ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

Team Udayavani, Oct 6, 2022, 12:02 AM IST

ಉಚ್ಚಿಲ: ವೈಭವದ ಶೋಭಾಯಾತ್ರೆ; ಶಾರದೆ, ನವದುರ್ಗೆಯರಿಗೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 10 ದಿನಗಳ ಕಾಲ ಜರಗಿದ ಉಚ್ಚಿಲ ದಸರಾ ಉತ್ಸವ 2022 ಸಂಪನ್ನಗೊಂಡಿದ್ದು, ವೈಭವದ ಶೋಭಾ ಯಾತ್ರೆಗೆ ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌ ಅವರು ಗಣ್ಯರ ಸಮ್ಮುಖದಲ್ಲಿ ಬುಧವಾರ ಸಂಜೆ ಚಾಲನೆ ನೀಡಿದರು.

ಪ್ರಧಾನ ತಂತ್ರಿ ವೇ| ಮೂ| ರಾಘವೇಂದ್ರ ತಂತ್ರಿ ಕೊರಂಗ್ರಪಾಡಿ ಮತ್ತು ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯ ಅವರ ನೇತೃತ್ವದಲ್ಲಿ ಶಾರದಾ ಮಾತೆ ಮತ್ತು ನವದುರ್ಗೆಯರ ಮೂರ್ತಿಗಳ ಶೋಭಾ ನಡೆಯಿತು. ಉಚ್ಚಿಲದಿಂದ ಹೊರಟ ಶೋಭಾಯಾತ್ರೆಯು ಪಡುಬಿದ್ರಿ, ಹೆಜಮಾಡಿ, ಉಚ್ಚಿಲ, ಮೂಳೂರು, ಕೊಪ್ಪಲಂಗಡಿ ಮಾರ್ಗವಾಗಿ ಕಾಪುವಿಗೆ ಬಂದು ಗುರುವಾರ ಮುಂಜಾನೆ ಸಮುದ್ರ ಮಧ್ಯದಲ್ಲಿ ಕೃತಕವಾಗಿ ನಿರ್ಮಿಸಲಾದ ಸಾಂಸ್ಕೃತಿಕ ನಗರದಲ್ಲಿ ಮೂರ್ತಿಗಳನ್ನು ಜಲಸ್ತಂಭನಗೊಳಿಸಲಾಯಿತು.

ಟ್ಯಾಬ್ಲೋಗಳ ರಂಗು
ಹತ್ತಾರು ವಿಧದ ಟ್ಯಾಬ್ಲೋಗಳು ಶೋಭಾಯಾತ್ರೆಗೆ ಮೆರುಗು ನೀಡಿದವು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೇರಳ ಮತ್ತು ತಮಿಳುನಾಡಿನಿಂದ ತರಿಸಲಾದ ಪೌರಾಣಿಕ ಹಿನ್ನೆಲೆ ಮತ್ತು ಸಾಂಸ್ಕೃತಿಕ ಹಿನ್ನೆಲೆ ಸಾರುವ ಟ್ಯಾಬ್ಲೋಗಳು, ನವದುರ್ಗೆಯರ ಟ್ಯಾಬ್ಲೋ, ಮೊಗವೀರ ಕುಲಗುರು, ಮೀನುಗಾರರ ಕುಲಕಸುಬು, ಜಾಗೃತಿ ಸಂದೇಶ ನೀಡುವ ಟ್ಯಾಬ್ಲೋಗಳು, ವಿವಿಧ ಹುಲಿವೇಷ ತಂಡಗಳು, ಭಜನ ತಂಡಗಳು, ಡೋಲು, ವಾದ್ಯ, ಬ್ಯಾಂಡ್‌, ನಾಸಿಕ್‌ ಬ್ಯಾಂಡ್‌, ಸಾವಿರಾರು ಬೈಕ್‌ಗಳ ಸಹಿತವಾಗಿ ಶೋಭಾಯಾತ್ರೆ ನಡೆಯಿತು.  ಪಡುಬಿದ್ರಿ, ಹೆಜಮಾಡಿ, ಉಚ್ಚಿಲ, ಕೊಪ್ಪಲಂಗಡಿ ಮತ್ತು ಕಾಪು ಬೀಚ್‌ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಹುಲಿ ವೇಷ ಕುಣಿತ ಇತ್ಯಾದಿಗಳು ವಿಶೇಷ ಮೆರುಗು ನೀಡಿದವು.

