ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ : ತೇಜಸ್ವಿ ಸೂರ್ಯ
Team Udayavani, Feb 1, 2023, 2:57 PM IST
ನವದೆಹಲಿ : ”ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಜೆಟ್ ಕರ್ನಾಟಕದ ಪಾಲಿಗೆ ಗೇಮ್ ಚೇಂಜರ್ ಆಗಲಿದೆ” ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ.
”ಕರ್ನಾಟಕದ ಮೇಲ್ಮಟ್ಟದ ಭದ್ರಾ ಪ್ರದೇಶಕ್ಕೆ 5,000 ಕೋಟಿ ರೂಪಾಯಿಗೂ ಹೆಚ್ಚು ನೀರಾವರಿ ಯೋಜನೆಯನ್ನು ಘೋಷಿಸಿದ್ದಕ್ಕಾಗಿ ನಾನು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಯೋಜನೆ ರಾಜ್ಯಕ್ಕೆ ದೊಡ್ಡ ಬದಲಾವಣೆ ತರಲಿದೆ” ಎಂದಿದ್ದಾರೆ.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗಳು ಮೇ ತಿಂಗಳಿನಲ್ಲಿ ನಡೆಯುವ ಸಾಧ್ಯತೆಗಳಿದ್ದು ಬಹು ಬೇಡಿಕೆಯ ಭದ್ರಾ ಮೇಲ್ದಂಡೆ ಯೋಜನೆಗೆ ಈ ಬಾರಿ ಕೇಂದ್ರ ಬಜೆಟ್ ನಲ್ಲಿ 5300 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಲಾಗಿದೆ.