
ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ
Team Udayavani, Mar 29, 2023, 7:37 PM IST

ಬೆಂಗಳೂರು: ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತು ಮೇ 13, ಶನಿವಾರ ಫಲಿತಾಂಶ ಪ್ರಕಟ.ಮತ ಎಣಿಕೆಗೆ ಎರಡು ದಿನ ಬೇಕೆ ?! ಏಕೆಂದು ಬಲ್ಲವರು ತಿಳಿಸುತ್ತೀರಾ ?” ಎಂದು ಖ್ಯಾತ ನಟ ಮತ್ತು ಪ್ರಜಕೀಯ ಪಕ್ಷದ ಉಪೇಂದ್ರ ಅವರು ಟ್ವೀಟ್ ಮಾಡಿದ್ದಾರೆ.
ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿದ ಕೂಡಲೇ ಉಪೇಂದ್ರ ಅವರು ಟ್ವೀಟ್ ಮಾಡಿದ್ದು, ಈ ಕುರಿತು ಸಾಮಾಜಿಕ ತಾಣಗಳಲ್ಲಿ ಭಿನ್ನ ಭಿನ್ನ ಅಭಿಪ್ರಾಯಗಳು ಬಂದಿವೆ. ಹಲವಾರು ಮಂದಿ ಉಪೇಂದ್ರ ಟ್ವೀಟ್ ಅನ್ನು ಟೀಕಿಸಿದ್ದಾರೆ.
ಟೀಕಾಕಾರ ವಿರುದ್ಧ ಕಿಡಿ ಕಾರಿ ಮತ್ತೊಂದು ಟ್ವೀಟ್ ಮಾಡಿರುವ ಉಪೇಂದ್ರ, ”ಡಿಜಿಟಲ್ ವೋಟಿಂಗ್ ಅಲ್ವಾ ? ಮತ ಎಣಿಕೆಗೆ 2 ದಿನಾ ಬೇಕಾ ? ನನಗೆ ಗೊತ್ತಿಲ್ಲಾ, ಗೊತ್ತಿದ್ದರೆ ತಿಳಿಸಿ ಅಂದೆ ಅಷ್ಟೇ…. ಅಬ್ಬಬ್ಬಾ ಏನು ಕಾಮೆಂಟ್ಸ್ ಗಳು ?! ವಾರೆ ವಾಹ್ … ವ್ಯಾಪಾರಿ ರಾಜಕೀಯ, ಭ್ರಷ್ಟಾಚಾರ, ಕುದುರೆ ವ್ಯಾಪಾರ ಇದರ ಬಗ್ಗೆ ಕಾಮೆಂಟ್ ಮಾಡಿ ನೋಡೋಣ ಅತಿ ಬುದ್ವಂತ್ರು, ದೇಶ ಪ್ರೇಮಿಗಳು, ರಾಜಕೀಯ ಪಕ್ಷಗಳ ಹಿಂಬಾಲಕರು….” ಎಂದು ಕಿಡಿ ಕಾರಿದ್ದಾರೆ.
#SupremeCourt #Election2023 #ElectionCommission @ECISVEEP pic.twitter.com/5D7jrKlhMq
— Upendra (@nimmaupendra) March 29, 2023
ಟಾಪ್ ನ್ಯೂಸ್
