
ಹೀಗೂ ಉಂಟು: ಕುಂದಾಪುರಕ್ಕೆ ಇನ್ನೂ ಸಿಕ್ಕಿಲ್ಲ ಸಚಿವ ಸ್ಥಾನದ ಭಾಗ್ಯ !
Team Udayavani, Apr 1, 2023, 8:15 AM IST

ಕುಂದಾಪುರ: 1952ರಿಂದ ಈವರೆಗೂ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದವರು ಸಚಿವರಾಗಿಲ್ಲ. ವಕ್ವಾಡಿ ಶ್ರೀನಿವಾಸ ಶೆಟ್ಟರು ವಿರೋಧ ಪಕ್ಷದ ನಾಯಕರಾಗಿದ್ದರು. ಕೆ. ಪ್ರತಾಪಚಂದ್ರ ಶೆಟ್ಟರು ವಿಧಾನಪರಿಷತ್ ಸದಸ್ಯರಾದ ಬಳಿಕ ಸಭಾಪತಿಯಾದರು. ಅದರ ಹೊರತಾಗಿ ಶಾಸಕರಾಗಿದ್ದವರಿಗೆ ಸಚಿವ ಪದವಿ ಹತ್ತಿರ ಹತ್ತಿರ ಬಂದು ಕೈ ತಪ್ಪಿದ್ದೇ ಹೆಚ್ಚು.
ಎಸ್. ಬಂಗಾರಪ್ಪ, ಎಸ್.ಎಂ. ಕೃಷ್ಣ ಸರಕಾರದಲ್ಲಿ ಕೆ. ಪ್ರತಾಪಚಂದ್ರ ಶೆಟ್ಟಿ , ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ ಅವಧಿಯಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಹೆಸರು ಸಂಪುಟ ಸಚಿವರ ಪಟ್ಟಿಯಲ್ಲಿ ಅಂತಿಮ ಎಂದೇ ಸುದ್ದಿಯಾಗಿತ್ತು. ಆದರೆ ಈಡೇರಲೇ ಇಲ್ಲ. ಕುಂದಾಪುರ ಕ್ಷೇತ್ರದ ಮತದಾರರಾಗಿರುವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಲ್ಲಿ ಗೆದ್ದು ಸಚಿವರಾಗಿದ್ದರು. ಕೋಟ ಶ್ರೀನಿವಾಸ ಪೂಜಾರಿ ಅವರು ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಸಚಿವರಾಗಿದ್ದರು. ಇವರಿಬ್ಬರೂ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದವರಲ್ಲ. ಹೀಗಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದವರಿಗೆ ಸಚಿವ ಪದವಿ ಇನ್ನೂ ಕನಸಾಗಿಯೇ ಉಳಿದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?