ಶಿಸ್ತುಬದ್ಧ ಶೋಭಾಯಾತ್ರೆ
ಶಿಸ್ತುಬದ್ಧವಾಗಿ ನಡೆದ ಉಚ್ಚಿಲ-ಹೆಜಮಾಡಿ – ಪಡುಬಿದ್ರಿ -ಉಚ್ಚಿಲ-ಕಾಪು ವರೆಗಿನ 28 ಕಿ.ಮೀ. ವರೆಗಿನ ಶೋಭಾಯಾತ್ರೆಯಲ್ಲಿ ಸಾವಿರಾರು ಮಂದಿ ನಡೆದೇ ಪಾಲ್ಗೊಂಡಿದ್ದರು. ಕಾಪು ಬೀಚ್‌ನಲ್ಲಿ ನಡೆದ ಜಲಸ್ತಂಭನ ಸಂದರ್ಭ ಲಕ್ಷದ ಸನಿಹ ಜನರಿದ್ದರು. ಶಿಸ್ತುಬದ್ಧ ಶೋಭಾಯಾತ್ರೆ ನಡೆದಿದ್ದು ಹಿರಿಯ ಪೊಲೀಸ್‌ ಅಧಿಕಾರಿಗಳೂ ಸೇರಿದಂತೆ ನೂರಾರು ಸಿಬಂದಿ ಬಂದೋಬಸ್ತ್ ಏರ್ಪಡಿಸಿದ್ದರು.

ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಅಮೀನ್‌, ಶಾಸಕರಾದ ಲಾಲಾಜಿ ಆರ್‌. ಮೆಂಡನ್‌, ರಘುಪತಿ ಭಟ್‌, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌, ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿ. ಅಧ್ಯಕ್ಷ ಕೆ. ಉದಯ ಕುಮಾರ್‌ ಶೆಟ್ಟಿ, ಬೆಣ್ಣೆಕುದ್ರು ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಆನಂದ ಸಿ. ಕುಂದರ್‌, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಸಹಕಾರಿ ಧುರೀಣ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು, ದ.ಕ. ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳಾದ ಸುಭಾಶ್ಚಂದ್ರ ಕಾಂಚನ್‌, ಸುಧಾಕರ ಕುಂದರ್‌, ಭರತ್‌ ಎರ್ಮಾಳು, ಮಹಿಳಾ ಸಂಘದ ಅಧ್ಯಕ್ಷೆ ಅಪ್ಪಿ ಸಾಲ್ಯಾನ್‌, ಪ್ರಮುಖರಾದ ಶಂಕರ್‌ ಸಾಲ್ಯಾನ್‌, ಮೋಹನ್‌ ಬೆಂಗ್ರೆ, ಉಮೇಶ್‌ ಟಿ. ಕರ್ಕೇರ, ಭರತ್‌ ಉಳ್ಳಾಲ, ಸತೀಶ್‌ ಕುಂದರ್‌, ಶರಣ್‌ ಮಟ್ಟು, ಶ್ರೀಪತಿ ಭಟ್‌, ಸತೀಶ್‌ ಅಮೀನ್‌ ಪಾಲ್ಗೊಂಡಿದ್ದರು.

ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆ
ಶಾರದಾ ಮಾತೆ ಮತ್ತು ನವದುರ್ಗೆಯರ ಮೂರ್ತಿಗಳನ್ನು ಇರಿಸಿದ ವಾಹನಗಳಿಗೆಹೆಲಿಕಾಪ್ಟರ್‌ ಮೂಲಕ 9 ಬಣ್ಣಗಳ ಪುಷ್ಪ ದಳಗಳೊಂದಿಗೆ ಪುಷ್ಪಾìರ್ಚನೆಗೈಯ್ಯಲಾಯಿತು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಸಂಭ್ರಮದ ಶರನ್ನವರಾತ್ರಿ ಮಹೋತ್ಸವ, ವಿಜಯದಶಮಿ ಸಂಪನ್ನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮಂಗಳೂರು ದಸರಾ: ಶೋಭಾಯಾತ್ರೆ: ನಗರವಿಡೀ ಶೋಭಾಯಮಾನ

ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ

ಮೈಸೂರಿನಲ್ಲಿ ವೈಭವದ ಜಂಬೂ ಸವಾರಿ: ಅರ್ಜುನನಿಗೆ ಜೈಕಾರ; ಹಲವು ತಂಡಗಳ ಕಲಾಪ್ರದರ್ಶನ

13

ನಾಳೆ ನಾಡಹಬ್ಬದ ಜಂಬೂ ಸವಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.