ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಅವಕಾಶವಿಲ್ಲ: ನಳಿನ್ ಕುಮಾರ್ ಕಟೀಲ್
Team Udayavani, Nov 29, 2022, 11:44 AM IST
ಬೆಂಗಳೂರು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಸೈಲೆಂಟ್ ಸುನೀಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.
ಇದನ್ನೂ ಓದಿ:ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ
ಬಿಜೆಪಿ ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳ್ಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಪೊಲೀಸರಿಂದ ತನಿಖೆ
ದಾವಣಗೆರೆ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಿಸಿದ ಸ್ಥಳೀಯರು
ಸಮುದಾಯದಲ್ಲಿ ಒಡಕು ಮೂಡಿಸುವ ಹುನ್ನಾರ: HDK ವಿರುದ್ಧ ವಿಜಯಪುರದಲ್ಲಿ ವಿಪ್ರರ ಪ್ರತಿಭಟನೆ
ಕಲಘಟಗಿ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ ಮುಂದಡಿ
ದಾವಣಗೆರೆ: ಅಪ್ರಾಪ್ತೆಯ ವಿವಾಹಕ್ಕೆ ತಯಾರಿ… ಅಧಿಕಾರಿಗಳಿಂದ ವಿವಾಹಕ್ಕೆ ತಡೆ
MUST WATCH
ಹೊಸ ಸೇರ್ಪಡೆ
ಹಳ್ಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ: ಪೊಲೀಸರಿಂದ ತನಿಖೆ
ಮಳೆ ಬಂದಾಗ ಅಣಬೆ ಹುಟ್ಟುತ್ತದೆ…. ಶಾಸಕ ಮಠಂದೂರು ಹೇಳಿಕೆಗೆ ಪುತ್ತಿಲ ಬೆಂಬಲಿಗರ ಆಕ್ರೋಶ
ಬರಲಿದೆ ಕ್ಯೂಆರ್ ಕೋಡ್ ಆಧರಿತ ಕಾಯಿನ್ ವೆಂಡಿಂಗ್ ಮಷಿನ್
ದಾವಣಗೆರೆ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದವನ ರಕ್ಷಿಸಿದ ಸ್ಥಳೀಯರು
ಸಮುದಾಯದಲ್ಲಿ ಒಡಕು ಮೂಡಿಸುವ ಹುನ್ನಾರ: HDK ವಿರುದ್ಧ ವಿಜಯಪುರದಲ್ಲಿ ವಿಪ್ರರ ಪ್ರತಿಭಟನೆ