ಇಂದು ಐಐಎಂ ಸಾಮಾನ್ಯ ಪ್ರವೇಶ ಪರೀಕ್ಷೆ
Team Udayavani, Nov 27, 2022, 6:55 AM IST
ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂ) ಪ್ರವೇಶ ಪಡೆಯುವುದಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಕ್ಯಾಟ್) ಭಾನುವಾರ ದೇಶಾದ್ಯಂತ ನಡೆಯಲಿದ್ದು, 2.56 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ನ.27ರಂದು ಮಧ್ಯಾಹ್ನ 12.30ರಿಂದ 2.30ರವರೆಗೆ ಪರೀಕ್ಷೆ ನಡೆಯಲಿದೆ. ಸೂಚನೆಗಳನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕಿದೆ. ಎಲ್ಲ ಪರೀಕ್ಷೆಗಳಿಗೂ ವಿಧಿಸಿರುವ ಸೂಚನೆಗಳನ್ನೇ ಇಲ್ಲೂ ವಿಧಿಸಲಾಗಿದೆ.
ಪರೀಕ್ಷಾ ಕೇಂದ್ರದೊಳಗೆ ಬೆಳಗ್ಗೆ 11 ಗಂಟೆಗೆ ಪ್ರವೇಶ ಪಡೆಯಬೇಕಾಗಿದೆ.