
ಎರಡು ಕ್ಷೇತ್ರಗಳಿಂದ ಸ್ಪರ್ಧೆ ಅಪ್ರಸ್ತುತ: ಮೈಸೂರಿನಲ್ಲಿ ಬಿ.ವೈ.ವಿಜಯೇಂದ್ರ ಹೇಳಿದ್ದೇನು?
ಯಾರು ಏನೇ ಹೇಳಲಿ ವರುಣಾದಲ್ಲಿ ಬಿಜೆಪಿ ಗೆಲ್ಲುತ್ತದೆ... ಬಿಜೆಪಿಗೆ ಯಾವ ಕ್ಷೇತ್ರವೂ ಅಸಾಧ್ಯವಲ್ಲ...!
Team Udayavani, Mar 31, 2023, 5:02 PM IST

ಮೈಸೂರು : ವರುಣಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಎಲ್ಲಾ ವಾತಾವರಣ ಇದೆ. ಕ್ಷೇತ್ರದ ಜನ ಬಿಜೆಪಿಗೆ ಮತ ಹಾಕಲು ಉತ್ಸಾಹಕರಾಗಿದ್ದಾರೆ. ನಮ್ಮ ಪಕ್ಷದ ಸಂಘಟನೆ ಅತ್ಯತ್ತುಮವಾಗಿದೆ. ಯಾರು ಏನೇ ಹೇಳಲಿ ಬಿಜೆಪಿ ಗೆಲ್ಲುತ್ತದೆ ಎಂದು ಬಿ.ವೈ. ವಿಜಯೇಂದ್ರ ಶುಕ್ರವಾರ ವಿಶ್ವಾಸದ ಮಾತುಗಳನ್ನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯೇಂದ್ರ ಮುಖ್ಯವಲ್ಲ, ಬಿಜೆಪಿ ಮಾತ್ರ ಮುಖ್ಯ.ಕೆ.ಆರ್ ಪೇಟೆಯಲ್ಲಿ ನಾವು ಗೆಲ್ಲುತ್ತೇವೆ ಎಂಬುದು ಯಾರಿಗೆ ಗೊತ್ತಿತ್ತು.ಸ್ವತಃ ನಮಗೆ ಗೆಲ್ಲುತ್ತೇವೆ ಅಂತ ಗೊತ್ತಿರಲಿಲ್ಲ.ಅಂತಹ ಕ್ಷೇತ್ರವನ್ನೇ ನಾವು ಗೆದಿದ್ದೇವೆ. ಮತದಾರನ ವಿಶ್ವಾಸವೇ ಮುಖ್ಯ.ಯಾವ ಕ್ಷೇತ್ರವೂ ಅಸಾಧ್ಯವಲ್ಲ ಎಂದರು.
ವರುಣಾ ಕ್ಷೇತ್ರದ ಖುಣ ನನ್ನ ಮೇಲೆ ಇದೆ. ನನನ್ನು ರಾಜ್ಯಕ್ಕೆ ಪರಿಚಯ ಮಾಡಿಸಿದ್ದೇ ವರುಣಾ ಕ್ಷೇತ್ರ. ನಾನು ವರುಣಾದಿಂದ ಸ್ಪರ್ಧೆ ಮಾಡಬೇಕೊ,ಶಿಕಾರಿಪುರದಿಂದ ಸ್ಪರ್ಧೆ ಮಾಡಬೇಕೋ ಅಥವಾ ಎಲ್ಲಿಂದಲೂ ಸ್ಪರ್ಧಿಸಬಾರದು ಎಲ್ಲವನ್ನೂ ನಮ್ಮ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದರಲ್ಲಿ ವಿಜಯೇಂದ್ರ, ಯಡಿಯೂರಪ್ಪನವರು, ರಾಘವೇಂದ್ರ ಅವರ ತೀರ್ಮಾನ ಎಂಬುದು ಇರುವುದಿಲ್ಲ. ಸಂಪೂರ್ಣವಾಗಿ ಹೈಕಮಾಂಡ್ ತೀರ್ಮಾನವೇ ನಮ್ಮಲ್ಲಿ ಅಂತಿಮ ಎಂದರು.
ಇದನ್ನೂ ಓದಿ : ಈ ಬಾರಿ ವರುಣಾ ಕ್ಷೇತ್ರ ಹೈವೋಲ್ಟೇಜ್ ಅಖಾಡ…ಹಿಂದಿನ ಚುನಾವಣೆಯಲ್ಲಿ ಮತದಾರರ ಒಲವು ಹೇಗಿತ್ತು?
ನನಗೆ ವರುಣಾ ಕ್ಷೇತ್ರದಷ್ಟೇ ರಾಜ್ಯದ 223 ಕ್ಷೇತ್ರಗಳು ನನಗೆ ಮುಖ್ಯ.ಶಿಕಾರಿಪುರ ನಮ್ಮ ತಂದೆಯವರ ಕ್ಷೇತ್ರ. ಅಲ್ಲಿಂದಲೇ ನಾನು ಸ್ಪರ್ಧಿಸಬೇಕೆಂದು ತಂದೆಯವರು ಇಚ್ಚೆ.ಆ ಇಚ್ಚಯಂತೇ ಒಂದು ಸುತ್ತು ಪ್ರಚಾರ ಮುಗಿಸಿದ್ದೇನೆ. ಏಪ್ರಿಲ್ 3 ರ ನಂತರ ಮತ್ರೆ ಪ್ರಚಾರ ನಡೆಸುತ್ತೇನೆ. ನನಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುತ್ತೊ ಇಲ್ಲವೊ ಗೊತ್ತಿಲ್ಲ.ಅಂತಹದರಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುತ್ತೇನೆ ಅನ್ನುವುದು ಈಗ ಅಪ್ರಸ್ತುತ ವಿಚಾರ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು