ಈ ಬಜೆಟ್ ರಾಜ್ಯದ ರೈತರಿಗೆ ವರದಾನ: ಸಂಸದ ಈರಣ್ಣ ಕಡಾಡಿ

ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ

Team Udayavani, Feb 1, 2023, 4:28 PM IST

1-asd-sa-das

ಮೂಡಲಗಿ: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ. ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ 5,300 ಕೋಟಿ ರೂ.ಗಳ ಅನುಧಾನ ನೀಡಿರುವುದು ರಾಜ್ಯದ ರೈತರಿಗೆ ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಬಜೆಟ್‌ನ್ನು ಸ್ವಾಗತಿಸಿದ್ದಾರೆ.

ಬುಧವಾರದಂದು ಕೇಂದ್ರ ಸರ್ಕಾರ ಮಂಡಿಸಿರುವ ಅಮೃತ ಕಾಲ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿ, 2023-24ನೇ ಸಾಲಿನ ಬಜೆಟ್ ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.

ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಕ್ರಮ ವಹಿಸಲಾಗಿದೆ. ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ ನ್ಯಾಷನಲ್ ಇನ್​ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್ ಸಂಸ್ಥೆಗೆ ಅಗತ್ಯ ನೆರವು ನೀಡಲಾಗಿದೆ. ತೋಟಗಾರಿಕೆ ಬೆಳೆಗಳ ಇಳುವರಿ ಹೆಚ್ಚಳ ಹಾಗೂ ಬೆಳೆಪದ್ಧತಿ ಸುಧಾರಣೆಗಾಗಿ ಶುದ್ಧ ಸಸಿ ಕಾರ್ಯಕ್ರಮ, ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ ಮಾಡುವ ಗುರಿ, ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟ್ಅಪ್‌ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ ಸ್ಥಾಪನೆ, ಅಗ್ರಿ ಸ್ಟಾರ್ಟಪ್‌ಗಳನ್ನು ಉತ್ತೇಜಿಸಲು ಹೊಸ ನಿಧಿಯ ಘೋಷಣೆ. ಮುಂದಿನ ೩ ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ನೆರವು ಸಿಗಲಿದೆ ಎಂದಿದ್ದಾರೆ.

ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡುವ ಮೂಲಕ ಕೃಷಿ ಸಾಲದ ಗುರಿಯನ್ನು20 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ. ಕಳೆದ ಆರು ವರ್ಷಗಳಲ್ಲಿ ದೇಶದ ಕೃಷಿ ಕ್ಷೇತ್ರವು ಸರಾಸರಿ ವಾರ್ಷಿಕ ಶೇ.4.6 ಬೆಳವಣಿಗೆ ದರದಲ್ಲಿ ಬೆಳೆಯುತ್ತಿದೆ ಎಂದರು.

63,000 ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿಗಳನ್ನು 2,561 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಗಣಕೀಕರಣಗೊಳಿಸಲಾಗುತ್ತಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ರೂ 2 ಲಕ್ಷದಷ್ಟು ಸಾಲವನ್ನು ನಗದು ರೂಪದಲ್ಲಿ ನೀಡಲು ಮತ್ತು ರೂ 2 ಲಕ್ಷದಷ್ಟು ಹಣವನ್ನು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ. ಒಂದು ಜಿಲ್ಲೆ ಒಂದು ಉತ್ಪನ್ನಕ್ಕೆ ಪ್ರೋತ್ಸಾಹ, ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಪಿಎಂ ಮತ್ಸ್ಯ ಸಂಪದ ಯೋಜನೆಯಡಿ ರೂ.6,000 ಕೋಟಿ ಅನುದಾನ. “ದೇಖೋ ಅಪ್ನಾ ದೇಶ್” ಪ್ರವಾಸೋದ್ಯಮಕ್ಕೆ ಹೊಸ ಯೋಜನೆ. ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್-ಪಾರಂಪರಿಕ ಕುಶಲಕರ್ಮಿಗಳಿಗೆ ಸಹಾಯದ ಪ್ಯಾಕೇಜ್. ವಸತಿ ಕ್ಷೇತ್ರಕ್ಕೆ ಈ ವರ್ಷ ರೂ 79,000 ಕೋಟಿ ಅನುದಾನ ಘೋಷಣೆ. ರೈಲ್ವೆ ಇಲಾಖೆಯಲ್ಲಿ ರೂ 2.40 ಲಕ್ಷ ಕೋಟಿ ಬಂಡವಾಳ ಹೂಡಿಕೆ. ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯತಿ ನೀಡಿ, ಮಹಿಳೆಯರು, ಎಸ್‌ಸಿ, ಎಸ್‌ಟಿ ವರ್ಗದವರಿಗೆ, ಯುವಕರಿಗೆ ಪ್ರಮುಖ ಆದ್ಯತೆ ನೀಡಿ ಸಶಕ್ತ, ಸ್ವಾವಲಂಬಿ ನವಭಾರತ ನಿರ್ಮಾಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಅವರು ಮಂಡಿಸಿರುವ ಅಮೃತ ಕಾಲ ಬಜೆಟ್ ಅತ್ಯಂತ ಆಶಾದಾಯಕವಾಗಿದೆ ಎಂದು ಕಡಾಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

ಉಡುಪಿ: ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

ಚುನಾವಣಾ ಅಕ್ರಮ ಆರೋಪ: ಜೆಡಿಎಸ್ ಶಾಸಕ ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

2–gadaga

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಪ್ರಚಾರ ಸಾಮಗ್ರಿ ವಶಕ್ಕೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsasd

ಹುಣಸೂರು: ರೌಡಿ ತನ್ವಿರ್‌ ಬೇಗ್ ಬೆಳಗಾವಿಗೆ ಗಡಿಪಾರು

1-wwqeq3

ಮೇರು ಗಾಯಕ; ಕಿರಾಣಾ ಘರಾಣಾ ಶೈಲಿಯ ಕೊಂಡಿ ಜಯತೀರ್ಥ ಮೇವುಂಡಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

shashikala-jolle

ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್

1-q222qe

ದೊಡ್ಡಣಗುಡ್ಡೆ ‘ಭವಾನಿ ರೆಸಿಡೆನ್ಸಿ’ ವಸತಿ ಸಮುಚ್ಚಯ ಮಾ. 31ರಂದು ಉದ್ಘಾಟನೆ