸಲಾಗಿದೆ. ಜತೆಗೆ, ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮ ಕೈಗೊಳ್ಳು ವಂತೆಯೂ ಅಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದಾರೆ.

ಒಂದು ಲಕ್ಷ ಎಕ್ರೆ ಮಹಾ ಬೆಳೆಹಾನಿ
ಬಿಸಿಲಿನ ನಡುವೆಯೇ ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಒಂದು ಲಕ್ಷ ಎಕರೆ ಬೆಳೆಹಾನಿಯಾಗಿದೆ ಎಂದು ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಅಜಿತ್‌ ಪವಾರ್‌ ಹೇಳಿದ್ದಾರೆ.

ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರಕಾರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿರುವ ಅವರು, ಈರುಳ್ಳಿ, ಪಪ್ಪಾಯ, ದ್ರಾಕ್ಷಿ ಸಹಿತ ವಿವಿಧ ಬೆಳೆಗಳು ನಾಶವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.