ರಾಜ್ಯದಲ್ಲಿ ಇನ್ನು ಮೂರು ದಿನ ಮಳೆ ಸಾಧ್ಯತೆ
Team Udayavani, May 24, 2020, 8:41 PM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಅರಬ್ಬಿ ಸಮುದ್ರ ಮೇಲ್ಮೈ ಸುಳಿಗಾಳಿ ಹಾಗೂ ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರವಿವಾರ ಮಳೆಯಾಗಿದ್ದು, ಇನ್ನು 2-3 ದಿನ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಒಂದೊಮ್ಮೆ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾದರೆ ಮೇ 26ರ ಬಳಿಕ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ವಾಯುಭಾರ ಕುಸಿತ ಉಂಟಾದರೆ ಮೇ 26ರಿಂದ 31ರ ವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ. ಮೇಲ್ಮೈ ಸುಳಿಗಾಳಿಯ ಪ್ರಭಾವ ಹೆಚ್ಚಳವಾಗಿ ವಾಯುಭಾರ ಕುಸಿತವಾದರೆ ಅದರ ಆಧಾರದ ಮೇಲೆ ಮುಂಗಾರು ಮಳೆ ವಿಳಂಬ ಅಥವಾ ಅವಧಿಗೂ ಮುನ್ನವಾಗಲಿದೆಯೇ ಎಂಬುದು ತಿಳಿಯಲಿದೆ ಎಂದು ಕೆಎಸ್ಎನ್ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್